Heavy Rain: ಈ ಭಾಗಗಳಲ್ಲಿ ಧಾರಾಕಾರ ಮಳೆ, ರೆಡ್, ಆರೆಂಜ್ & ಯೆಲ್ಲೋ ಅಲರ್ಟ್ ಘೋಷಣೆ!
Heavy Rain: ಕರ್ನಾಟಕ ಸೇರಿದಂತೆ ದೇಶದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆ ಮುಂದುವರಿಯಲಿದೆ. ಭಾರತದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆಯಾಗುತ್ತಿದೆ. ಐಎಂಡಿ ವರದಿಯಲ್ಲೇನಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆ ಅಬ್ಬರ ಜೋರಾಗಿದೆ. ನೈಋತ್ಯ ಮಾನ್ಸೂನ್ ಚುರುಕುಪಡೆದುಕೊಂಡಿದೆ ಇದರಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆ ಆಗ್ತಿದೆ. ಇನ್ನು ಕಳೆದ ತಿಂಗಳಿನಿಂದ ನಿರಂತರವಾಗಿ ಹಿಮಾಚಲ ಪ್ರದೇಶದಲ್ಲಿ ಮಳೆ ಆಗುತ್ತಿದ್ದು. ಈ ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು. ಹಲವು ಭಾಗದಲ್ಲಿ ರೆಡ್, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ಮಧ್ಯಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈ ರಾಜ್ಯದಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಐಎಂಡಿ ವರದಿಯ ಪ್ರಕಾರ, ಮಧ್ಯಪ್ರದೇಶದಲ್ಲಿ ಈ ವಾರ ಪೂರ್ತಿ ಮಳೆಯಾಗುವ ನಿರೀಕ್ಷೆಯಿದೆ. ಈ ರಾಜ್ಯದಲ್ಲಿ ವಿವಿಧ ಭಾಗದಲ್ಲಿ ಬುಧವಾರ ರೆಡ್ ಹಾಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಶುಕ್ರವಾರ ಈ ರಾಜ್ಯದಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ದೆಹಲಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಬುಧವಾರ ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬುಧವಾರ ಮತ್ತು ಗುರುವಾರ ಈ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು. ಮಿಂಚು - ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೆಹಲಿಯಲ್ಲಿ ಗರಿಷ್ಠ ತಾಪಮಾನವು ಇಳಿಕೆಯಾಗಿದೆ. ಬುಧವಾರ ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಸುಧಾರಿಸಿದೆ. ಉತ್ತಮ ಮಳೆಯಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಇಳಿಕೆಯಾಗಿದೆ ಎಂದು ಹೇಳಲಾಗಿದೆ. ದೆಹಲಿಯಲ್ಲಿ ವಿಪರೀತ ಕಲುಷಿತ ವಾತಾವರಣವಿದೆ. ಇದೀಗ ಕಳೆದ ಒಂದು ವಾರದಿಂದ ಮಳೆಯಾಗುತ್ತಿರುವುದರಿಂದ ಹವಾಮಾನ ಸುಧಾರಿಸಿದೆ ಎಂದು ವರದಿಯಾಗಿದೆ.
ದಕ್ಷಿಣ ಭಾರತದಲ್ಲಿ ಮಳೆ ಅಬ್ಬರ: ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.












Click it and Unblock the Notifications