• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಂಫಾನ್ ಚಂಡಮಾರುತ; 24 ಗಂಟೆ ಭಾರಿ ಮಳೆ ಮುನ್ಸೂಚನೆ

|

ಭುವನೇಶ್ವರ, ಮೇ 17 : ಅಂಫಾನ್ ಚಂಡಮಾರುತದ ಪ್ರಭಾವದಿಂದ ಮುಂದಿನ 24 ಗಂಟೆಯಲ್ಲಿ ಭಾರತದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾ ರಾಜ್ಯಕ್ಕೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

   Muthappa Rai ಅಪರೂಪದ ಚಿತ್ರಗಳು | unseen photos | Oneindia Kannada

   ಭುವನೇಶ್ವರದಲ್ಲಿರುವ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಎಚ್. ಆರ್. ಬಿಸ್ವಾಸ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಮುಂದಿನ 12 ಗಂಟೆಗಳ ಅವಧಿಯಲ್ಲಿ ಅಂಫಾನ್ ಚಂಡಮಾರುತ ತೀವ್ರಗೊಳ್ಳಲಿದೆ. ಸೋಮವಾರ ಮುಂಜಾನೆ ವೇಳೆಗೆ ತೀವ್ರತೆ ಹೆಚ್ಚಾಗಲಿದೆ" ಎಂದು ಹೇಳಿದ್ದಾರೆ.

   ಜೂನ್ ಮೊದಲ ವಾರದಲ್ಲಿ ಭಾರೀ ಮಳೆ ಸಾಧ್ಯತೆ; ದಾವಣಗೆರೆಯಲ್ಲಿ ಈಗಲೇ ಸಿದ್ಧತೆ

   "ಭಾನುವಾರ ರಾತ್ರಿಯ ತನಕ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಸೋಮವಾರ ಮೀನುಗಾರಿಕಾ ಚಟುವಟಿಕೆಗೆ ನಿಷೇಧ ಹೇರಲಾಗಿದೆ" ಎಂದು ಎಚ್. ಆರ್. ಬಿಸ್ವಾಸ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

   ಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

   ಅಂಫಾನ್ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿಯೂ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೋವಿಡ್ - 19 ಹೋರಾಟದಲ್ಲಿ ತೊಡಗಿರುವ ರಾಜ್ಯಗಳು ಹವಾಮಾನ ಇಲಾಖೆ ಮುನ್ಸೂಚನೆಯತ್ತಲೂ ಗಮನಹರಿಸಿವೆ.

   ದೇಶಕ್ಕೆ ಅಪ್ಪಳಿಸಲಿದೆ 'ಅಂಫಾನ್' ಚಂಡಮಾರುತ: ಎಲ್ಲೆಲ್ಲಿ ಭಾರಿ ಮಳೆ?

   ಒಡಿಶಾ ಸರ್ಕಾರ ಶುಕ್ರವಾರದಿಂದಲೇ 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಕೊರೊನಾ ತಡೆಯಲು ಲಾಕ್ ಜಾರಿಯಲ್ಲಿರುವ ಕಾರಣ ಜನರು ಮನೆಯಲ್ಲಿಯೇ ಇದ್ದಾರೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಜಿಲ್ಲಾಡಳಿತ ಪರಿಸ್ಥಿತಿ ಎದುರಿಸಲು ಸಿದ್ಧವಾಗಿ ಇರುವಂತೆ ನಿರ್ದೇಶನ ನೀಡಲಾಗಿದೆ.

   ಒಡಿಶಾದ ಉತ್ತರ ಕರಾವಳಿಯಲ್ಲಿ ಚಂಡಮಾರುತದಿಂದ ಹಾನಿಯಾದರೆ ಜನರಿಗೆ ಆಶ್ರಯ ನೀಡಲು ಕಟ್ಟಡ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಶ್ರಯ ನೀಡುವ ಕಟ್ಟಡಗಳು ಈಗಾಗಲೇ ಕೋವಿಡ್ - 19 ಕ್ವಾರಂಟೈನ್‌ಗೆ ಬಳಕೆ ಮಾಡಲಾಗುತ್ತಿದೆ.

   English summary
   Bhubaneswar meteorological centre said in next 12 hours cyclone Amphan likely to intensify. Heavy rainfall also likely to occur after 24 hours.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X