Heatwave Forecast: ಉತ್ತರ ರಾಜ್ಯಗಳಲ್ಲಿ ಬಿಸಿಗಾಳಿ ಎಚ್ಚರಿಕೆ: ಎಲ್ಲಿ? ಯಾವಾಗಾ?
ದೇಶದಲ್ಲಿ ಹಲವೆಡೆ ಭಾರೀ ಮಳೆ ಹಾಗೂ ಹಿಮಪಾತವಾಗುತ್ತಿದೆ. ಅಲ್ಲದೆ ತಾಪಮಾನ ಕೂಡ ಹಲವೆಡೆ ಜನರನ್ನು ಹೈರಾಣಾಗಿಸಿದೆ. ಇದರ ನಡುವೆ ಕೆಲ ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹೌದು.... ದೇಶದ ಉತ್ತರ ರಾಜ್ಯಗಳಲ್ಲಿ ಹೀಟ್‌ವೇವ್ ಸಾಧ್ಯತೆ ಇದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಹೀಗಾಗಿ ಜನ ಸುಖಾಸುಮ್ಮನೆ ಮನೆ ಬಿಟ್ಟು ಹೊರಬಾರಂತೆ ಸೂಚಿಸಲಾಗಿದೆ. ಹಾಗಾದರೆ ಯಾವ ಭಾಗಗಳಲ್ಲಿ ಬಿಸಿಗಾಳಿ ಬೀಸಲಿದೆ? ಯಾವಾಗಾ ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.

ದೇಶದ ಪಶ್ಚಿಮ ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ದೆಹಲಿಯ ಕೆಲವು ಭಾಗಗಳಲ್ಲಿ ಹೀಟ್ ವೇವ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದಲ್ಲದೆ ಪೂರ್ವ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ವಿವಿಧ ಭಾಗಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಈ ರಾಜ್ಯಗಳಲ್ಲಿ ಹೀಟ್‌ವೇವ್ ಎಚ್ಚರಿಕೆ
ಬಯಲು ಸೀಮೆಯಲ್ಲಿ ತಾಪಮಾನ ತೀವ್ರಗತಿಯಲ್ಲಿ ಏರಿಕೆಯಾಗುವ ಸಾಧ್ಯತೆ ಇದ್ದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಮೇ 17ರಿಂದ 20ರ ನಡುವೆ ಹರಿಯಾಣ, ರಾಜಸ್ಥಾನ, ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ವಿವಿಧ ಭಾಗಗಳು ಸೇಇದಂತೆ ದೆಹಲಿಯ ಹಲವೆಡೆ ಬಿಸಿಗಾಳಿ ಬೀಸಲಿದೆ ಎಂದು ಐಎಂಡಿ ಹೇಳಿದೆ.

ಮಳೆಯೊಂದಿಗೆ ಹೇಟ್‌ವೇವ್
ಉತ್ತರದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಶಾಖದ ನಡುವೆ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಹವಾಮಾನದಲ್ಲಿ ತ್ವರಿತ ಬದಲಾವಣೆಗಳು ಕಂಡುಬಂದಿವೆ. ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ನವೀಕರಣದ ಪ್ರಕಾರ, ಮುಂದಿನ ಏಳು ದಿನಗಳ ಕಾಲ ದಕ್ಷಿಣ ಭಾರತದಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಹಿಮಾಲಯ ಪ್ರದೇಶದಲ್ಲಿ ಪಾಶ್ಚಿಮಾತ್ಯ ಅಡಚಣೆ ಸಕ್ರಿಯವಾಗಿದ್ದು ಮೇ 17ರಿಂದ 19ರವರೆಗೆ ಈ ಭಾಗದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಈ ಬಾರಿಯ ಮಾನ್ಸೂನ್ ಈಗಾಗಲೇ ಕೆಲವು ದಕ್ಷಿಣ ರಾಜ್ಯಗಳಲ್ಲಿ ಸಕ್ರಿಯವಾಗಿದೆ. ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ, ಲಕ್ಷದ್ವೀಪ ಮತ್ತು ದಕ್ಷಿಣ ಕರ್ನಾಟಕದಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣ ಮತ್ತು ರಾಯಲಸೀಮಾದಲ್ಲಿ ಈ ಅವಧಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

IMD ಪ್ರಕಾರ, ಮೇ 16 ರಂದು ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಒಡಿಶಾ ಮತ್ತು ಗುಜರಾತ್‌ನಲ್ಲಿ ಗುಡುಗು ಮತ್ತು ಬಲವಾದ ಗಾಳಿಯೊಂದಿಗೆ ಲಘು ಮಳೆಯಾಗುವ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮೇ 16-20 ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲಿನ ಕೆಲವು ಪ್ರದೇಶಗಳಲ್ಲಿ ಮೇ 16 ಮತ್ತು ಮೇ 20 ರಂದು ತಮಿಳುನಾಡು ಮತ್ತು ಮೇ 20 ರಂದು ಕೇರಳದಲ್ಲಿ ಅತಿ ಹೆಚ್ಚು ಮಳೆ ಬೀಳಬಹುದು. ಮೇ 19 ರಿಂದ ಮೇ 22 ರವರೆಗೆ ಒಡಿಶಾ, ಬಿಹಾರ, ಜಾರ್ಖಂಡ್ ಮತ್ತು ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ಗುಡುಗು ಸಹಿತ ಲಘುವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಈ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಏಳು ದಿನಗಳಲ್ಲಿ ಗುಡುಗು ಮತ್ತು ಬಲವಾದ ಗಾಳಿಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೇ IMD ಪ್ರಕಾರ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು.
ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ
ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮೇ 19ರಿಂದ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications