Rain: ದೇಶದ ಈ ಭಾಗಗಳಲ್ಲಿ ಧಾರಾಕಾರ ಮಳೆ: ಐಎಂಡಿ ರಿಪೋರ್ಟ್!
Rain: ವಾಯುಭಾರ ಕುಸಿತ ಸೇರಿದಂತೆ ವಿವಿಧ ಕಾರಕ್ಕೆ ದೇಶದಾದ್ಯಂತ ಮಳೆಯಾಗುತ್ತಿದೆ. ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಬಿಸಿಲಿನ ವಾತಾವರಣವಿತ್ತು. ಇದೀಗ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೊಂದು ವಾರ ಮಳೆ ಮುಂದುವರಿಯಲಿದೆ. ಇದೇ ಸಂದರ್ಭದಲ್ಲಿ ದೇಶದ ವಿವಿಧ ಭಾಗದಲ್ಲೂ ತಾಪಮಾನವೂ ಹೆಚ್ಚಳವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೆಲವು ಕಡೆ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಸಹ ಘೋಷಿಸಲಾಗಿದೆ. ದೇಶದ ವಿವಿಧ ಭಾಗದಲ್ಲಿ ಕಳೆದ 2ರಿಂದ 3 ತಿಂಗಳಿನಿಂದ ಬಿಸಿಲ ಝಳ ತೀವ್ರವಾಗಿತ್ತು. ಇದೀಗ ದೆಹಲಿ-ಎನ್‌ಸಿಆರ್ ಸೇರಿದಂತೆ ವಿವಿಧ ಭಾಗದಲ್ಲಿ ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಕಂಡುಬಂದಿದೆ. ಈ ಭಾಗದಲ್ಲಿ ಮುಂಬರುವ ದಿನಗಳಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಜನರು ಭಾರೀ ಬಿಸಿಲಿನಿಂದ ಹೈರಾಣಾಗಿದ್ದರು. ಇದೀಗ ತಾಪಮಾನ ತುಸು ಇಳಿಕೆಯಾಗಿದ್ದು, ಮಳೆ ಬರುವ ಮುನ್ಸೂಚನೆ ಇದೆ. ದೆಹಲಿ ಭಾಗದಲ್ಲಿ ಹವಾಮಾನವು ಏಕಾಏಕಿ ಬದಲಾಗಿದ್ದು. ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಭಾಗದಲ್ಲಿ ವಿಪರೀತ ತಾಪಮಾನವಿತ್ತು. ಗರಿಷ್ಠ ತಾಪಮಾನವು 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗಬಹುದು ಎಂದು ಅಂದಾಜಿಸಲಾಗಿದೆ.
ಅಲ್ಲದೇ ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ ಎಂದು ಅಂದಾಜಿಸಲಾಗಿದೆ. ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಮುಂದುವರಿದಿದೆ. ಇನ್ನು ಮೇ ಮೊದಲ ವಾರದಲ್ಲಿ ಅಂದರೆ ನಾಳೆಯಿಂದ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಮಿಂಚು ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ. ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದ್ದು. ಶಾಖದ ಅಲೆಯು ಇಳಿಕೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಪೂರ್ವ ಮತ್ತು ಈಶಾನ್ಯ ಭಾರತದ ವಿವಿಧ ರಾಜ್ಯಗಳಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳ ಕಾಲ ಭಾರೀ ಮಳೆ ಆಗಲಿದೆ. ಇದರೊಂದಿಗೆ ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಭಾರತದ ಈಶಾನ್ಯ ರಾಜ್ಯಗಳಾದ ಅಸ್ಸಾಂ ಹಾಗೂ ಮೇಘಾಲಯದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಇದರೊಂದಿಗೆ ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಹಾಗೂ ಪೂರ್ವ ಮಧ್ಯಪ್ರದೇಶ ಭಾಗದಲ್ಲಿ ಭಾರೀ ಮಳೆ ಆಗಲಿದೆ. ಇನ್ನೂ ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆಯನ್ನೂ ಸಹ ಭಾರತೀಯ ಹವಾಮಾನ ಇಲಾಖೆಯು ತನ್ನ ವರದಿಯಲ್ಲಿ ಈ ವಿಷಯವನ್ನು ಉಲ್ಲೇಖ ಮಾಡಿದೆ.
ಈ ಭಾಗದಲ್ಲಿ ಶಾಖದ ಅಲೆ: ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೂ. ದೇಶದ ಕೆಲವು ರಾಜ್ಯಗಳಲ್ಲಿ ಇನ್ನೂ ಶಾಖದ ಅಲೆ ಮುಂದುವರಿದಿದೆ. ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ಹಾಗೂ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕೆಲವು ಭಾಗದಲ್ಲಿ ಶಾಖದ ಅಲೆ ಸಹ ಮುಂದುವರಿದಿದೆ ಎಂದು ಐಎಂಡಿ ಹೇಳಿದೆ.
ದಕ್ಷಿಣ ಭಾರತದಲ್ಲಿ ಹೇಗಿದೆ ಹವಾಮಾನ: ಇನ್ನು ದಕ್ಷಿಣ ಭಾರತದಲ್ಲಿ ವ್ಯತಿರಿಕ್ತ ವಾತಾವರಣವಿದೆ. ಕರ್ನಾಟಕದಲ್ಲಿಯೇ ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೂ. ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಭಾಗದಲ್ಲಿ ಶಾಖದ ಅಲೆ ಮುಂದುವರಿದಿದೆ. ನೆರೆಯ ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳದ ವಿವಿಧ ಭಾಗದಲ್ಲಿ ಶಾಖದ ಅಲೆಯ ಎಚ್ಚರಿಕೆಯನ್ನೂ ನೀಡಲಾಗಿದೆ.
ಕೃಷಿ ಚಟುವಟಿಕೆ ಚುರುಕು: ದೇಶದ ವಿವಿಧ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಚುರುಕು ಪಡೆದುಕೊಂಡ ಹಿನ್ನೆಲೆಯಲ್ಲಿ ವಿವಿಧ ಭಾಗದಲ್ಲಿ ಕೃಷಿ ಚಟುವಟಿಕೆಗಳು ಚುರುಕು ಪಡೆದುಕೊಂಡಿದೆ. ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲಿ ಮಾಗಿ ಉಳಿಮೆಯು ಚುರುಕು ಪಡೆದುಕೊಂಡಿದೆ. ಇನ್ನೊಂದು ತಿಂಗಳಿನಲ್ಲಿ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ. ಕೃಷಿ ಪೂರ್ವ ಚಟುವಟಿಕೆಗಳು ದೇಶದಾದ್ಯಂತ ಚುರುಕು ಪಡೆದುಕೊಂಡಿದೆ. ಇನ್ನು ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಭಾರೀ ಮಳೆ ಮುನ್ನೆಚ್ಚರಿಕೆ ಕ್ರಮಗಳು
ದೇಶದಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಕೆಲವೊಂದು ಮುನ್ಸೂಚನೆಗಳನ್ನು ನೀಡಿದೆ.
* ಮರದ ಕೊಂಬೆಗಳು ಧರೆಗುರುಳುವ ಸಾಧ್ಯತೆ ಅಥವಾ ಬೇರು ಸಹಿತ ಮರಗಳು ಧರೆಗುರುಳಬಹುದು. ಹೀಗಾಗಿ ಎಚ್ಚರಿಕೆ ವಹಿಸಿ.
* ಬಾಳೆ ಮತ್ತು ಪಪ್ಪಾಯಿ ಮರಗಳಿಗೆ ಸಣ್ಣ ಪ್ರಮಾಣದಲ್ಲಿ ಹಾನಿ.
* ಕೊಂಬೆಗಳು ಮುರಿದು ಬಿದ್ದು ವಿದ್ಯುತ್ ತಂತಿ ಅಥವಾ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ.
* ಬಲವಾದ ಗಾಳಿ/ಆಲಿಕಲ್ಲು ಮಳೆ ಸಾಧ್ಯತೆ. ಇದರಿಂದ ತೋಟ, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ.
* ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗುವಾಗ ಸಂದರ್ಭದಲ್ಲಿ ಸಾಧ್ಯವಾದಷ್ಟು ಹೊರಗೆ ಹೋಗುವುದನ್ನು ತಪ್ಪಿಸಿ.
* ಒಳಾಂಗಣದಲ್ಲಿಯೇ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ.
* ಭಾರೀ ಮಳೆಯಾಗುವ ಸಂದರ್ಭದಲ್ಲಿ ಸುರಕ್ಷಿತ ಪ್ರದೇಶದಲ್ಲಿ ಆಶ್ರಯ ಪಡೆಯಿರಿ. ಯಾವುದೇ ಕಾರಣಕ್ಕೂ ಮರಗಳ ಕೆಳಗೆ ಆಶ್ರಯ ಪಡೆಯಬೇಡಿ.
* ಕಾಂಕ್ರೀಟ್ ಮಹಡಿಗಳ ಮೇಲೆ ಮಲಗಬೇಡಿ ಮತ್ತು ಕಾಂಕ್ರೀಟ್ ಗೋಡೆಗಳ ಮೇಲೆ ಒರಗಬೇಡಿ.
* ವಿದ್ಯುತ್/ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್‌ಪ್ಲಗ್ ಮಾಡಿ.
* ಧಾರಾಕಾರ ಮಳೆ ಬರುವಾಗ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದನ್ನು ಮರೆಯಬೇಡಿ.












Click it and Unblock the Notifications