Heavy Rain: ಈ ಭಾಗಗಳಲ್ಲಿ ಮೂರು ದಿನ ಧಾರಾಕಾರ ಮಳೆ: ಪ್ರವಾಹ ಭೀತಿ!

Heavy Rain: ಮುಂಗಾರು ಮಳೆ ಈ ಬಾರಿ ದೇಶದ ಜನರಿಗೆ ಸಂತಸ ತಂದಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ನೆರೆಯ ಕೇರಳ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮಳೆ ಜೋರಾಗಿದ್ದು. ತಾಪಮಾನದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ದೆಹಲಿಯಲ್ಲಿ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 26 ವರೆಗೆ ದೆಹಲಿಯಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹೇಳಲಾಗಿದೆ. ಇನ್ನು ಇಲ್ಲಿ ಗರಿಷ್ಠ ತಾಪಮಾನವು 38.3 ಡಿಗ್ರಿ ಸೆಲ್ಸಿಯಸ್ ತಲುಪಿದೆ.

ಮುಂದಿನ ಎರಡು ದಿನಗಳ ವರೆಗೆ ದೆಹಲಿಯಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಇನ್ನು ದೇಶದ ವಿವಿಧ ಭಾಗದಲ್ಲಿ ಜೂನ್ ಅಂತ್ಯದ ವರೆಗೆ ಮಳೆ ಇರಲಿದೆ ಎಂದು ಹೇಳಲಾಗಿದೆ. ಗುಜರಾತ್, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಗುಜರಾತ್ ರಾಜ್ಯದಲ್ಲಿ ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು. ಈ ರಾಜ್ಯದ ಹಲವು ನಗರಗಳಲ್ಲಿ ರಸ್ತೆಗಳು ನೀರಿನಿಂದ ಜಲಾವೃತವಾಗಿವೆ. ಹೀಗಾಗಿ ಈ ರಾಜ್ಯದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ನೀಡಲಾಗಿದೆ. ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ ಗೋದಾವರಿ ನದಿ ಉಕ್ಕಿ ಹರಿಯುತ್ತಿದೆ. ಅಲ್ಲದೇ ಕೇರಳದಲ್ಲೂ ಧಾರಾಕಾರ ಮಳೆ ಮುಂದುವರಿದಿದೆ. ಕೇರಳದ ಕೆಲವು ಭಾಗಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು. ಈಗಾಗಲೇ ವಿವಿಧ ಪ್ರದೇಶದಲ್ಲಿ ಭೂಕುಸಿತವಾಗುತ್ತಿರುವುದು ಸಹ ವರದಿಯಾಗಿದೆ.

Heavy Rain in these parts for three days from June 25 Flood threat imd updates

ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಇನ್ನು ಈ ಬಾರಿ ಮುಂಗಾರು ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ಪ್ರಮಾಣ ಹೆಚ್ಚಾಗಿ ಇರಲಿದೆ ಎಂದು ಹೇಳಲಾಗಿತ್ತು. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಈ ಬಾರಿ ಅವಧಿ ಪೂರ್ವ ಮುಂಗಾರು ಪ್ರವೇಶಿಸಿದೆ. ಇನ್ನು ಕೆಲವು ದಿನಗಳಲ್ಲಿ ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಮಧ್ಯ ಮತ್ತು ಪಶ್ಚಿಮ ಭಾರತದಲ್ಲಿ, ಜೂನ್ 30 ರವರೆಗೆ ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಇದೇ ರೀತಿಯ ಪರಿಸ್ಥಿತಿ ಇರುತ್ತದೆ, ಮಹಾರಾಷ್ಟ್ರದ ಹೆಚ್ಚಿನ ಭಾಗವು ಸ್ಥಿರವಾದ ಹಗುರದಿಂದ ಮಧ್ಯಮ ಮಳೆಯನ್ನು ಕಾಣುತ್ತಿದ್ದು, ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ.

ಇದರೊಂದಿಗೆ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಛತ್ತೀಸ್‌ಗಢ ಭಾಗದಲ್ಲಿ ಜೂನ್ 28ರ ವರೆಗೆ ಭಾರಿ ಮಳೆ ಆಗಲಿದೆ. ಜಾರ್ಖಂಡ್ ಮತ್ತು ಒಡಿಶಾದಲ್ಲಿಯೂ ಮಳೆ ಮುಂದುವರಿದಿದೆ. ಇನ್ನು ಈಶಾನ್ಯ ಭಾರತದ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಸಾಧಾರಣದಿಂದ ಕೂಡಿದ ಹಗುರ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ: ಇನ್ನು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ತಮಿಳುನಾಡು ಹಾಗೂ ಕೇರಳದಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಈ ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಅವಧಿಗೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+