Rain Alert: ದಕ್ಷಿಣ ಭಾರತದ ರಾಜ್ಯಗಳಲ್ಲಿ ಸುರಿಯಲಿದೆ ವ್ಯಾಪಕ ಮಳೆ- ಕರ್ನಾಟಕದಲ್ಲಿಯೂ ಎಲ್ಲೋ ಅಲರ್ಟ್, ಅಂಕಿಅಂಶ, ಮಾಹಿತಿ, ವಿವರ
ಮಂಗಳವಾರ, ಸೆಪ್ಟೆಂಬರ್ 5: ಆಗಸ್ಟ್‌ನಲ್ಲಿ ಮಳೆ ಕೊರತೆಯ ನಂತರ ದಕ್ಷಿಣ ಭಾರತದ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಈ ಮಳೆ ಸುರಿಯಲಿದೆ ಎಂದು ಐಎಂಡಿ ಹೇಳಿದೆ.
ದಕ್ಷಿಣ ಭಾರತ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಅಧಿಕವಾಗಿ ಮಳೆ ಸುರಿಯಲಿದೆ. ಆಂಧ್ರ, ತೆಲಂಗಾಣದಲ್ಲಿ ಈಗಾಗಲೇ ವ್ಯಾಪಕ ಮಳೆಯಾಗುತ್ತಿದೆ. ಈ ವಾರವಿಡೀ ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ತೀವ್ರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾರಾಂತ್ಯದಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಚಂಡಮಾರುತ ಹೊರಹೊಮ್ಮಿದೆ. ಇದು ದಕ್ಷಿಣ ಒಡಿಶಾ-ಉತ್ತರ ಆಂಧ್ರಪ್ರದೇಶ ಕರಾವಳಿಯ ವಾಯುವ್ಯದಲ್ಲಿ ವ್ಯಾಪಕವಾದ ಮಳೆ ತರಲಿದೆ ಎಂದು ತಿಳಿದುಬಂದಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಶುಕ್ರವಾರ ಅಂದರೆ ಸೆಪ್ಟೆಂಬರ್ 8 ರ ವರೆಗೆ ತಮಿಳುನಾಡು ಮತ್ತು ಕೇರಳದಲ್ಲಿ ಪ್ರತ್ಯೇಕ ಮಳೆ ಸುರಿಯಲಿದೆ. 64.5 ಮಿಮೀಯಿಂದ 115.5 ಮಿಮೀವರೆಗೆ ವ್ಯಾಪಕ ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದೇ ರೀತಿಯ ಹವಾಮಾನವು ಕರ್ನಾಟಕದಲ್ಲಿ ಬುಧವಾರದಿಂದ ಆರಂಭವಾಗಿ ಶುಕ್ರವಾರದ ವರೆಗೆ ಇರುತ್ತದೆ.
ಮುಂದಿನ 48 ಗಂಟೆಗಳಲ್ಲಿ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಈ ಮುನ್ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ 4 ರಿಂದ 5 ದಿನಗಳ ವರೆಗೆ ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೇರಳ ಇಂದು ಮಾತ್ರ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆಪ್ಟೆಂಬರ್ ತಿಂಗಳಿನ ಮೊದಲ ಐದು ದಿನಗಳಲ್ಲಿ ಕೇರಳದಲ್ಲಿ 50.5 ಮಿಮೀ, ಕರ್ನಾಟಕದಲ್ಲಿ 32.1 ಮಿಮೀ ಮತ್ತು ತಮಿಳುನಾಡಿನಲ್ಲಿ 33.7 ಮಿಮೀ ಮಳೆ ದಾಖಲಾಗಿದೆ. ಇದರಿಂದ ಕ್ರಮವಾಗಿ ಶೇ 30, ಶೇ 49 ಮತ್ತು ಶೇ 150 ರಷ್ಟು ಅಧಿಕ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಸೆಪ್ಟೆಂಬರ್ 06ರಂದು ವಿದರ್ಭದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಒಡಿಶಾ, ಪೂರ್ವ ಉತ್ತರ ಪ್ರದೇಶ, ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಛತ್ತೀಸ್‌ಗಢ, ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೊಂಕಣ, ಗೋವಾ, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ಪೂರ್ವ ಮಧ್ಯಪ್ರದೇಶ, ಕೊಂಕಣ, ಗೋವಾ, ಮರಾಠವಾಡ, ವಿದರ್ಭ, ಛತ್ತೀಸ್‌ಗಢ, ತೆಲಂಗಾಣ, ಕರಾವಳಿ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ.
ಗಂಗಾನದಿಯ ಪಶ್ಚಿಮ ಬಂಗಾಳ, ಜಾರ್ಖಂಡ್, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರ ಪ್ರದೇಶ, ಯಾನಂ, ರಾಯಲ ಸೀಮಾದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಉತ್ತರಾಖಂಡ ಮತ್ತು ಗುಜರಾತ್ ಪ್ರದೇಶದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆ ಬೀಳಬಹುದು ಎಂದು ಐಎಂಡಿ ತಿಳಿಸಿದೆ.
ಅರುಣಾಚಲ ಪ್ರದೇಶ, ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್, ಪೂರ್ವ ರಾಜಸ್ಥಾನ, ಸೌರಾಷ್ಟ್ರ, ಕಚ್, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ನಿರೀಕ್ಷೆಯಿದೆ.












Click it and Unblock the Notifications