ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈನಲ್ಲಿ ಧಾರಾಕಾರ ಮಳೆ: ಕರ್ನಾಟಕದಲ್ಲೂ ಸಾಧ್ಯತೆ

|
Google Oneindia Kannada News

ಬೆಂಗಳೂರು, ಜನವರಿ 1: ಚೆನ್ನೈನಲ್ಲಿ ಕಳೆದ ಒಂದು ದಿನದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕರ್ನಾಟಕದಲ್ಲೂ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚೆನ್ನೈನ ಕೊಯಂಬೀಡು ಸೇರಿದಂತೆ ಹಲವೆಡೆ ಮಳೆಯಾಗಿದೆ. ಕರ್ನಾಟಕದ ಸೊರಬ(ಶಿವಮೊಗ್ಗ), ಉಚ್ಚಂಗಿದುರ್ಗ(ದಾವಣಗೆರೆ), ತ್ಯಾಗರ್ತಿ(ಶಿವಮೊಗ್ಗ), ಹೊಳಲ್ಕೆರೆ(ಚಿತ್ರದುರ್ಗ)ದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಚೆನ್ನೈನಲ್ಲಿ ಡಿಸೆಂಬರ್ ಅಂತ್ಯದೊಳಗೆ 633.9 ಮಿ.ಮೀನಷ್ಟು ಮಳೆಯಾಗಿದೆ. ಬೆಳಗಾವಿಯಲ್ಲಿ ಕನಿಷ್ಠ 11.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ. ಇನ್ನುಳಿದಂತೆ ಎಲ್ಲೆಡೆ ಒಣಹವೆ ಮುಂದುವರೆಯಲಿದೆ.

Heavy Rain Lashes In Chennai

ಬೆಂಗಳೂರಿನಲ್ಲಿ ಮೋಕವಿದ ವಾತಾವರಣವಿದ್ದು, ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ಬೆಂಗಳೂರು ನಗರದಲ್ಲಿ ಗರಿಷ್ಠ 27.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ ನಲ್ಲಿ ಗರಿಷ್ಠ 27.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.3 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 27.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Heavy Rain Lashes In Chennai, the Northeast Monsoon (NEM) season will officially come to an end. And data from the India Meteorological Department (IMD) shows that the NEM has been normal over Tamil Nadu and Rayalseema.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X