• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿಯ 20 ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ: ಉತ್ತರಾಖಂಡದಲ್ಲಿ ರೆಡ್ ಅಲರ್ಟ್

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 16: ಭಾರಿ ಮಳೆಯಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ಅನಾಹುತ ಸಂಭವಿಸಿದೆ. ಇಂದು ಕೂಡ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಯುಪಿ-ಉತ್ತರಾಖಂಡ್‌ನ ಹಲವೆಡೆ ಇಂದು ಕೂಡ ಧಾರಾಕಾರ ಮಳೆಯಾಗಲಿದೆ. ಉತ್ತರ ಪ್ರದೇಶದ 20 ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆಯನ್ನು IMD ವ್ಯಕ್ತಪಡಿಸಿದೆ. ಉತ್ತರಪ್ರದೇಶದ ಲಕ್ನೋದಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನದ ಮೇಲೆ ಕೆಟ್ಟ ಪರಿಣಾಮ ಬೀರಿದೆ.

ಹೆಚ್ಚುವರಿ ಮಳೆಯಿಂದಾಗಿ ಲಕ್ನೋದಲ್ಲಿ 12 ನೇ ತರಗತಿಯವರೆಗಿನ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ. ಅನೇಕ ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳು ಸಹ ಇಂದು ಮುಚ್ಚಲ್ಪಟ್ಟಿವೆ. ಲಕ್ನೋದಲ್ಲಿ ಮಾತ್ರ ಶಾಲೆ ಮುಚ್ಚಲಾಗಿದೆ. ಮಳೆಯ ಮುನ್ಸೂಚನೆಯಿಂದಾಗಿ ಲಕ್ನೋದಲ್ಲಿ ತಾಪಮಾನದಲ್ಲಿ ಕುಸಿತ ಕಂಡುಬಂದಿದೆ. ಇದರಿಂದಾಗಿ ಜನರು ಶಾಖದಿಂದ ಮುಕ್ತರಾಗಿದ್ದಾರೆ.

ಬೆಂಗಳೂರಿನ ಮಳೆ, ಪ್ರವಾಹ; ಐಐಎಸ್‌ಸಿ ಮಾತು ಕೇಳಿದ್ದರೆ?ಬೆಂಗಳೂರಿನ ಮಳೆ, ಪ್ರವಾಹ; ಐಐಎಸ್‌ಸಿ ಮಾತು ಕೇಳಿದ್ದರೆ?

ಉತ್ತರಾಖಂಡದಲ್ಲಿ ಇಂದು ಆರೆಂಜ್ ಅಲರ್ಟ್

ಉತ್ತರಾಖಂಡದಲ್ಲಿ ಇಂದು ಆರೆಂಜ್ ಅಲರ್ಟ್

ಉತ್ತರಾಖಂಡದಲ್ಲಿ ಇಂದು ಆರೆಂಜ್ ಅಲರ್ಟ್ ಹಾಗೂ ಸೆಪ್ಟೆಂಬರ್ 17-18ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇಂದು ಡೆಹ್ರಾಡೂನ್, ಹರಿದ್ವಾರ, ತೆಹ್ರಿ, ಉತ್ತರಕಾಶಿ ಮತ್ತು ರುದ್ರಪ್ರಯಾಗದಲ್ಲಿ ಹೆಚ್ಚುವರಿ ಮಳೆಯಾಗುವ ಸಾಧ್ಯತೆ ಇದೆ. ಮನೆಯಿಂದ ಹೊರಗೆ ಕಾಲಿಡುವ ಮುನ್ನ ಹವಾಮಾನದ ಬಗ್ಗೆ ತಿಳಿದುಕೊಳ್ಳುವಂತೆ ಜನರಿಗೆ ಸೂಚಿಸಲಾಗಿದೆ.

ಲಕ್ನೋದಲ್ಲಿ ಮಳೆಗೆ ಗೋಡೆ ಕುಸಿತ: ಒಂಬತ್ತು ಜನ ಸಾವು

ಲಕ್ನೋದಲ್ಲಿ ಮಳೆಗೆ ಗೋಡೆ ಕುಸಿತ: ಒಂಬತ್ತು ಜನ ಸಾವು

ರಾಜಧಾನಿ ದೆಹಲಿಯಲ್ಲಿ ಇಂದು ಮಳೆಯಾಗಬಹುದು. ತಾಪಮಾನ 32 ಡಿಗ್ರಿ ಮತ್ತು ಕನಿಷ್ಠ ತಾಪಮಾನ 28 ಡಿಗ್ರಿಗಳಷ್ಟು ಇದೆ. ಮಳೆಯ ಜೊತೆಗೆ, ತಂಪಾದ ಗಾಳಿ ಕೂಡ ಬೀಸಬಹುದು. ಆದರೂ ಈ ಗಾಳಿ ಹಗುರವಾಗಿರುತ್ತದೆ.

ಲಕ್ನೋದಲ್ಲಿ ಭಾರೀ ಮಳೆಯಿಂದಾಗಿ ಸೇನಾ ಆವರಣದ ಗಡಿ ಗೋಡೆ ಕುಸಿದು ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ (ಸೆಪ್ಟೆಂಬರ್ 16) ತಿಳಿಸಿದ್ದಾರೆ. ಅವಶೇಷಗಳಿಂದ ಒಬ್ಬ ವ್ಯಕ್ತಿಯನ್ನು ಜೀವಂತವಾಗಿ ಹೊರತೆಗೆಯಲಾಗಿದೆ ಎಂದು ಅವರು ಹೇಳಿದರು.

ಯೋಗಿ ಆದಿತ್ಯನಾಥ್ ಪರಿಹಾರ ಘೋಷಣೆ

"ಕೆಲವು ಕಾರ್ಮಿಕರು ದಿಲ್ಕುಶಾ ಪ್ರದೇಶದಲ್ಲಿನ ಆರ್ಮಿ ಎನ್‌ಕ್ಲೇವ್‌ನ ಹೊರಗೆ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ರಾತ್ರಿಯ ಮಳೆಯಿಂದಾಗಿ, ಆರ್ಮಿ ಎನ್‌ಕ್ಲೇವ್‌ನ ಗಡಿ ಗೋಡೆ ಕುಸಿದಿದೆ" ಎಂದು ಜಂಟಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಪಿಯೂಷ್ ಮೊರ್ಡಿಯಾ ಹೇಳಿದ್ದಾರೆ. "ನಾವು ಮುಂಜಾನೆ 3:00 ರ ಸುಮಾರಿಗೆ ಸ್ಥಳಕ್ಕೆ ತಲುಪಿದ್ದೇವೆ. ಒಂಬತ್ತು ದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಯಿತು ಮತ್ತು ಒಬ್ಬ ವ್ಯಕ್ತಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ" ಎಂದು ಅವರು ಹೇಳಿದರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಸಾವನ್ನಪ್ಪಿದವರಿಗೆ 4 ಲಕ್ಷ ರೂಪಾಯಿ ಮತ್ತು ಗಾಯಾಳುಗಳ ಚಿಕಿತ್ಸೆಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು.

ಭಾರೀ ಮಳೆ ಮುನ್ಸೂಚನೆ

ಭಾರೀ ಮಳೆ ಮುನ್ಸೂಚನೆ

ಮತ್ತೊಂದೆಡೆ, ಛತ್ತೀಸ್‌ಗಢ, ಮಧ್ಯಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಗುಜರಾತ್‌ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಇಂದಿಗೂ ಮಳೆಯಾಗಬಹುದು ಮತ್ತು ಪೂರ್ವ ರಾಜಸ್ಥಾನದಲ್ಲಿ ಸ್ವಲ್ಪ ಮಳೆಯಾಗಬಹುದು.

ಖಾಸಗಿ ಹವಾಮಾನ ಮಾಹಿತಿ ಸಂಸ್ಥೆ ಸ್ಕೈಮೆಟ್ ಮುಂದಿನ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಕೇರಳ, ತಮಿಳುನಾಡು, ರಾಯಲಸೀಮಾ, ತೆಲಂಗಾಣ, ಛತ್ತೀಸ್‌ಗಢ, ಉತ್ತರಾಖಂಡ, ಅಸ್ಸಾಂ, ಸಿಕ್ಕಿಂನಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಿದೆ.

English summary
Indian Meteorological Department has said that heavy rain is likely to occur in many states of the country today as well.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X