ಮುಂಗಾರು: ದಕ್ಷಿಣ ಕೊಂಕಣ, ಗೋವಾದಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಜೂನ್ 10: ನೈಋತ್ಯ ಮುಂಗಾರು ಮತ್ತಷ್ಟು ಪ್ರಭಲವಾಗುತ್ತಿದ್ದು ಅರೇಬಿಯನ್ ಸಮುದ್ರ, ಕೊಂಕಣದ ಕೆಲವು ಭಾಗ, ಮಧ್ಯ ಮಹಾರಾಷ್ಟ್ರ, ವಿದರ್ಭಾ, ಛತ್ತೀಸ್‌ಘಡ, ಒಡಿಶಾ ಪಶ್ಚಿಮ ಬಂಗಾಳದಲ್ಲಿ ಅದರ ಪ್ರಭಾವ ಗೋಚರಿಸಲಿದೆ.
ಇನ್ನು ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಸಿಕ್ಕಿಂನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಂಕಣ, ಗೋವಾ, ಮಣಿಪುರ, ಮಿಜೋರಾಮ್, ಮಧ್ಯಪ್ರದೇಶ, ಅಸ್ಸಾಂ, ಮೇಘಾಲಯ, ಉತ್ತರಖಂಡ, ಭಾರಿ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರಖಂಡ, ಹಿಮಾಚಲಪ್ರದೇಶ, ಪಂಜಾಬ್, ಹರಿಯಾಣ, ರಾಜಸ್ತಾನ, ಜಾರ್ಖಂಡ್, ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಜೂನ್ 10-11 ಅವಧಿಯಲ್ಲಿ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿಪರೀತ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಕೇಂದ್ರ ಮಾರಾಷ್ಟ್ರ ಸೇರಿದಂತೆ ಕೊಂಕಣ ಪ್ರದೇಶದಲ್ಲಿ ಸುತ್ತಲಿನ ಆರು ಜಿಲ್ಲೆಗಳಲ್ಲಿ ಜೂನ್ 10-11ರಂದು ಇದೇ ರೀತಿ ವಾತಾವರಣ ಮುಂದುವರೆಯಲಿದೆ.ಹವಾಮಾನ ಇಲಾಖೆ ವರದಿ ಪ್ರಕಾರ ದೇಶದ ಕೇಂದ್ರ ಭಾಗದಲ್ಲಿ ಈ ಬಾರಿ ಸಾಮಾನ್ಯ ಮಳೆಯಾಗಲಿದೆ. ಆದರೆ, ದಕ್ಷಿಣದ ಕರ್ನಾಟಕ, ತೆಲಂಗಾಣ , ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಪುದುಚೆರಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
In Pics : ಹುಚ್ಚೆದ್ದು ಹೊಡೆಯುತ್ತಿರುವ ಮಳೆಗೆ ಮುಳುಗಿದ ಮಂಗಳೂರು
ಎಲ್‌ಪಿಎ ಶೇ.90-96ರವರೆಗಿನ ಮಳೆಯನ್ನು ಸಾಮಾನ್ಯಕ್ಕಿಂತ ಕಡಿಮೆ ಎಂದು ಪರಿಗಣಿಸಲಾಗುತ್ತದೆ. ಶೇ.96-104ರ ವರೆಗಿನ ಎಲ್‌ಪಿಎಯನ್ನು ಸಾಮಾನ್ಯ ಎಂದು ಪರಿಗಣಿಸಲಾಗುತ್ತದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications