Imd Weather Forecast: ದೇಶದ ವಿವಿಧ ಭಾಗದಲ್ಲಿ ಭಾರೀ ಮಳೆ: ಈ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ!

Imd Weather Forecast: ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಐದು ದಿನಗಳ ಕಾಲ ರಣಭೀಕರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ರಾಯಲಸೀಮಾಗಳಲ್ಲಿ ಮುಂದಿನ ಒಂದು ವಾರದ ಅವಧಿಗೆ ಮಳೆ ಆಗಲಿದೆ. ಅಕ್ಟೋಬರ್ 28 ರವರೆಗೆ ವಿವಿಧ ಭಾಗದಲ್ಲಿ ಮಳೆ ತೀವ್ರತೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy Rain Alert IMD Warns of Flood Situation in Parts of the Country

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ ಪ್ರದೇಶದಲ್ಲಿ ಮಳೆ ಆರ್ಭಟವು ಭಾರೀ ಜೋರಾಗಿದೆ. ಈ ಭಾಗದಲ್ಲಿ ಒಂದೇ ದಿನದಲ್ಲಿ 21 ಸೆಂ.ಮೀ.ಗಿಂತ ಹೆಚ್ಚಿನ ಮಳೆಯಾಗಿದೆ. ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಕಂಡುಬರುವ ಕಡಿಮೆ ಒತ್ತಡದ ಪ್ರದೇಶವು ಕರಾವಳಿ ದಾಟಿದ ನಂತರ ತಮಿಳುನಾಡಿನ ಉತ್ತರ ಕರಾವಳಿ ತಲುಪಿದ್ದು, ಇದು ಈ ವಿವಿಧ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿ ಮಾಡಿದೆ. ಕರಾವಳಿ ಕರ್ನಾಟಕ, ಕೇರಳ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ಪ್ರವಾಹ ಭೀತಿ: ಇನ್ನು ವಾಯುಭಾರ ಕುಸಿತದ ಕಾರಣದಿಂದ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ವಿವಿಧ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಆತಂಕ ಶುರುವಾಗಿದೆ. ಹೀಗಾಗಿ, ಆಂಧ್ರಪ್ರದೇಶ ಸೇರಿದಂತೆ ವಿವಿಧ ಭಾಗದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮಾಡಲಾಗಿದೆ.

ಮುಂದಿನ ಐದು ದಿನಗಳವರೆಗೆ ದಕ್ಷಿಣ ಭಾರತದಾದ್ಯಂತ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ. ವಾಯುಭಾರದ ತೀವ್ರತೆಯ ಆಧಾರದ ಮೇಲೆ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಐಎಂಡಿ ದಿಢೀರ್ ಪ್ರವಾಹದ ಎಚ್ಚರಿಕೆಗಳನ್ನು ನೀಡಿದೆ.

ಆಂಧ್ರಪ್ರದೇಶದ ಗುಂಟೂರು, ಪ್ರಕಾಶಂ ಮತ್ತು ನೆಲ್ಲೂರು ಸೇರಿದಂತೆ ವಿವಿಧ ಜಿಲ್ಲೆಗಳು, ರಾಯಲಸೀಮಾದ ಚಿತ್ತೂರು ಮತ್ತು ಕರ್ನೂಲ್ ಅಲ್ಲೂ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಭಾಗದಲ್ಲೂ ಸಹ ಮಳೆ ಆರ್ಭಟ ಮುಂದುವರಿದಿದೆ. ಅಕ್ಟೋಬರ್ 23 ಮತ್ತು 27ರ ನಡುವೆ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಮುಂದಿನ ಐದು ದಿನಗಳವರೆಗೆ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢ, ಕೊಂಕಣ, ಗೋವಾ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+