Heavy Rain: ಅವಧಿ ಪೂರ್ವ ಮುಂಗಾರು: ಈ ಭಾಗಗಳಲ್ಲಿ ಧಾರಾಕಾರ ಮಳೆ: ಐಎಂಡಿ ರಿಪೋರ್ಟ್!

Heavy Rain: ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು ದೇಶದಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕದಲ್ಲಿ ರೆಡ್,ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ನೆರೆಯ ಕೇರಳ ರಾಜ್ಯದಲ್ಲೂ ಧಾರಾಕಾರ ಮಳೆ ಮುಂದುವರಿದಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಮಾನ್ಸೂನ್ ತೀವ್ರಗೊಳ್ಳುತ್ತಿದ್ದು. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಹಾಗೂ ಕರ್ನಾಟಕದಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ದೆಹಲಿಗೆ ಇಂದು (ಜೂನ್‌ 29)ರಂದು ಮಾನ್ಸೂನ್‌ ಪ್ರವೇಶವಾಗುತ್ತಿದೆ. ಹೀಗಾಗಿ, ಉತ್ತರ ಭಾರತದಲ್ಲಿ ಮಾನ್ಸೂನ್ ತೀವ್ರಗೊಳ್ಳುತ್ತಿದ್ದು ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ದೆಹಲಿ-ಎನ್‌ಸಿಆರ್‌ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಿದೆ. ಮುಂದಿನ ಮೂರು ದಿನಗಳ ಅವಧಿಯಲ್ಲಿ ಈ ಭಾಗದಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗಲಿದ್ದು. ಗಾಳಿಯ ವೇಗವು ಪ್ರತಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಹೇಳಲಾಗಿದೆ. ಉತ್ತರಾಖಂಡದಲ್ಲಿ ಭಾರೀ ಮಳೆ ಆಗುತ್ತಿದ್ದು ಈ ಭಾಗದಲ್ಲಿ ರೆಡ್ ಅಲರ್ಟ್ ಕೊಡಲಾಗಿದೆ. ಅಲ್ಲದೇ ಭಾರೀ ಮಳೆ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಮುಂದಿನ 24 ಗಂಟೆ ಅವಧಿಗೆ ಚಾರ್ ಧಾಮ್ ಯಾತ್ರೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ.

Heavy Rain Pre-monsoon period Heavy rain in these parts IMD report

ಮುಂದುವರಿದು ಬದರಿನಾಥ ಮತ್ತು ಕೇದಾರನಾಥಕ್ಕೆ ಹೋಗುವ ಯಾತ್ರಾರ್ಥಿಗಳಿಗೂ ವಿಶೇಷ ಸೂಚನೆ ನೀಡಲಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಈಗಾಗಲೇ ದೇವಾಲಯಗಳಲ್ಲಿ ಯಾತ್ರಾರ್ಥಿಗಳಿಗೆ ಕಟ್ಟುನಿಟ್ಟಿನ ಸುರಕ್ಷತಾ ಸೂಚನೆಗಳನ್ನು ನೀಡಲಾಗಿದೆ. ಹಿಮಾಚಲ ಪ್ರದೇಶದಲ್ಲಿಯೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.

ಉತ್ತರ ಭಾರತದಲ್ಲಿಯೂ ಮಳೆ ಮುಂದುವರಿದಿದೆ. ದೆಹಲಿ, ಹರಿಯಾಣ, ಹಿಮಾಚಲ ಹಾಗೂ ಉತ್ತರಾಖಂಡದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಇಲ್ಲಿನ ಕೆಲವು ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಮುನ್ನೆಚ್ಚರಿಕೆ ಕೊಡಲಾಗಿದೆ.

ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ: ಇನ್ನು ದಕ್ಷಿಣ ಭಾರತದ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದ ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನ ಕೆಲವು ಭಾಗದಲ್ಲಿ ಮಳೆ ಮುಂದುವರಿದಿದೆ. ಕರ್ನಾಟಕ ಹಾಗೂ ಕೇರಳ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕೇರಳದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ಜುಲೈ 8ರ ವರೆಗೆ ಮಳೆ ಅಬ್ಬರ: ದೇಶದಾದ್ಯಂತ ಜುಲೈ 8ರ ವರೆಗೆ ಧಾರಾಕಾರ ಮಳೆ ಆಗಲಿದೆ. ವಿವಿಧ ರಾಜ್ಯಗಳಲ್ಲಿ ಮಳೆ ಅಬ್ಬರವು ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಅವಧಿ ಪೂರ್ವ ಮಾನ್ಸೂನ್‌ ಪ್ರವೇಶ: ದೇಶದಲ್ಲಿ ಈ ಬಾರಿ ಅವಧಿ ಪೂರ್ವ ಮಾನ್ಸೂನ್‌ ಪ್ರವೇಶವಾಗಿದೆ. ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ ಹಾಗೂ ದೆಹಲಿ ಭಾಗದಲ್ಲಿ ಹಾಗೂ ಉತ್ತರ ಭಾರತದಾದ್ಯಂತ ಮಾನ್ಸೂನ್‌ ಜೂನ್‌ 29ಕ್ಕೆ ಪ್ರವೇಶವಾಗುತ್ತಿದೆ. ಸಾಮಾನ್ಯವಾಗಿ ಈ ಭಾಗದಲ್ಲಿ ಜುಲೈ 8ಕ್ಕೆ ಮಾನ್ಸೂನ್‌ ಪ್ರವೇಶವಾಗಬೇಕಿತ್ತು. ಆದರೆ 9 ದಿನಗಳ ಮುಂಚೆಯೇ ಮಾನ್ಸೂನ್‌ ಪ್ರವೇಶವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+