Rain Alert in India: ದಕ್ಷಿಣ ಭಾರತದ ಈ ರಾಜ್ಯಗಳಲ್ಲಿ ಮುಂದುವರಿಯಲಿದೆ ಮಳೆ- ಮಾಹಿತಿ, ವಿವರ

ನವದೆಹಲಿ, ಅಕ್ಟೋಬರ್‌ 16: ಮಾನ್ಸೂನ್‌ ಕೊನೆಗೊಂಡರೂ ಈ ವಾರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ಕೆಲ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಐಎಂಡಿ ನೀಡಿದೆ.

ಕೇರಳ ಮತ್ತು ಮಾಹೆಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಪಂಜಾಬ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

heavy-rain-will-continue-in-these-states

ದಕ್ಷಿಣ ಒಳನಾಡಿನ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ.

ಕೇರಳದಲ್ಲಿ ಭಾರೀ ಮಳೆ

ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಯಿಂದ ತತ್ತರಿಸಿರುವ ಕೇರಳದಲ್ಲಿ ಸೋಮವಾರ ಬೆಳಗ್ಗೆ ವರುಣ ತುಸು ಬಿಡುವು ನೀಡಿದ್ದಾನೆ. ಜಲಾವೃತ ಪ್ರದೇಶಗಳಿಂದ ನೀರು ಇಳಿಮುಖವಾಗಿದ್ದರೂ, ಮಧ್ಯಾಹ್ನದ ವೇಳೆಗೆ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

heavy-rain-will-continue-in-these-states

ಭಾರತೀಯ ಹವಾಮಾನ ಇಲಾಖೆಯು ಸೋಮವಾರ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ. ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಐಎಂಡಿ ಪ್ರಕಾರ, ತಮಿಳುನಾಡು ಕರಾವಳಿ ಮತ್ತು ನೆರೆಹೊರೆಗಳಲ್ಲಿನ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯಾಗಿದೆ.

ಕರ್ನಾಟಕದಲ್ಲಿ ಮಳೆ

ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ನಿರೀಕ್ಷೆ ಇದೆ.

heavy-rain-will-continue-in-these-states

ಕರ್ನಾಟಕ ನಿನ್ನೆ ಬಿದ್ದ ಮಳೆ ಪ್ರಮಾಣ

ಉತ್ತರ ಕನ್ನಡ: 53 ಮಿ.ಮೀ
ಧಾರವಾಡ: 47.5 ಮಿ.ಮೀ
ಹಾವೇರಿ: 47 ಮಿ.ಮೀ
ಉಡುಪಿ: 25.5 ಮಿ.ಮೀ
ದಕ್ಷಿಣ ಕನ್ನಡ: 23.5 ಮಿ.ಮೀ
ಮಂಡ್ಯ: 23.5 ಮಿ.ಮೀ

ಹೆಚ್ಚು ಮಳೆ ಬೀಳುವ ಸ್ಥಳಗಳು

ಬುಜುರ್ಕಾಂಚನಳ್ಳಿ, ಉತ್ತರ ಕನ್ನಡ: 53 ಮಿ.ಮೀ
ಜಿನ್ನೂರು, ಧಾರವಾಡ: 47.5 ಮಿ.ಮೀ
ಬೈಚವಳ್ಳಿ, ಹಾವೇರಿ: 47 ಮಿ.ಮೀ
ಕಂಚಿನಗಳೂರು, ಹಾವೇರಿ: 40 ಮಿ.ಮೀ
ಹಾನಗಲ್, ಹಾವೇರಿ: 35 ಮಿ.ಮೀ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+