Heavy Rain Alert: ಈ ಭಾಗಗಳಲ್ಲಿ ಧಾರಾಕಾರ ಮಳೆ: ರೆಡ್ ಅಲರ್ಟ್ ನೀಡಿದ ಐಎಂಡಿ, ವೆದರ್ ರಿಪೋರ್ಟ್ !

Heavy Rain Alert: ಭಾರತದಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಚಂಡಮಾರುತದ ಪ್ರಸರಣದಿಂದಾಗಿ ದೇಶದಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಇನ್ನೊಂದು ವಾರ ಮಳೆ ಇದೇ ರೀತಿ ಮುಂದುವರಿಯುವ ಸಾಧ್ಯತೆ ಇದೆ. ಮಹಾರಾಷ್ಟ್ರ ಹಾಗೂ ಹಿಮಾಚಲ ಪ್ರದೇಶದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ದೇಶದಲ್ಲಿ ಹವಾಮಾನ ಹೇಗಿದೆ ಎನ್ನುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ದೆಹಲಿ ಹಾಗೂ ಮುಂಬೈ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ದೇಶದಾದ್ಯಂತ ಮಳೆ ಆರ್ಭಟ ಜೋರಾಗಿದ್ದು, ಉತ್ತರಾಖಂಡದ ಹಿಮಾಚಲ ಪ್ರದೇಶದಲ್ಲಿ ಭೂಕುಸಿತದ ಎಚ್ಚರಿಕೆ ಕೊಡಲಾಗಿದೆ. ಈ ಬಾರಿ ಉತ್ತರಾಖಂಡದಲ್ಲಿ ಮಳೆಯಿಂದ ಹಾಗೂ ಮೇಘಸ್ಫೋಟದಿಂದ ಭಾರೀ ಅನಾಹುತಗಳು ಸಂಭವಿಸಿದ್ದು. ಮುಂಬೈನಲ್ಲೂ ಮಳೆಯಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದ ಹಲವಾರು ಪ್ರದೇಶಗಳಿಗೆ ಭೂಕುಸಿತದ ಎಚ್ಚರಿಕೆ ನೀಡಲಾಗಿದೆ.

Heavy Rain Alert IMD Issues Red Alert These Areas to Receive Intense Showers

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ಆಗಸ್ಟ್‌ 17ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಡೆಹ್ರಾಡೂನ್, ಬಾಗೇಶ್ವರ ಸೇರಿದಂತೆ ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರಕಾಶಿ, ಚಮೋಲಿ, ರುದ್ರಪ್ರಯಾಗ ಹಾಗೂ ನೈನಿತಾಲ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈ ಹಾಗೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಾನ್ಸೂನ್‌ ಚುರುಕು ಪಡೆದುಕೊಂಡಿದ್ದು ಭಾರೀ ಮಳೆ ಮುಂದುವರಿದಿದೆ. ಮುಂಬೈನಲ್ಲಿ ಶನಿವಾರ ನಿರಂತರ ಮಳೆಯಾಗಿದ್ದು, ಈ ನಗರದ ಪ್ರಮುಖ ಪ್ರದೇಶಗಳು ಜಲಾವೃತವಾಗಿವೆ. ಮುಂಬೈನ ರೈಲ್ವೆ ನಿಲ್ದಾಣದಂತಹ ಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ ಮುಳುಗಿಹೋಗಿವೆ. ವಿಖ್ರೋಲಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ. ಈ ರಾಜ್ಯದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರತ್ನಗಿರಿ, ರಾಯಗಡ್, ಮುಂಬೈ ನಗರ, ಮುಂಬೈ ಉಪನಗರ, ಥಾಣೆ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ನೀಡಿದೆ.

ಉತ್ತರಪ್ರದೇಶದಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಇನ್ನೂ ಎರಡು ದಿನಗಳ ಕಾಲ ಈ ಭಾಗದಲ್ಲಿ ಮಳೆ ಇರಲಿದೆ ಎಂದು ಹೇಳಲಾಗಿದೆ. ಇನ್ನು ದಕ್ಷಿಣ ಭಾರತದ ವಿವಿಧ ಭಾಗದಲ್ಲೂ ಮಳೆ ಮುಂದುವರಿದಿದೆ. ಈ ಭಾಗದಲ್ಲಿ ಆಗಸ್ಟ್‌ 21ರ ವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+