• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಈ ನಾಲ್ಕು ರಾಜ್ಯಗಳಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

By ಒನ್‌ಇಂಡಿಯಾ ಡೆಸ್ಕ್
|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 15: ಮುಂಗಾರು ಪ್ರಭಾವದಿಂದ ಹಾಗೂ ವಾಯುಭಾರ ಕುಸಿತದ ಪರಿಣಾಮವಾಗಿ ಸೆಪ್ಟೆಂಬರ್ 15 ಹಾಗೂ 16ರಂದು ಕೆಲವು ರಾಜ್ಯಗಳು ಅಧಿಕ ಮಟ್ಟದ ಮಳೆಗೆ ಸಾಕ್ಷಿಯಾಗಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಜರಾತ್, ಮಧ್ಯ ಪ್ರದೇಶದಲ್ಲಿ ಮುಂದಿನ ಎರಡು ದಿನಗಳಲ್ಲಿ ಅಧಿಕ ಮಳೆಯಾಗಲಿದೆ. ಇದರೊಂದಿಗೆ ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ 16ರಂದು ಭಾರೀ ಮಳೆಯಾಗಲಿದೆ. ಇದರಿಂದ ಆಯಾ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಲಿದೆ ಎಂದು ಮಾಹಿತಿ ನೀಡಿದೆ.

ಸೆ.18ರವರೆಗೂ ಈ 10 ರಾಜ್ಯಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆಸೆ.18ರವರೆಗೂ ಈ 10 ರಾಜ್ಯಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ

ಛತ್ತೀಸ್‌ಗಡ, ಪಶ್ಚಿಮ ಬಂಗಾಳ ಹಾಗೂ ಒಡಿಶಾದ ಒಳನಾಡಿನಲ್ಲಿ ಬುಧವಾರ ಹೆಚ್ಚಿನ ಮಳೆಯಾಗಿ ಆನಂತರ ಮಳೆ ಪ್ರಮಾಣ ತಗ್ಗಲಿದೆ ಎಂದು ಅಂದಾಜು ಮಾಡಿದೆ.

ಉತ್ತರ ಕೊಂಕಣ, ಮಧ್ಯ ಮಹಾರಾಷ್ಟ್ರ, ಪೂರ್ವ ಮಧ್ಯ ಪ್ರದೇಶದಲ್ಲಿ ಸೆಪ್ಟೆಂಬರ್ 15ರಂದು ಹೆಚ್ಚಿನ ಮಳೆಯಾಗಲಿದೆ ಎಂದು ತಿಳಿಸಿದೆ. ಸದ್ಯ ವಾಯುಭಾರ ಕುಸಿತದ ಪರಿಣಾಮದಿಂದಾಗಿ ಗುಜರಾತ್, ಮಧ್ಯ ಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ- ಈ ನಾಲ್ಕು ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆಯನ್ನು ನೀಡಿದೆ. ಮುಂದೆ ಓದಿ...

ಮುಂದಿನ 2 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಮುಂದಿನ 2 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ

 ಗುಜರಾತ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ

ಗುಜರಾತ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ

ವಾಯುಭಾರ ಕುಸಿತದ ತೀವ್ರ ಪ್ರಭಾವದಿಂದಾಗಿ ಗುಜರಾತ್‌ನಲ್ಲಿ ಭಾನುವಾರದಿಂದಲೂ ಭಾರೀ ಮಳೆಯಾಗುತ್ತಿದ್ದು, ರಾಜ್‌ಕೋಟ್ ಹಾಗೂ ಜಮ್ನಾ ನಗರದಲ್ಲಿ ಅತ್ಯಧಿಕ ಮಳೆಯಾಗಿ ಪ್ರವಾಹ ಸಂಭವಿಸಿದೆ. ಸುಮಾರು ಏಳು ಸಾವಿರ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದೆ. ಪ್ರವಾಹದಿಂದಾಗಿ ಪ್ರಮುಖ ರಸ್ತೆಗಳು, ಗ್ರಾಮಗಳು ಜಲಾವೃತವಾಗಿವೆ.

ಮುಂದಿನ ಎರಡು ದಿನಗಳವರೆಗೂ ಮಳೆ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದೆ. ಗುಜರಾತ್ ಹಾಗೂ ಮಧ್ಯ ಪ್ರದೇಶಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
 ಒಡಿಶಾದಲ್ಲಿ ಮಳೆಯಿಂದ ಮೂರು ಸಾವು

ಒಡಿಶಾದಲ್ಲಿ ಮಳೆಯಿಂದ ಮೂರು ಸಾವು

ಶನಿವಾರ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಒಡಿಶಾದಲ್ಲಿ ಭಾರೀ ಮಳೆಯಾಗುತ್ತಿದೆ. ಶನಿವಾರದಿಂದಲೇ ಮಳೆ ಆರಂಭವಾಗಿದ್ದು, ಮಳೆ ಸಂಬಂಧಿ ಘಟನೆಗಳಲ್ಲಿ ಇದುವರೆಗೂ ಮೂರು ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ 17 ಕಡೆಗಳಲ್ಲಿ ಮಂಗಳವಾರ ಬೆಳಿಗ್ಗೆ 8.30ರವರೆಗೆ 200 ಮಿ.ಮೀ ಮಳೆ ದಾಖಲಾಗಿದೆ. ತಾಲ್ಕಚರ್ ಹಾಗೂ ಬೀರಮಹಾರಾಜಪುರದಲ್ಲಿ 300 ಎಂಎಂಗೂ ಅಧಿಕ ಮಳೆ ದಾಖಲಾಗಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

 ಚಂಡಮಾರುತ ಪ್ರಭಾವದಿಂದ ಹೆಚ್ಚಿನ ಮಳೆ

ಚಂಡಮಾರುತ ಪ್ರಭಾವದಿಂದ ಹೆಚ್ಚಿನ ಮಳೆ

ಒಡಿಶಾ, ಗುಜರಾತ್ ಹೊರತುಪಡಿಸಿ ಉತ್ತರಾಖಂಡ, ದೆಹಲಿ, ರಾಜಸ್ಥಾನದಲ್ಲಿ ಸೆಪ್ಟೆಂಬರ್ 18ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಸೆಪ್ಟೆಂಬರ್ 17ರಂದು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಲಿದ್ದು, ಮಳೆ ಪ್ರಮಾಣ ಇನ್ನಷ್ಟು ಅಧಿಕವಾಗಲಿದೆ ಎಂದು ತಿಳಿಸಿದೆ. ಒಡಿಶಾ, ಪಶ್ಚಿಮ ಬಂಗಾಳ ಕರಾವಳಿ ತೀರಗಳಿಗೆ ಈ ಮಾರುತಗಳು ಚಲಿಸಲಿದ್ದು, ಈ ರಾಜ್ಯಗಳಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಆನಂತರ ಮಳೆ ತಗ್ಗಲಿದೆ.

ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಬುಧವಾರದ ನಂತರ ಮಳೆ ತಗ್ಗಲಿದೆ ಎಂದು ತಿಳಿಸಿದೆ. ಪಂಜಾಬ್‌ನ 14 ಜಿಲ್ಲೆಗಳಲ್ಲಿ ಮಳೆ ತಗ್ಗಿರುವುದಾಗಿ ತಿಳಿಸಿದೆ.

 ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ

ಮುಂದಿನ ಎರಡು ದಿನ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ತಿಳಿಸಿದೆ.

English summary
India Meteorological Department alerts heavy rain in these states on sep 15 and 16,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X