Heavy Rain In Goa: ಗೋವಾದಲ್ಲಿ ರೆಡ್ ಅಲರ್ಟ್- ಪ್ರವಾಸಿಗರಿಗೆ ಬಾಗಿಲು ಮುಚ್ಚಿದ ಪೊಲೀಸರು, ವರದಿ, ವಿವರ
ಪಣಜಿ, ಜುಲೈ 06: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗೋವಾದಲ್ಲಿ 'ರೆಡ್' ಅಲರ್ಟ್ ಘೋಷಿಸಿದೆ. ಕರಾವಳಿ ರಾಜ್ಯದಾದ್ಯಂತ ಗುರುವಾರ, ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಗೋವಾದ ಹೆಸರಾಂತ ಬೀಚ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗುವುದು, ದುರ್ಬಲವಾದ ಮರಗಳು ಮತ್ತು ಕಟ್ಟಡಗಳು ಬೀಳುವುದು, ಅಗತ್ಯ ಸೇವೆಗಳಿಗೆ ಅಡ್ದಿಯಾಗುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಗೋವಾ ಎದುರಿಸಬಹುದು ಎನ್ನಲಾಗಿದೆ. ತೀವ್ರವಾದ ಮಳೆಯ ಸಮಯದಲ್ಲಿ ಬೆಳಕು ಮಂದವಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾವುದೇ ಪ್ರವಾಹದ ಸಂದರ್ಭದಲ್ಲಿ ಜನರು ಸಂಪರ್ಕಿಸಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಹಾಯವಾಣಿಗಳನ್ನು ನೀಡಿದೆ. ಉತ್ತರ ಗೋವಾ ಮತ್ತು ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ತಲಾ ಒಂದರಂತೆ ಎರಡು ವಿಭಿನ್ನ ಸಹಾಯವಾಣಿಗಳನ್ನು ಗೋವಾ ಸರ್ಕಾರ ನೀಡಿದೆ. ಅಪಾಯಕಾರಿ ಸ್ಥಳಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದೆ.
'ಗೋವಾದಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗದಂತೆ ಜನರಿಗೆ ಸೂಚಿಸಲಾಗಿದೆ. ಯಾವುದೇ ತುರ್ತು ಸಂದರ್ಭದಲ್ಲಿ ದಯವಿಟ್ಟು ನಿಯಂತ್ರಣ ಕೊಠಡಿಗಳನ್ನು ಸಂಪರ್ಕಿಸಿ' ಎಂದು ಬುಧವಾರ ಸಂಜೆ ಬಿಡುಗಡೆ ಮಾಡಿದ ಮಾಧ್ಯಮ ಹೇಳಿಕೆಯಲ್ಲಿ ಸರ್ಕಾರ ತಿಳಿಸಿದೆ.
ಹವಾಮಾನ ಇಲಾಖೆ ಪ್ರಕಾರ, ರಾಜ್ಯದ ರಾಜಧಾನಿ ಪಣಜಿಯಲ್ಲಿ ಬುಧವಾರ 76.7 ಮಿಮೀ ಮಳೆಯಾಗಿದೆ. ಈ ಮಳೆಗಾಲದಲ್ಲಿ ಒಟ್ಟು 1,025.6 ಮಿಮೀ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಬುಧವಾರ ಸಂಜೆ ಬಿಡುಗಡೆಯಾದ ಹವಾಮಾನ ಇಲಾಖೆಯ ಬುಲೆಟಿನ್ ಪ್ರಕಾರ, ಉತ್ತರ ಗೋವಾ ಜಿಲ್ಲೆಯ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಿದೆ.
ಉತ್ತರ ಗೋವಾ ಮತ್ತು ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಅರೇಬಿಯನ್ ಸಮುದ್ರದ ಮೂಲಕ ಮೋಡಗಳು ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಉತ್ತರ ಗೋವಾ ಮತ್ತು ದಕ್ಷಿಣ ಗೋವಾದಲ್ಲಿ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ತಿಳಿಸಿದೆ. ಪ್ರತ್ಯೇಕ ಸ್ಥಳಗಳು ಮತ್ತು ಘಾಟ್ ಪ್ರದೇಶಗಳಲ್ಲಿ ದೀರ್ಘಾವಧಿಯ ಮಳೆ ಬೀಳಬಹುದು ಎಂದು ಹೇಳಲಾಗಿದೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಪ್ರವಾಸಿಗಳಿಗೆ ಗೋವಾಕ್ಕೆ ತೆರಳಲು ನಿರ್ಬಂಧ ಹೇರಲಾಗಿದೆ. ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.












Click it and Unblock the Notifications