ದಕ್ಷಿಣ ಭಾರತದಲ್ಲಿ ತೀವ್ರ ಮಳೆಯ ಎಚ್ಚರಿಕೆ: ನಾಸಿಕ್‌ನಲ್ಲಿ ಗೋದಾವರಿ ಪ್ರವಾಹ- ದೆಹಲಿಯ ಸ್ಥಿತಿ ತಿಳಿಯಿರಿ
ನವದೆಹಲಿ ಸೆಪ್ಟೆಂಬರ್ 02: ಇಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಅಪ್‌ಡೇಟ್‌ನಲ್ಲಿ ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಇಂದಿನಿಂದ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ತಮಿಳುನಾಡು, ಕೇರಳ, ಮಾಹೆ, ಕರ್ನಾಟಕ, ಪಶ್ಚಿಮ ಬಂಗಾಳದಲ್ಲಿ ಅಧಿಕ ಮಳೆಯಾಗಲಿದೆ. ಮಾತ್ರವಲ್ಲದೆ ಮುಂದಿನ ಐದು ದಿನಗಳಲ್ಲಿ ಸಿಕ್ಕಿಂ, ಮೇಘಾಲಯದಲ್ಲೂ ತೀವ್ರ ಮಳೆ ಎಚ್ಚರಿಕೆ ನೀಡಲಾಗಿದೆ.
ನಿನ್ನೆಯಿಂದಲೇ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ರಾಯಗಢ, ರತ್ನಗಿರಿ, ಸಿಂಧುದುರ್ಗ, ಅಹಮದ್‌ನಗರ, ಪುಣೆ, ಕೊಲ್ಲಾಪುರ, ಸತಾರಾ ಮತ್ತು ಸಾಂಗ್ಲಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದ್ದರೆ, ನಾಸಿಕ್ ಮತ್ತು ಶಿರಡಿಯಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಗೋದಾವರಿ ನೀರಿನ ಮಟ್ಟ ಹೆಚ್ಚಾಗಿದೆ.

ಜನ ಸಂಚಾರಕ್ಕೆ ತೊಂದರೆ
ನಾಸಿಕ್ ಜಿಲ್ಲೆಯ ತ್ರಯಂಬಕೇಶ್ವರ, ಇಗತ್‌ಪುರಿ ಮತ್ತು ದಿಂಡೋರಿಯಲ್ಲಿ ಜಲಾವೃತವಾಗಿದ್ದು, ಶಿರಡಿ ನಗರದಲ್ಲಿ ಭಾರೀ ಮಳೆಯಿಂದಾಗಿ ಮೊಣಕಾಲು ಆಳದ ನೀರು ಜನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ದೇವಸ್ಥಾನಕ್ಕೆ ತೆರಳಲು ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂದು ಕೂಡ ಇಲ್ಲಿ ಮತ್ತು ನಾಸಿಕ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಮಾನ ಇಲಾಖೆ ಮುನ್ಸೂಚನೆ
ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಬಿಹಾರ, ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಲಘುವಾಗಿ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಉತ್ತರಾಖಂಡದಲ್ಲಿ ಹಳದಿ ಅಲರ್ಟ್
ಇನ್ನೂ ರಾಜಧಾನಿ ದೆಹಲಿಯ ಬಗ್ಗೆ ಮಾತನಾಡಿದರೆ, ವಾತಾವರಣವು ಆರ್ದ್ರವಾಗಿರುತ್ತದೆ, ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣವಿರುತ್ತದೆ ಮತ್ತು ದೆಹಲಿಯ ಗರಿಷ್ಠ ತಾಪಮಾನ 38 ಮತ್ತು ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಆಗಿರಬಹುದು. ಇಂದು ಯುಪಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಇಂದು ಮಳೆಯಾಗುವ ಸಂಭವ
ಖಾಸಗಿ ಹವಾಮಾನ ಮಾಹಿತಿ ಸಂಸ್ಥೆ ಸ್ಕೈಮೆಟ್, ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಕೇರಳ, ತಮಿಳುನಾಡು, ರಾಯಲಸೀಮಾ, ತೆಲಂಗಾಣ, ಛತ್ತೀಸ್‌ಗಢ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಅಸ್ಸಾಂ, ಸಿಕ್ಕಿಂ, ಅರುಣಾಚಲ ಪ್ರದೇಶದಲ್ಲಿ ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಪ್ರಕಟಿಸಿದೆ. ನಾಗಾಲ್ಯಾಂಡ್‌ನಲ್ಲಿ ಅಧಿಕ ಮತ್ತು ಉತ್ತರ ಭಾರತದಲ್ಲಿ ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ.












Click it and Unblock the Notifications