ಕರ್ನಾಟಕದ ಒಳನಾಡು ಹಾಗೂ ಕೇರಳದಲ್ಲಿ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು, ಮೇ 7: ಕರ್ನಾಟಕದ ಒಳನಾಡು ಹಾಗೂ ಕೇರಳದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Recommended Video
ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯದಲ್ಲಿ ಗುರುವಾರ ರಾತ್ರಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.ಈಶಾನ್ಯ ಭಾರತದ ಮೇಲೆ ಚಂಡ ಮಾರುತ ಅಪ್ಪಳಿಸಲಿದ್ದು, ಗುಡುಗು ಸಹಿತ ಮಳೆಯಾಗಲಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂಡಮಾನ್ ಬಳಿ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಆದರೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶವೂ ಏರಿಕೆಯಾಗಿದೆ.
ಬೆಂಗಳೂರು ನಗರ, ಬೆಳ್ತಗಂಡಿ, ಧರ್ಮಸ್ಥಳ, ಉಪ್ಪಿನಂಗಡಿ, ಮಡಿಕೇರಿ, ಬೇಲೂರು, ಅರಕಲಗೂಡು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ. ಮೂರು ದಿನ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಮಳೆಯಾಗಲಿದೆ. ಮೇ ತಿಂಗಳ ಆರಂಭದಲ್ಲಿ ಬಿಸಿಲ ಧಗೆ ಜೋರಾಗಿದೆ.
ಬುಧವಾರ ಕಲಬುರಗಿಯಲ್ಲಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ವಿಜಯಪುರದಲ್ಲಿ 41, ರಾಯಚೂರಿನಲ್ಲಿ 40, ಬೀದರ್‌ನಲ್ಲಿಯೂ 40 ಡಿಗ್ರಿ ತಾಪಮಾನ ದಾಖಲಾಗಿದೆ.

ಶುಕ್ರವಾರ ಕೇರಳದಲ್ಲಿ ಗುಡುಗು ಸಹಿತ ಮಳೆ
ಶುಕ್ರವಾರ ಕೇರಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.ಹಾಗೆಯೇ ಅರುಣಾಚಲ ಪ್ರದೇಶ, ಮಣಿಪುರ, ಮಿಜೋರಾಂ, ತ್ರಿಪುರ, ಮೇಘಾಲಯ, ನಾಗಾಲ್ಯಾಂಡ್, ಪಶ್ಚಿಮ ಬಂಗಾಳದಲ್ಲೂ ಮಳೆಯಾಗಲಿದೆ.

ತಮಿಳುನಾಡು, ತೆಲಂಗಾಣದಲ್ಲೂ ಮಳೆ
ತಮಿಳುನಾಡು, ಕರ್ನಾಟಕದ ಕರಾವಳಿ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಜಾರ್ಖಂಡ್, ಬಿಹಾರ, ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್
ಹರ್ಯಾಣಾ, ಹಿಮಾಚಲಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ, ಚತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.

ಕರ್ನಾಟಕದಲ್ಲಿ ಮೂರು ದಿನ ಮಳೆ
ಮೇ 7, 8 ಮತ್ತು 11ರಂದು ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
-
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Tea: ಟೀ ವಿಚಾರಕ್ಕೆ ಅತ್ತೆ - ಸೊಸೆ ಜಗಳ: ಸಣ್ಣ ಮಕ್ಕಳ ಮುಂದೆಯೇ ಸೊಸೆ ಕೊಂದ ಅತ್ತೆ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು











Click it and Unblock the Notifications