Heavy Rain: ಈ ಭಾಗಗಳಲ್ಲಿ ರಣಭೀಕರ ಮಳೆ, ಐಎಂಡಿ ಯೆಲ್ಲೋ ಅಲರ್ಟ್‌!

Heavy Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಬದಲಾದ ಹವಾಮಾನ ಪರಿಸ್ಥಿತಿಯಲ್ಲಿ ಕರ್ನಾಟಕವೂ ಸೇರಿದಂತೆ ವಿವಿಧ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ದೇಶದ ವಿವಿಧ ಭಾಗದಲ್ಲಿ ಭಾರೀ ಬಿಸಿಲು ಇತ್ತು. ಇದೀಗ ಗುರುವಾರದಿಂದ ಭಾರೀ ಮಳೆಯಾಗುತ್ತಿದೆ. ಎಲ್ಲೆಲ್ಲಿ ಮಳೆಯಾಗುತ್ತಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ದೇಶದ ಹಲವು ರಾಜ್ಯಗಳಲ್ಲಿ ತೀವ್ರ ಬಿಸಿಲಿನ ಹೊರತಾಗಿ ಹವಾಮಾನ ಪರಿಸ್ಥಿತಿ ಬದಲಾಗಿದೆ. ಇದೀಗ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಯು ಮುನ್ನೆಚ್ಚರಿಕೆ ನೀಡಿದೆ. ಯಾವ ಯಾವ ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರವನ್ನು ನೋಡೋಣ.

Heavy Rain in These Parts IMD Yellow Alert

ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವದಿಂದಾಗಿ ವಿವಿಧ ಭಾಗದಲ್ಲಿ ಮಳೆ ಬರುತ್ತಿದೆ. ಮುಖ್ಯವಾಗಿ ಉತ್ತರ ಭಾರತದ ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶ, ಒಡಿಶಾ, ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗಲಿದೆ. ಇನ್ನು ದಕ್ಷಿಣ ಕರ್ನಾಟಕದ ತೆಲಂಗಾಣ, ತಮಿಳುನಾಡು, ಕೇರಳ, ಕರ್ನಾಟಕ ಹಾಗೂ ಆಂಧ್ರಪ್ರದೇಶ ರಾಜ್ಯಗಳಲ್ಲಿ ಮಳೆ ಇರಲಿದೆ. ಕರ್ನಾಟಕದಲ್ಲೂ ಮಳೆಯಾರ್ಭಟ ಜೋರಾಗಿದೆ.

ಇನ್ನು ಈಶಾನ್ಯ ಭಾರತದ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗಲಿದೆ. ದೇಶದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದ್ದು ವಿವಿಧ ರಾಜ್ಯದಲ್ಲಿ ಈಗಾಗಲೇ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಹರಿಯಾಣ, ಬಿಹಾರ ಹಾಗೂ ಜಾರ್ಖಂಡ್‌ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಈ ರಾಜ್ಯಗಳಿಗೆ ಐಎಂಡಿಯು ಆರೆಂಜ್‌ ಅಲರ್ಟ್ ಕೊಟ್ಟಿದೆ.

ಬಿಹಾರದಲ್ಲಿ ಧಾರಾಕಾರ ಮಳೆ: ಇನ್ನು ಬಿಹಾರದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬಿಹಾರದಲ್ಲಿ ಧಾರಾಕಾರ ಮಳೆಯಿಂದ ಸಾವು - ನೋವು ಸಹ ಸಂಭವಿಸುತ್ತಿದೆ. ಬಿಹಾರದಲ್ಲಿ ಮಳೆಯಾರ್ಭಟದಿಂದ 25ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬಿಹಾರದ ನಳಂದ ಪ್ರದೇಶವೊಂದರಲ್ಲೇ 18 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬಿಹಾರದಲ್ಲಿ ಇನ್ನೂ ಎರಡರಿಂದ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ದೆಹಲಿಯಲ್ಲಿ ಬಿಸಿಲಿನ ಝಳ!

ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೆ, ದೆಹಲಿಯಲ್ಲಿ ಬಿಸಿಲಝಳ ಜೋರಾಗಿದೆ. ಹೌದು ದಕ್ಷಿಣ ಭಾರತ, ಉತ್ತರ ಭಾರತ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವುದರ ಹೊರತಾಗಿಯೂ ದೆಹಲಿಯಲ್ಲಿ ಬಿಸಿಲು ಹೆಚ್ಚಳವಾಗಿದೆ. ದೆಹಲಿಯಲ್ಲಿ ಬಿಸಿಲ ಝಳಕ್ಕೆ ಜನ ಹೈರಾಣಾಗಿದ್ದಾರೆ. ದೆಹಲಿಯಲ್ಲಿ ಗರಿಷ್ಠ ತಾಪಮಾನವು 36 ಡಿಗ್ರಿ ಸೆಲ್ಸಿಯಸ್‌ ಹಾಗೂ 38 ಡಿಗ್ರಿ ಸೆಲ್ಸಿಯಸ್ ತಲುಪಿದ್ದರೆ. ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್‌ನಿಂದ 25 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+