Heavy Rain: ಚಂಡಮಾರುತ ಪ್ರಭಾವ: ಈ ಭಾಗಗಳಲ್ಲಿ ಧಾರಾಕಾರ ಮಳೆ: ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!
Heavy Rain: ಭಾರತದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮೇಘಸ್ಫೋಟ ಹಾಗೂ ಚಂಡಮಾರುತದ ಪ್ರಭಾವದಿಂದಾಗಿ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಆಗಸ್ಟ್ 06ರಿಂದ ಆಗಸ್ಟ್ 12ರ ವರೆಗೆ ದಕ್ಷಿಣ ಭಾರತವೂ ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಎಲ್ಲಿಲ್ಲಿ ಹಾಗೂ ಇನ್ನೆಷ್ಟು ದಿನ ಮಳೆಯ ಅಬ್ಬರ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಉತ್ತರಾಖಂಡದಲ್ಲಿ ಮೇಘಸ್ಫೋಟವಾಗಿದ್ದು ಇನ್ನೂ ಮಳೆ ಮುಂದುವರಿದಿದೆ. ಮೇಘಸ್ಫೋಟದಿಂದ ಹಲವರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಆಗಸ್ಟ್ 6 ರಿಂದ 12 ರವರೆಗೆ ಉತ್ತರಾಖಂಡ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಉತ್ತರಾಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಆಗಸ್ಟ್ 12ರ ವರೆಗೆ ಮಳೆ ಆರ್ಭಟ ಇರಲಿದೆ ಎಂದು ಹೇಳಲಾಗಿದೆ. ಹಿಮಾಚಲ ಪ್ರದೇಶದಲ್ಲೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಪಂಜಾಬ್, ಹಿಮಾಲಯನ್ ಪ್ರದೇಶ, ಪಶ್ಚಿಮ ಬಂಗಾಳ, ಗೋವಾ, ತಮಿಳುನಾಡು, ಉತ್ತರ ಒಳನಾಡಿನ ಕರ್ನಾಟಕದ ಕೆಲವು ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಉತ್ತರ ಹರಿಯಾಣ, ಪೂರ್ವ ಉತ್ತರ ಪ್ರದೇಶ, ಕರಾವಳಿ ಆಂಧ್ರಪ್ರದೇಶ, ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಮಧ್ಯ ಮಹಾರಾಷ್ಟ್ರ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ತೆಲಂಗಾಣ, ಅರುಣಾಚಲ ಪ್ರದೇಶ, ಅಸ್ಸಾಂ ಹಾಗೂ ತ್ರಿಪುರದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
ದೆಹಲಿಯಲ್ಲಿ ಭಾರೀ ಮಳೆ: ಇನ್ನು ಕಳೆದ ಮೂರು ದಿನಗಳಿಂದ ದೆಹಲಿಯ ವಿವಿಧ ಭಾಗದಲ್ಲಿ ಉತ್ತಮ ಮಳೆ ಇದೆ. ದೆಹಲಿ ಹಾಗೂ ಎನ್‌ಸಿಆರ್ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು. ಮಳೆಯಿಂದಾಗಿ ಗಾಳಿಯ ಗುಣಮಟ್ಟ ಸುಧಾರಿಸಿದೆ. ಇನ್ನೂ ಎರಡು ದಿನಗಳ ಕಾಲ ಈ ಭಾಗದಲ್ಲಿ ಮಳೆ ಮುಂದುವರಿಯಲಿದೆ. ಉಳಿದಂತೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಉತ್ತರ ಪ್ರದೇಶದಲ್ಲಿ ಭಾರೀ ಮಳೆ: ಇನ್ನು ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ನದಿ ಹಾಗೂ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಅಯೋಧ್ಯೆಯಲ್ಲಿ ಸರಯು ನದಿ ಅಪಾಯದ ಮಟ್ಟವನ್ನು ಮೀರಿದೆ. ವಾರಣಾಸಿಯಲ್ಲಿ ಧಾರಾಕಾರ ಮಳೆಯಿಂದಾಗಿ ಗಂಗಾ ನದಿ ಮೈದುಂಬಿ ಹರಿಯುತ್ತಿದೆ. ಅಲ್ಲದೇ ವಿವಿಧ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಹಾರ, ಹರಿಯಾಣ, ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಭಾಗದಲ್ಲೂ ಧಾರಾಕಾರ ಮಳೆ ಮುಂದುವರಿದಿದೆ.
ದಕ್ಷಿಣ ಭಾರತದಲ್ಲಿ ಧಾರಾಕಾರ ಮಳೆ: ಇನ್ನು ದಕ್ಷಿಣ ಭಾರತದ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಎರಡು ದಿನಗಳವರೆಗೆ ಕೇರಳ ಹಾಗೂ ತಮಿಳುನಾಡಿನ ಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಈ ಭಾಗದಲ್ಲಿ ರೆಡ್ ಅಲರ್ಟ್ ಕೊಟ್ಟಿದೆ. ಅಲ್ಲದೇ ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಐಎಂಡಿ ರಿಪೋರ್ಟ್ ಮಾಡಿದೆ.












Click it and Unblock the Notifications