ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಯುಭಾರ ಕುಸಿತ; ಮುಂದಿನ 3-4 ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ

By ಒನ್‌ಇಂಡಿಯಾ ಡೆಸ್ಕ್
|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 13: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಪ್ರಭಾವದಿಂದಾಗಿ ಕೆಲವು ರಾಜ್ಯಗಳಲ್ಲಿ ಅಧಿಕ ಮಟ್ಟದ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಮೂರ್ನಾಲ್ಕು ದಿನಗಳವರೆಗೂ ಕೆಲವು ರಾಜ್ಯಗಳಲ್ಲಿ ಮಳೆ ಪ್ರಭಾವ ಹೆಚ್ಚಾಗಿರಲಿದೆ ಎಂದು ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ತೀವ್ರವಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿವೆ ಎಂದು ಮಾಹಿತಿ ನೀಡಿದೆ. ಇದರ ಪರಿಣಾಮವಾಗಿ ಸೋಮವಾರದಿಂದ ಮಹಾರಾಷ್ಟ್ರ, ಕೊಂಕಣ ಒಳಗೊಂಡಂತೆ ಹಲವೆಡೆ ಹೆಚ್ಚಿನ ಮಳೆ ಆರಂಭವಾಗುವುದು ಎಂದು ತಿಳಿಸಿದೆ.

 19 ವರ್ಷಗಳಲ್ಲೇ ಈ ಬಾರಿ ಆಗಸ್ಟ್‌ನಲ್ಲಿ ಕನಿಷ್ಠ ಮಳೆ ಪ್ರಮಾಣ ದಾಖಲು 19 ವರ್ಷಗಳಲ್ಲೇ ಈ ಬಾರಿ ಆಗಸ್ಟ್‌ನಲ್ಲಿ ಕನಿಷ್ಠ ಮಳೆ ಪ್ರಮಾಣ ದಾಖಲು

ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಟ್ಟದ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಹಾರ, ದೆಹಲಿ, ಒಡಿಶಾ ಹಾಗೂ ಮಹಾರಾಷ್ಟ್ರದಲ್ಲಿ ಈಗಾಗಲೇ ಅಧಿಕ ಮಳೆ ದಾಖಲಾಗಿದೆ. ಮುಂದೆ ಓದಿ...

 ಮಹಾರಾಷ್ಟ್ರದಲ್ಲಿ ಅಧಿಕ ಮಳೆ

ಮಹಾರಾಷ್ಟ್ರದಲ್ಲಿ ಅಧಿಕ ಮಳೆ

ವಾಯುಭಾರ ಕುಸಿತದಿಂದಾಗಿ ಮಹಾರಾಷ್ಟ್ರದಲ್ಲಿ ಅಧಿಕ ಮಳೆಯಾಗುತ್ತಿದ್ದು, ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರಾ, ಕೊಲ್ಲಾಪುರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಬೈ, ಥಾಣೆ, ವಾರ್ಧಾ, ಪಾಲ್ಗಾರ್, ಸಿಂಧುದುರ್ಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳವರೆಗೂ ಈ ಪ್ರದೇಶಗಳಲ್ಲಿ ಅಧಿಕ ಮಳೆ ಮುಂದುವರೆಯುವುದಾಗಿ ತಿಳಿಸಿದೆ.

ಪಶ್ಚಿಮ ಮಹಾರಾಷ್ಟ್ರದಲ್ಲಿ ಹಾಗೂ ಕೊಂಕಣ ಪ್ರದೇಶದಲ್ಲಿ ಮಳೆ ತೀವ್ರತೆ ಅಧಿಕವಾಗುವುದಾಗಿ ಹೇಳಿದ್ದು, ಮಂಗಳವಾರ ಹಾಗೂ ಬುಧವಾರ ಭಾರೀ ಮಳೆಯಾಗುವುದಾಗಿ ತಿಳಿಸಿದೆ. ಮಹಾರಾಷ್ಟ್ರದ ರಾಯಗಢದಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
 ಒಡಿಶಾದಲ್ಲಿ ಭಾರೀ ಮಳೆ ಮುಂದುವರಿಕೆ

ಒಡಿಶಾದಲ್ಲಿ ಭಾರೀ ಮಳೆ ಮುಂದುವರಿಕೆ

ವಾಯುಭಾರದ ಪರಿಣಾಮ ಒಡಿಶಾದಲ್ಲಿ ತೀವ್ರವಾಗಿದೆ. ಕಳೆದ ಎರಡು ದಿನಗಳಿಂದ ಒಡಿಶಾದಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವುದಾಗಿ ಮಾಹಿತಿ ನೀಡಿದೆ. ಸೋಮವಾರ ಮಳೆ ಇನ್ನಷ್ಟು ತೀವ್ರವಾಗಲಿರುವುದಾಗಿ ತಿಳಿಸಿದೆ.

ಶನಿವಾರ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸೃಷ್ಟಿಯಾಗಿತ್ತು. ಇದರಿಂದಾಗಿ ಒಡಿಶಾದಲ್ಲಿ ಭಾರೀ ಮಳೆ ಆಗುತ್ತಿದ್ದು, ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕರಾವಳಿ ತೀರಗಳಲ್ಲಿ ಎಚ್ಚರಿಕೆ ರವಾನಿಸಲಾಗಿದೆ. ಇದೀಗ ಒಡಿಶಾದ ಏಳು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ.
ಪುರಿ, ಖೋರ್ದಾ, ಜಗತ್‌ಸಿಂಗ್‌ಪುರ, ಕೇಂದ್ರಪಾರಾ, ಧೇಂಕಾನಲ್, ಜೈಪುರ, ಭದ್ರಕ್ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್

 ಈ ರಾಜ್ಯಗಳಲ್ಲಿ ಮೂರ್ನಾಲ್ಕು ದಿನ ಮಳೆ ಸಾಧ್ಯತೆ

ಈ ರಾಜ್ಯಗಳಲ್ಲಿ ಮೂರ್ನಾಲ್ಕು ದಿನ ಮಳೆ ಸಾಧ್ಯತೆ

ಒಡಿಶಾ, ಮಹಾರಾಷ್ಟ್ರ ಹೊರತುಪಡಿಸಿ ಪಂಜಾಬ್, ಹರಿಯಾಣ, ದೆಹಲಿಯಲ್ಲಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವುದಾಗಿ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 15ರವರೆಗೂ ಉತ್ತರಾಖಂಡದಲ್ಲಿ, ಸೆಪ್ಟೆಂಬರ್ 13ರಂದು ಉತ್ತರ ಪ್ರದೇಶ, ಹಿಮಾಲಚ ಪ್ರದೇಶ, ಜಮ್ಮು, ರಾಜಸ್ಥಾನದಲ್ಲಿ ಮಳೆಯಾಗುವುದಾಗಿ ಮಾಹಿತಿ ನೀಡಿದೆ. ಸೆಪ್ಟೆಂಬರ್ 16ರವರೆಗೂ ಬಿಹಾರದಲ್ಲಿ ವ್ಯಾಪಕ ಮಳೆಯಾಗುವುದಾಗಿ ಹೇಳಿದೆ. ಈ ವಾರವಿಡೀ ದೆಹಲಿಯಲ್ಲಿ ಮಳೆಯಾಗುವುದಾಗಿ ತಿಳಿಸಿದೆ.

ಮುಂದಿನ ಐದು ದಿನಗಳವರೆಗೆ ಕೆಲವು ರಾಜ್ಯಗಳಲ್ಲಿ ಮಳೆ ಮುಂದುವರೆಯುತ್ತದೆ. ಕರ್ನಾಟಕದ ಕರಾವಳಿ, ಆಂಧ್ರಪ್ರದೇಶ, ತೆಲಂಗಾಣ, ಕೇರಳದಲ್ಲಿ ಮುಂದಿನ ಐದು ದಿನಗಳವರೆಗೂ ಮಳೆ ಪ್ರಭಾವ ಇರಲಿದೆ ಎಂದು ತಿಳಿಸಿದೆ.

 ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಮುಂದಿನ ಮೂರು ದಿನ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Recommended Video

ಅಧಿವೇಶನಕ್ಕೆ ಚಕ್ಕಡಿ ಗಾಡಿಯಲ್ಲಿ ಬಂದ ಕಾಂಗ್ರೆಸ್‌ ನಾಯಕರು.. | Oneindia Kannada

English summary
India Meteorological Department has predicted heavy rainfall in these states in next three-four days,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X