Rain: ಈ ಭಾಗಗಳಲ್ಲಿ ಧಾರಾಕಾರ ಮಳೆ: ಪ್ರವಾಹ ಭೀತಿ ಐಎಂಡಿ ರಿಪೋರ್ಟ್ ಇಲ್ಲಿದೆ!
Rain: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದಾದ್ಯಂತ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದಲೂ ಧಾರಾಕಾರ ಮಳೆಯಾಗುತ್ತಿದೆ. ದೆಹಲಿ ಹಾಗೂ ದೆಹಲಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗುರುವಾರವೂ ದೆಹಲಿ ಸೇರಿದಂತೆ ದೇಶದಾದ್ಯಂತ ಮಾನ್ಸೂನ್ ಚುರುಕು ಪಡೆದುಕೊಂಡಿದೆ. ನೈಋತ್ಯ ಮಾನ್ಸೂನ್ ಹಾಗೂ ಸೈಕ್ಲೋನ್ ಎಫೆಕ್ಟ್ ಕಾರಣಕ್ಕೆ ದೇಶದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೇರಳದಲ್ಲಿ ಮಳೆ ಅಬ್ಬರ ಜೋರಾಗಿದ್ದು ಅದರ ಪ್ರಭಾವ ಕರ್ನಾಟಕದ ಮೇಲೆಯೂ ಆಗುತ್ತಿದೆ. ಯಾವೆಲ್ಲಾ ಭಾಗಗಳಲ್ಲಿ ಮಳೆಯಾಗುತ್ತಿದೆ ಎನ್ನುವುದನ್ನು ನೋಡೋಣ.
ದೆಹಲಿಯಲ್ಲಿ ಮಳೆ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ದೇಶದ ರಾಜಧಾನಿಯ ಹಲವು ಪ್ರದೇಶಗಳಲ್ಲಿ ನೀರು ನಿಂತಿದೆ. ಅಲ್ಲದೇ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ದೆಹಲಿಯಲ್ಲಿ ತಾಪಮಾನ ಹಾಗೂ ವಾಯು ಮಾಲಿನ್ಯದಿಂದ ಜನ ಸುಸ್ತಾಗಿದ್ದರು. ಇದೀಗ ಕಳೆದ ಒಂದು ವಾರದಿಂದಲೂ ಮಳೆಯಾಗುತ್ತಿದ್ದು ಮಳೆಯಿಂದ ವಾಯುಮಾಲಿನ್ಯ ಪ್ರಮಾಣವು ಭರ್ಜರಿ ಇಳಿಕೆಯಾಗಿದ್ದು. ಇದರೊಂದಿಗೆ ಬಿಸಿಲು ಸಹ ಸಿಕ್ಕಾಪಟ್ಟೆ ಕಡಿಮೆಯಾಗಿದೆ. ಇದರಿಂದ ದೆಹಲಿ ಜನರಿಗೆ ಖುಷಿಯಾಗಿದ್ದರೂ ಭಾರೀ ಮಳೆ ಅವಾಂತರವನ್ನೇ ಸೃಷ್ಟಿ ಆಗಿದೆ.

ಹಿಮಾಚಲ ಪ್ರದೇಶದಲ್ಲಿ ಸಂಕಷ್ಟ: ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದೆ. ಅಲ್ಲದೇ ಈ ಭಾಗದಲ್ಲಿ ಮೋಘಸ್ಫೋಟ ಸಂಭವಿಸಿದ್ದು ದಿಢೀರ್ ಪ್ರವಾಹ ಸೃಷ್ಟಿಯಾಗಿದೆ. ಅಲ್ಲದೇ ಧಾರಾಕಾರ ಮಳೆ ಹಾಗೂ ಮೇಘಸ್ಫೋಟದಿಂದಾಗಿ ಭೂಕುಸಿತ ಸಂಭವಿಸಿದೆ. ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು. ಸರ್ಕಾರವು ಪುನರ್‌ವಸತಿ ಕೇಂದ್ರಗಳನ್ನು ಪ್ರಾರಂಭಿಸಿದೆ. ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲಾಗುತ್ತಿದೆ. ಭಾರೀ ಮಳೆಯಿಂದಾಗಿ ಈ ರಾಜ್ಯದಲ್ಲಿ ಒಟ್ಟು 174ಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಲಾಗಿದೆ. ಹಲವು ಭಾಗದಲ್ಲಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ.
ಉತ್ತರ ಭಾರತ ಹಾಗೂ ಭಾರತದ ಈಶಾನ್ಯ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅಲ್ಲದೇ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲೂ ಮಳೆ ಆರ್ಭಟ ಜೋರಾಗಿದೆ. ಮುಂದಿನ ಐದು ದಿನಗಳ ಕಾಲ ಮಾನ್ಸೂನ್ ಆರ್ಭಟ ಜೋರಾಗಿ ಇರಲಿದೆ. ದೆಹಲಿ, ಗುಜರಾತ್ ಹಾಗೂ ಮಧ್ಯಪ್ರದೇಶದಲ್ಲಿ ಮಳೆ ಜೋರಾಗಿದೆ. ಇನ್ನು ಉತ್ತರಾಖಂಡ, ತ್ರಿಪುರ, ಮಿಜೋರಾಂ, ಗುಜರಾತ್, ಪಶ್ಚಿಮ ಬಂಗಾಳ ಹಾಗೂ ಒಡಿಶಾ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
ಕೊಂಕಣ, ಗೋವಾ ಹಾಗೂ ಮಹಾರಾಷ್ಟ್ರದಲ್ಲೂ ರಣಭೀಕರ ಮಳೆ ಮುಂದುವರಿದಿದೆ. ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲೂ ಇಂದು ಮತ್ತು ನಾಳೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ: ಇನ್ನು ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲೂ ಮಳೆ ಆರ್ಭಟ ಜೋರಾಗಿದೆ. ಕರ್ನಾಟಕದ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೇರಳದ ಉತ್ತರ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕೇರಳ ಭಾಗದಲ್ಲಿ ಡ್ರಾಫ್ಟ್ ಸೃಷ್ಟಿಯಾಗಿದ್ದು, ಅದರ ಪ್ರಭಾವವು ಕರ್ನಾಟಕದ ಮೇಲೂ ಆಗುತ್ತಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇದರೊಂದಿಗೆ ನೆರೆಯ ತೆಲಂಗಾಣ ರಾಜ್ಯದಲ್ಲೂ ಮಳೆ ಆರ್ಭಟ ಜೋರಾಗಿದೆ.












Click it and Unblock the Notifications