ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಲ್ಲಿ ಭಾರಿ ಮಳೆ: ಯಾವ್ಯಾವ ರಾಜ್ಯಗಳಿಗೆ ಕಾದಿದೆ ಆಪತ್ತು?

|
Google Oneindia Kannada News

Recommended Video

ತಮಿಳುನಾಡಿನಲ್ಲಿ ಭಾರಿ ಮಳೆ, ಶಾಲಾ-ಕಾಲೇಜುಗಳಿಗೆ ರಜೆ | Oneindia Kannada

ಚೆನ್ನೈ, ಡಿಸೆಂಬರ್ 2: ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ತಮಿಳುನಾಡಿನ ತಿರುವಲ್ಲೂರು, ತೂತುಕುಡಿ ಹಾಗೂ ರಾಮನಾಥಪುರದಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಪಾಂಡಿಚೇರಿಯಲ್ಲೂ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದಲ್ಲೂ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

ಅಕಾಲಿಕ ಮಳೆ, ವಿವಿಧ ಜಿಲ್ಲೆಗಳಲ್ಲಿ Orange alertಅಕಾಲಿಕ ಮಳೆ, ವಿವಿಧ ಜಿಲ್ಲೆಗಳಲ್ಲಿ Orange alert

ಕರ್ನಾಟಕದ ಹಲವು ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಲ್ಲಿ ಕೂಡ ಬೆಳಗ್ಗೆ ಇಂದಲೇ ತುಂತುರು ಮಳೆ ಆರಂಭವಾಗಿದೆ.

ಪ್ರವಾಹ ಭೀತಿ ಎದುರಾಗಿರುವ ಪ್ರದೇಶಗಳು

ಪ್ರವಾಹ ಭೀತಿ ಎದುರಾಗಿರುವ ಪ್ರದೇಶಗಳು

ಶಂಕರಭರಣಿ ನದಿ ದಡದ ಊರುಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಕೆಲವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಭಾಗದಲ್ಲಿ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದವರನ್ನು ನಿಯೋಜನೆ ಮಾಡಲಾಗಿದೆ.

ಯಾವ್ಯಾವ ರಾಜ್ಯಗಳಲ್ಲಿ ಮಳೆ

ಯಾವ್ಯಾವ ರಾಜ್ಯಗಳಲ್ಲಿ ಮಳೆ

ಕರ್ನಾಟಕ, ತಮಿಳುನಾಡು ಸೇರಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣ

ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣ

ಶನಿವಾರ ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದೆ. ಭಾನುವಾರ ಹಾಗೂ ಸೋಮವಾರ ಕಡಿಮೆ ಒತ್ತಡ ಪ್ರದೇಶ ಲಕ್ಷದ್ವೀಪದ ಕಡೆ ಸಾಗಲಿದೆ.

ತಮಿಳುನಾಡಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಲಕ್ಷದ್ವೀಪದಲ್ಲಿ ಶನಿವಾರ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಶನಿವಾರ ತಮಿಳುನಾಡಿನಲ್ಲಿ 100 ಮಿಲಿಮೀಟರ್​ ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡಿನಲ್ಲಿ ಇಂದು ಕೂಡ ಭಾರೀ ಮಳೆ ಆಗುವ ಸಾಧ್ಯತೆ ಇದೆ.

ಹಿಂದೂ ಮಹಾಸಾಗರದಲ್ಲಿ ಚಂಡಮಾರುತ

ಹಿಂದೂ ಮಹಾಸಾಗರದಲ್ಲಿ ಚಂಡಮಾರುತ

ಹಿಂದೂ ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ಕಾಣಿಸಿಕೊಂಡಿದ್ದು, ಮಂಗಳವಾರದ ವೇಳೆಗೆ ಅರುಣಾಚಲ ಪ್ರದೇಶ ಪ್ರವೇಶಿಸುವ ಸಾಧ್ಯತೆ ಇದೆ. ಹೀಗಾಗಿ ಈಶಾನ್ಯ ರಾಜ್ಯಗಳಲ್ಲೂ ಮಳೆ ಆಗುವ ಸಾಧ್ಯತೆ ಇದೆ.

English summary
Heavy rainfall in Tamil Nadu and Puducherry, educational institutions in the two states have been shut for Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X