• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಡೋದರಾ, ಅಜ್ಮೇರ್, ಲೂದಿಯಾನ ಭಾಗಶಃ ಜಲಾವೃತ

|

ಬೆಂಗಳೂರು, ಆಗಸ್ಟ್ 2: ವಡೋದರ, ಅಜ್ಮೇರ್, ಲೂದಿಯಾನ ಭಾಗಶಃ ಜಲಾವೃತವಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಉತ್ತರ ಕರ್ನಾಟಕ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಯಾದಗಿರಿ ಭಾಗಗಳಲ್ಲು ಪ್ರವಾಹ ಭೀತಿ ಎದುರಾಗಿದೆ.

ವಿಡಿಯೋ: ಗುಜರಾತ್ ಪ್ರವಾಹ, ಬೀದಿಯಲ್ಲಿ ಈಜಾಡಿದ ಮೊಸಳೆ!ವಿಡಿಯೋ: ಗುಜರಾತ್ ಪ್ರವಾಹ, ಬೀದಿಯಲ್ಲಿ ಈಜಾಡಿದ ಮೊಸಳೆ!

ಆಲಮಟ್ಟಿಯ ಲಾಲ್‌ಬಹದ್ದೂರ್ ಶಾಸ್ತ್ರಿ ಜಲಾಶಯ ಭರ್ತಿಯಾಗಿದ್ದು, ಲಕ್ಷಾಂತರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಬಾಗಲಕೋಟೆಯಲ್ಲೂ ಪ್ರವಾಹ ಸೃಷ್ಟಿಸಿದೆ. ಜಮಖಂಡಿ ತಾಲುಕಿನ ಮುತ್ತೂರು ಗ್ರಾಮ ನಡುಗಡ್ಡೆಯಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಜಮಖಂಡಿ ತಾಲೂಕಿನ ತುಬಚಿ, ಶೂರ್ಪಾಲಿ ಗ್ರಾಮಗಳ ಸಂಚಾರ ಮಾರ್ಗ ಬಂದ್ ಮಾಡಲಾಗಿದೆ. ನಾರಾಯಣಪುರ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಬಿಡಲಾಗಿದೆ. ರಾಯಚೂರು ತಾಲೂಕಿನ ಆತ್ಕೂರು ಹಾಗೂ ಕುರ್ವಾಕುಲ ನಡುಗಡ್ಡೆ ನಡುವಿನ ಸೇತುವೆ ಮುಳುಗಡೆಯಾಗಿವೆ.

ಜೊತೆಗೆ, ಪಶ್ಚಿಮ ತೀರ ರಾಜ್ಯಗಳಾದ ಗುಜರಾತ್, ರಾಜಸ್ಥಾನದ ಜೊತೆಗೆ ಪಂಜಾಬ್‍ನ ಲೂದಿಯಾನ ಹಾಗೂ ಪಾಕಿಸ್ತಾನದ ಬಂದರು ನಗರಿ ಕರಾಚಿಯಲ್ಲೂ ಪ್ರವಾಹ ಪರಿಸ್ಥಿತಿ ಇದೆ. ವಡೋದರಾದಲ್ಲಿ ರಸ್ತೆಗಳಲ್ಲೇ ದೇಹದ ಅರ್ಧಭಾಗಕ್ಕಿಂತ ಹೆಚ್ಚಿನ ಮಟ್ಟಕ್ಕೆ ನೀರು ತುಂಬಿದ್ದು, ಮನೆಗಳು ಸಂಪೂರ್ಣ ಜಲಾವೃತವಾಗಿವೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆ, ಹಿಪ್ಪರಗಿ ಜಲಾಶಯಕ್ಕೆ ಹರಿದುಬಂದಿದೆ ನೀರು ಮಹಾರಾಷ್ಟ್ರದಲ್ಲಿ ಭಾರಿ ಮಳೆ, ಹಿಪ್ಪರಗಿ ಜಲಾಶಯಕ್ಕೆ ಹರಿದುಬಂದಿದೆ ನೀರು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 7 ಸೇತುವೆಗಳು ಹಾಗೂ ರಾಯಬಾಗ ತಾಲೂಕಿನ ಎರಡು ಸೇತುವೆಗಳು ಜಲಾವೃತಗೊಂಡಿವೆ. ಚಿಕ್ಕೋಡಿ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಪ್ರವಾಹ ಭೀತಿ ಆವರಿಸಿದೆ.

ಮೊಸಳೆಗಳು ಸಹ ಜನನಿಬಿಡ ಪ್ರದೇಶಕ್ಕೆ ನುಗ್ಗಿದ್ದು, ಜನರಲ್ಲಿ ಆತಂಕ ಮೂಡಿಸಿವೆ. ಇದುವರೆಗೂ 5 ಮಂದಿ ಜಲಸಮಾಧಿಯಾಗಿದ್ದಾರೆ. ರಾಜಸ್ಥಾನದ ಅಜ್ಮೇರ್, ಬಿಕಾನೇರ್‍ಗಳಲ್ಲಿ ಅಕ್ಷರಶಃ ಪ್ರವಾಹ. ಬೈಕ್‍ಗಳು ನೀರಿನಲ್ಲಿ ತೇಲುತ್ತಿವೆ ತೇಲುತ್ತಿವೆ. ಭಾರೀ ಮಳೆಗೆ ಮನೆಗಳೇ ಕುಸಿದಿವೆ.

English summary
Heavy Rain Lash and 5000 Evacuated in Vadodara, Karnataka's 5 districts facing flood like situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X