Rain alert: ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ 3 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು, ಅಕ್ಟೋಬರ್ 10: ದೇಶದ ವಿವಿಧ ರಾಜ್ಯಗಳ ದಕ್ಷಿಣ ಭಾರತದ ತಮಿಳುನಾಡು, ಕೇರಳ ಮತ್ತು ಕರ್ನಾಟಕದಲ್ಲಿ ಮುಂದಿನ ಮೂರು ದಿನ ಜೋರು ಮಳೆ ಸಂಭವ ಇದೆ. ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಮುನ್ಸೂಚನೆಗಳು ಇವೆ. ತಮಿಳುನಾಡಿನ ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಬೀಳಬಹುದು. ಈಶಾನ್ಯ ಭಾರತದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

Heavy Rain Likely Over Karnataka, Tamil Nadu and Kerala During Next 2 Days as IMD Predicts

ಇಂದು ಮಂಗಳವಾರದಿಂದ ಶುಕ್ರವಾರದವರೆಗೆ ನೈಋತ್ಯ ಮುಂಗಾರು ಮಳೆ ಪೂರ್ವ ಉತ್ತರ ಪ್ರದೇಶ ಮತ್ತು ಪೂರ್ವ ಮಧ್ಯಪ್ರದೇಶದ ಉಳಿದ ಭಾಗಗಳಿಂದ ಕೊನೆಗೊಳ್ಳಲಿದೆ.

ಕರ್ನಾಟಕ, ಕೇರಳ, ತಮಿಳುನಾಡಲ್ಲಿ ಭಾರಿ ಮಳೆ

ಅಕ್ಟೋಬರ್ 11 ರವರೆಗೆ ತಮಿಳುನಾಡು, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕೇರಳದ ಮೇಲೆ ಗುಡುಗು ಮತ್ತು ಮಿಂಚಿನ ಜೊತೆಗೆ ಪ್ರತ್ಯೇಕವಾದ ಭಾರೀ ಮಳೆ ದಾಖಲಾಗಲಿದೆ. ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಂತರ ಕಡಿಮೆಯಾಗುವ ಸಾಧ್ಯತೆ ಇದೆ.

ಮುನ್ಸೂಚನೆ ಪ್ರಕಾರ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳು ಸಾಧಾರಣ ಮಳೆಗೆ ಸಾಕ್ಷಿಯಾಗಲಿವೆ. ಮುಂದಿನ ಐದು ದಿನಗಳಲ್ಲಿ ಮಧ್ಯ ಮತ್ತು ಪಶ್ಚಿಮ ಭಾರತದ ರಾಜ್ಯಗಳಲ್ಲಿ ಮಳೆ ವಾತಾವರಣ ಇರವುದಿಲ್ಲ. ಹೀಗಾಗಿ ಇಲ್ಲಿನ ಹವಾಮಾನದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ ಎಂದು ಇಲಾಖೆ ತಿಳಿಸಿದೆ.

Heavy Rain Likely Over Karnataka, Tamil Nadu and Kerala During Next 2 Days as IMD Predicts

ಪ್ರದೇಶವಾರು ಹವಾಮಾನ ಮುನ್ಸೂಚನೆಗಳು

ಭಾರತದ ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದ ಮೇಲೆ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಆಗಲಿದೆ. ಇದರ ಹೊರತಾಗಿ ಬಹುತೇಕ ಪಡೆದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ. ನಂತರ ಈ ಪ್ರದೇಶಗಳಲ್ಲಿ ಮಳೆ ಮತ್ತಷ್ಟು ಕ್ಷೀಣಿಸಲಿದೆ.

ದಕ್ಷಿಣ ಭಾರತದ ಮೂರು ರಾಜ್ಯಗಳನ್ನು ಬಿಟ್ಟು ಅಕ್ಟೋಬರ್ 9 ರಿಂದ 11 ರವರೆಗೆ ಹಗುರದಿಂದ ಸಾಧಾರಣ ಮಳೆ ಆಗಲಿದೆ. ತಮಿಳುನಾಡು, ದಕ್ಷಿಣ ಒಳ ಕರ್ನಾಟಕ ಮತ್ತು ಕೇರಳದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಅಕ್ಟೋಬರ್ 12ರಿಂದ ಮಳೆ ಕಡಿಮೆಯಾಗಲಿದೆ.

ಇನ್ನೂ ವಾಯುವ್ಯ ಭಾರತದಲ್ಲಿ ಅಕ್ಟೋಬರ್ 14ರಿಂದ 15 ರವರೆಗೆ ಕಾಶ್ಮೀರ-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಾಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಗುಡುಗು ಮತ್ತು ಮಿಂಚುಗಳೊಂದಿಗೆ ಕೆಲವು ಸ್ಥಳಗಳಲ್ಲಿ ಲಘು ಮಳೆ ಆಗಲಿದೆ ಎಂದು ಮುನ್ಸೂಚನೆ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+