India Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ ಸಾಧ್ಯತೆ: ಭಾರತದ ಈ ಭಾಗದಲ್ಲಿ ತಂಪೆರೆಯಲಿರುವ ವರುಣ
ದೇಶದ ಹಲವಾರು ಪ್ರದೇಶದಲ್ಲಿ ಇಂದು ವಾತಾವರಣದಲ್ಲಿ ಬದಲಾವಣೆಗಲಾಗಲಿದ್ದು ನಾನಾ ಕಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದೆಹಲಿ, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್ ನಲ್ಲಿ ಹವಾಮಾನದಲ್ಲಿ ಬದಲಾವಣೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಇಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಪ್ರಕಾರ, ಮುಂದಿನ 23 ಗಂಟೆಗಳಲ್ಲಿ ಅಂದರೆ ಏಪ್ರಿಲ್ 20 ಮತ್ತು 21 ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಚಂಡಮಾರುತ, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗಬಹುದು.

ಈಶಾನ್ಯ ಭಾರತದ ಹವಾಮಾನ ವರದಿ
ಜೊತೆಗೆ ಉತ್ತರ ಪಂಜಾಬ್ ಮತ್ತು ಉತ್ತರ ಹರಿಯಾಣದಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಈಶಾನ್ಯ ಭಾರತದ ಬಗ್ಗೆ ಮಾತನಾಡುವುದಾದರೆ, ಏಪ್ರಿಲ್ 20 ಮತ್ತು 21 ರ ನಡುವೆ ಲಘುವಾಗಿ ಸಾಧಾರಣ ಮಳೆಯಾಗಲಿದ್ದು ಚಂಡಮಾರುತದ ಸಾಧ್ಯತೆಯಿದೆ. ಹಿಮಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿಯೂ ಸಹ ಲಘು ವರಣು ಧರೆಗಿಳಿಯುವ ಸಾಧ್ಯತೆ ಇದೆ. ಅಲ್ಲದೆ ಏಪ್ರಿಲ್ 20 ರಿಂದ 22 ರ ನಡುವೆ ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕದಲ್ಲಿ ಮಳೆ
ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರ್ನಾಟಕದ ಒಳನಾಡಿನ ಬಗ್ಗೆ ಮಾತನಾಡುವುದಾದರೆ, ಇಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಕಳೆದ 24 ಗಂಟೆಗಳಲ್ಲಿ ದೇಶದ ಹವಾಮಾನದ ಬಗ್ಗೆ ಮಾತನಾಡುವುದಾದರೆ, ಪಶ್ಚಿಮ ಹಿಮಾಲಯ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ಕೆಲವು ಭಾಗಗಳಲ್ಲಿ ಮಳೆ ಮತ್ತು ಹಿಮಪಾತವಾಗಿದೆ. ಅರುಣಾಚಲ ಪ್ರದೇಶದ ಒಂದೆರಡರಲ್ಲಿ ಭಾರೀ ಮಳೆಯಾಗಿದ್ದು ವಾತಾವರಣ ಕೊಂಚ ತಂಪಾಗಿದೆ.
ದೇಶದ ಯಾವ ಭಾಗದಲ್ಲಿ ಮಳೆ
ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಲಘು ಮಳೆಯಾಗಿದೆ. ಕರ್ನಾಟಕದಲ್ಲಿಯೂ ಅಲ್ಲಲ್ಲಿ ಮಳೆಯಿಂದಾಗಿ ಹವಾಮಾನದಲ್ಲಿ ಬದಲಾವಣೆ ಕಂಡು ಬಂದಿದೆ. ಇನ್ನೂ ಪಂಜಾಬ್, ಹರಿಯಾಣ, ರಾಜಸ್ಥಾನ, ಒಡಿಶಾ, ಅಸ್ಸಾಂ, ಮೇಘಾಲಯ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿಯೂ ಮಳೆಯಾಗಿದೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಭಾರೀ ಮಳೆ ಮತ್ತು ಹಿಮಪಾತದ ಸಾಧ್ಯತೆಯನ್ನು ಹವಾಮಾನ ಇಲಾಖೆ ವ್ಯಕ್ತಪಡಿಸಿದೆ. ಹಿಮಾಚಲ ಪ್ರದೇಶದಲ್ಲಿ ಗುಡುಗು ಸಹಿತ ಚಂಡಮಾರುತದ ಸಾಧ್ಯತೆ ವ್ಯಕ್ತವಾಗಿದೆ. ಮಾತ್ರವಲ್ಲದೆ ಪಂಜಾಬ್‌ನಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಪೂರ್ವ ಭಾರತದಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆಯೂ ವ್ಯಕ್ತವಾಗಿದೆ.












Click it and Unblock the Notifications