Heavy Rain: ಈ ಭಾಗಗಳಲ್ಲಿ ಧಾರಾಕಾರ ಮಳೆ: IMDಯಿಂದ ಆರೆಂಜ್, ಯೆಲ್ಲೋ ಅಲರ್ಟ್!
Heavy Rain: ಚಂಡಮಾರುತದ ಪ್ರಸರಣ ಹಾಗೂ ವಾಯುಭಾರ ಕುಸಿತದ ಕಾರಣದಿಂದ ದೇಶದ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಭಾರತದಾದ್ಯಂತ ಮಳೆ ಅಬ್ಬರ ಜೋರಾಗಿದೆ. ಇನ್ನೂ ಒಂದು ವಾರಗಳ ಕಾಲ ಬೆಂಗಳೂರು ಸೇರಿ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಯಾವೆಲ್ಲಾ ಭಾಗದಲ್ಲಿ ಮಳೆ ಆಗಲಿದೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ದೇಶದಾದ್ಯಂತ ಮಾನ್ಸೂನ್ ಮತ್ತೆ ಚುರುಕು ಪಡೆದುಕೊಂಡಿದೆ. ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ 5 ದಿನಗಳ ವರೆಗೆ ದೇಶದ ಮಧ್ಯ ಭಾಗಗಳಲ್ಲಿ ಮಾನ್ಸೂನ್ ಸಕ್ರಿಯವಾಗಿರಲಿದ್ದು ಭಾರೀ ಮಳೆ ಆಗಲಿದೆ ಎಂದು ಭಾರತ ಹವಾಮಾನ ಇಲಾಖೆ ವರದಿ ತಿಳಿಸಿದೆ. ಹೀಗಾಗಿ ವಿವಿಧ ಭಾಗದಲ್ಲಿ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಹಲವಾರು ಪ್ರದೇಶಗಳಲ್ಲಿ ವ್ಯಾಪಕ ಹಾಗೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಾಖಂಡ, ತ್ರಿಪುರ, ಮಿಜೋರಾಂ, ಗುಜರಾತ್, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕೊಂಕಣ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ನೆರೆಯ ಕೇರಳದಲ್ಲೂ ಮಳೆ ಆರ್ಭಟ ಮುಂದುವರಿದಿದೆ. ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಅದರ ಪ್ರಭಾವ ಕರ್ನಾಟಕದ ಮೇಲೆಯೂ ಆಗುತ್ತಿದೆ.
ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರದ ವರದಿಯ ಪ್ರಕಾರ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಛತ್ತೀಸ್‌ಗಢ, ಹರಿಯಾಣ, ದೆಹಲಿ, ಹಿಮಾಚಲ ಪ್ರದೇಶ, ಪಂಜಾಬ್ ಹಾಗೂ ಉತ್ತರ ಪ್ರದೇಶ ಭಾಗದ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
ಕಳೆದ ಒಂದು ವಾರದಿಂದಲೂ ದೆಹಲಿ ಹಾಗೂ ಎನ್‌ಸಿಆರ್ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು. ಪ್ರವಾಹ ಪರಿಸ್ಥಿತಿ ಎದುರಾಗಿದೆ. ದೆಹಲಿಯ ಹಲವು ರಸ್ತೆಗಳು ಜಲಾವೃತವಾಗಿವೆ. ದೆಹಲಿಯಲ್ಲಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಇಂದು ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಉಳಿದ ಕರೆ ಮಳೆ ಆರ್ಭಟ ತುಸು ಇಳಿಕೆ ಆಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ. ದೆಹಲಿಯಲ್ಲಿ ಇಂದು ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹರಿಯಾಣದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ ಜುಲೈ 11 ರಂದು ಗುಡುಗು ಸಹಿತ ಮಿಂಚು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದ್ದು ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ.












Click it and Unblock the Notifications