Get Updates
Get notified of breaking news, exclusive insights, and must-see stories!

India Rain Alert: ಕರ್ನಾಟಕವೂ ಸೇರಿದಂತೆ ಭಾರತದ ಈ ರಾಜ್ಯಗಳಲ್ಲಿ ಭಾರೀ ಮಳೆ- ಮಾಹಿತಿ, ವಿವರ

ನವದೆಹಲಿ, ನವೆಂಬರ್‌ 09: ಕರ್ನಾಟಕವೂ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ರಾಯಲಸೀಮಾ, ತಮಿಳುನಾಡು, ಕರಾವಳಿ ಕರ್ನಾಟಕ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ ಹಾಗೂ ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕದ ಉತ್ತರ ಒಳನಾಡು ಮತ್ತು ಲಕ್ಷದ್ವೀಪಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

Heavy rain in these states of India including Karnataka - information, details

ಹಿಮಾಚಲ ಪ್ರದೇಶದ ಕೆಲ ಭಾಗಗಳಲ್ಲಿ ಸಾಮಾನ್ಯ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅಂಡಮಾನ್-ನಿಕೋಬಾರ್ ದ್ವೀಪಗಳು, ಕೊಂಕಣ-ಗೋವಾ ಮತ್ತು ರಾಯಲಸೀಮಾದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಪ್ರತ್ಯೇಕ ಮಳೆ ಅಥವಾ ಹಿಮ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಪಶ್ಚಿಮ ರಾಜಸ್ಥಾನ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಮಿಂಚಿನ ಸಾಧ್ಯತೆಯೊಂದಿಗೆ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.

Heavy rain in these states of India including Karnataka - information, details

ತಮಿಳುನಾಡಿನಲ್ಲಿ ಆರೇಂಜ್‌ ಅಲರ್ಟ್‌

ಭಾರತೀಯ ಹವಾಮಾನ ಇಲಾಖೆಯು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ನವೆಂಬರ್ 8 ಹಾಗೂ 9 ರಂದು 'ಆರೆಂಜ್ ಅಲರ್ಟ್' ಘೋಷಿಸಿದೆ.

ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್‌ನ ಆರಂಭವು ತೀವ್ರಗೊಂಡಿದ್ದು, ಕಳೆದ ಕೆಲವು ದಿನಗಳಿಂದ ದಿಂಡಿಗಲ್, ತೇಣಿ ರಾಮನಾಥಪುರಂ, ಮಧುರೈ, ತೆಂಕಶಿ, ಮತ್ತು ತಿರುನಲ್ವೇಲಿ ಜಿಲ್ಲೆಗಳನ್ನು ಒಳಗೊಂಡಂತೆ ದಕ್ಷಿಣದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಏತನ್ಮಧ್ಯೆ, ಚೆನ್ನೈನಲ್ಲಿ ಭಾರೀ ಮಳೆಯು ದೈನಂದಿನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ರಾಜಧಾನಿ ಚೆನ್ನೈ ನಗರದಲ್ಲಿ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ. ಟ್ರಾಫಿಕ್ ದಟ್ಟಣೆಯಂತಹ ಸಮಸ್ಯೆಗಳು ಮಹಾನಗರದಲ್ಲಿ ಕಂಡುಬಂದಿದೆ. ಇದರಿಂದ ಜನರು ಪರದಾಡುವಂತಾಗಿದೆ.

Heavy rain in these states of India including Karnataka - information, details

ಚೆಂಗಲ್ಪಟ್ಟು, ಕಾಂಚೀಪುರಂ, ವಿಲ್ಲುಪುರಂ, ಕಡಲೂರು, ಪುದುಚೇರಿ, ಮೈಲಾಡುತ್ರುಯಿ, ಕಾರೈಕಲ್, ನಾಗಪಟ್ಟಿಣಂ, ತಿರುವರೂರ್ ಜಿಲ್ಲೆಗಳಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗಲಿದೆ ಎಂದು ಚೆನ್ನೈ ಪ್ರಾದೇಶಿಕ ಮಾಪನಶಾಸ್ತ್ರ ಕೇಂದ್ರ ಮುನ್ಸೂಚನೆ ನೀಡಿದೆ. ಇದು ಮುಂದಿನ 24 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಅದೇ ರೀತಿ, ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ಕನ್ಯಾಕುಮಾರಿ, ತೂತುಕುಡಿ ಮತ್ತು ತಿರುನಲ್ವೇಲಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘುವಾಗಿ ಸಾಧಾರಣ ಮಳೆಯಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಈಶಾನ್ಯ ಮಾನ್ಸೂನ್ ಇದುವರೆಗಿನ ಋತುವಿನಲ್ಲಿ ಸಾಮಾನ್ಯಕ್ಕಿಂತ 21 ಶೇಕಡಾ ಕಡಿಮೆ ಮಳೆಯಾಗಿದೆ.

'ತಮಿಳುನಾಡು ಮತ್ತು ಪುದುಚೇರಿಯಲ್ಲಿ ನವೆಂಬರ್ 1 ರಿಂದ ನವೆಂಬರ್ 8 ರವರೆಗೆ 187.0 ಮಿಮೀ ಮಳೆ ದಾಖಲಾಗಿದೆ' ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್‌ನಲ್ಲಿ ನವೆಂಬರ್ 7 ರಿಂದ 10 ರವರೆಗೆ ನಿರ್ದಿಷ್ಟ ಪ್ರದೇಶಗಳಲ್ಲಿ ಚದುರಿದ ಲಘು ಮಳೆ ಅಥವಾ ಹಿಮಪಾತದ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನವೆಂಬರ್ 8 ರಿಂದ 10 ರವರೆಗೆ ಇದೇ ರೀತಿಯ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.

ಇದಲ್ಲದೆ, ನವೆಂಬರ್ 9 ರಂದು ಪಂಜಾಬ್ ಜೊತೆಗೆ ಪಶ್ಚಿಮ ರಾಜಸ್ಥಾನದಲ್ಲಿ ಪ್ರತ್ಯೇಕವಾದ ಲಘು ಮಳೆಯ ಸುರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+