Heavy Rain: ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ-ಪುರಾತತ್ವ ಇಲಾಖೆ ಅಧಿಕಾರಿಗಳು ಹೇಳಿದ್ದೇನು?
ನವದೆಹಲಿ, ಸೆಪ್ಟೆಂಬರ್, 14: ದೇಶದ ಹಲವೆಡೆ ಇದೀಗ ಮಳೆರಾಯನ ಆರ್ಭಟ ತಗ್ಗಿದ್ದು, ಇನ್ನೂ ಕೆಲವೆಡೆ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಇನ್ನು ಆಗ್ರಾದಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಸುರಿದ ಪರಿಣಾಮ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್‌ಮಹಲ್‌ನ ಮುಖ್ಯ ಗುಮ್ಮಟ ಸೂರುತ್ತಿದ್ದು, ಆವರಣದಲ್ಲಿರುವ ಉದ್ಯಾನಕ್ಕೂ ನೀರು ನುಗ್ಗಿದೆ.
ತಾಜ್‌ಮಹಲ್ ಆವರಣದಲ್ಲಿರುವ ಉದ್ಯಾನ ಮುಳುಗಡೆ ಅಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಹಿರಿಯ ಅಧಿಕಾರಿಯೊಬ್ಬರು, ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿ ಆಗಿಲ್ಲ ಎಂದು ತಿಳಿಸಿದ್ದಾರೆ.

ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿನ ಸೋರಿಕೆ ಕುರಿತು ಮಾತನಾಡಿದ ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಅಧೀಕ್ಷಕ ರಾಜ್‌ಕುಮಾರ್ ಪಟೇಲ್ ಅವರು, "ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆ ಆಗಿರುವುದನ್ನು ನಾವು ನೋಡಿದ್ದೇವೆ. ಪರಿಶೀಲನೆ ಮಾಡಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿ ಆಗಿಲ್ಲ. ಡ್ರೋನ್ ಕ್ಯಾಮೆರಾ ಮೂಲಕ ಮುಖ್ಯ ಗುಮ್ಮಟವನ್ನು ಪರಿಶೀಲಿಸಿದ್ದೇವೆ," ಎಂದು ತಿಳಿಸಿದರು.
🚨🇮🇳 | The symbol of love, Taj Mahal, is flooded. The garden situated in the premises of this beautiful building is submerged. It has been raining continuously for the last 24 hours in Agra. Efforts are on to drain out the water.
— Weather monitor (@Weathermonitors) September 12, 2024
📌 #Agra | #UttarPradesh | #india#tajmahal… https://t.co/V3YoVyg79y pic.twitter.com/iMTMWxdPv6
ಮೋನಿಕಾ ಶರ್ಮಾ ಹೇಳಿದ್ದೇನು?: ತಾಜ್ ಮಹಲ್ ಆಗ್ರಾ ಮತ್ತು ಇಡೀ ರಾಷ್ಟ್ರದಲ್ಲೇ ಸುಂದರ ಪ್ರವಾಸಿ ತಾಣಗಳಲ್ಲಿ ಒದಾಗಿದೆ, ಅಲ್ಲದೆ ಹೆಮ್ಮೆಯಾಗಿದೆ. ಇದು ನೂರಾರು ಸ್ಥಳೀಯರಿಗೆ ಮತ್ತು ಪ್ರವಾಸೋದ್ಯಮದಲ್ಲಿ ಕೆಲಸ ಮಾಡುವವರಿಗೆ ಉದ್ಯೋಗ ನೀಡಿದೆ. ಈ ಸ್ಮಾರಕದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು ಎಂದು ಸರ್ಕಾರದ ಅನುಮೋದಿತ ಪ್ರವಾಸಿ ಮಾರ್ಗದರ್ಶಿ ಮೋನಿಕಾ ಶರ್ಮಾ ಅವರು ತಿಳಿಸಿದ್ದಾರೆ.












Click it and Unblock the Notifications