ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಗಾರು: ದಕ್ಷಿಣ ಕೊಂಕಣ, ಗೋವಾದಲ್ಲಿ ಭಾರಿ ಮಳೆ ಸಾಧ್ಯತೆ

By Nayana
|
Google Oneindia Kannada News

ಬೆಂಗಳೂರು, ಜೂನ್ 10: ನೈಋತ್ಯ ಮುಂಗಾರು ಮತ್ತಷ್ಟು ಪ್ರಭಲವಾಗುತ್ತಿದ್ದು ಅರೇಬಿಯನ್ ಸಮುದ್ರ, ಕೊಂಕಣದ ಕೆಲವು ಭಾಗ, ಮಧ್ಯ ಮಹಾರಾಷ್ಟ್ರ, ವಿದರ್ಭಾ, ಛತ್ತೀಸ್‌ಘಡ, ಒಡಿಶಾ ಪಶ್ಚಿಮ ಬಂಗಾಳದಲ್ಲಿ ಅದರ ಪ್ರಭಾವ ಗೋಚರಿಸಲಿದೆ.

ಇನ್ನು ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಸಿಕ್ಕಿಂನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಂಕಣ, ಗೋವಾ, ಮಣಿಪುರ, ಮಿಜೋರಾಮ್‌, ಮಧ್ಯಪ್ರದೇಶ, ಅಸ್ಸಾಂ, ಮೇಘಾಲಯ, ಉತ್ತರಖಂಡ, ಭಾರಿ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂಬೈನಲ್ಲಿ ಭಾರಿ ಮಳೆ ನಿರೀಕ್ಷೆ, ಕಡಲಿಗೆ ಇಳಿಯದಂತೆ ಕೇರಳ ಮೀನುಗಾರರಿಗೆ ಸೂಚನೆಮುಂಬೈನಲ್ಲಿ ಭಾರಿ ಮಳೆ ನಿರೀಕ್ಷೆ, ಕಡಲಿಗೆ ಇಳಿಯದಂತೆ ಕೇರಳ ಮೀನುಗಾರರಿಗೆ ಸೂಚನೆ

ಉತ್ತರಖಂಡ, ಹಿಮಾಚಲಪ್ರದೇಶ, ಪಂಜಾಬ್, ಹರಿಯಾಣ, ರಾಜಸ್ತಾನ, ಜಾರ್ಖಂಡ್, ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಜೂನ್ 10-11 ಅವಧಿಯಲ್ಲಿ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿಪರೀತ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

Heavy rainfall expected in south konkan and Goa

ಕೇಂದ್ರ ಮಾರಾಷ್ಟ್ರ ಸೇರಿದಂತೆ ಕೊಂಕಣ ಪ್ರದೇಶದಲ್ಲಿ ಸುತ್ತಲಿನ ಆರು ಜಿಲ್ಲೆಗಳಲ್ಲಿ ಜೂನ್ 10-11ರಂದು ಇದೇ ರೀತಿ ವಾತಾವರಣ ಮುಂದುವರೆಯಲಿದೆ.ಹವಾಮಾನ ಇಲಾಖೆ ವರದಿ ಪ್ರಕಾರ ದೇಶದ ಕೇಂದ್ರ ಭಾಗದಲ್ಲಿ ಈ ಬಾರಿ ಸಾಮಾನ್ಯ ಮಳೆಯಾಗಲಿದೆ. ಆದರೆ, ದಕ್ಷಿಣದ ಕರ್ನಾಟಕ, ತೆಲಂಗಾಣ , ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಪುದುಚೆರಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

In Pics : ಹುಚ್ಚೆದ್ದು ಹೊಡೆಯುತ್ತಿರುವ ಮಳೆಗೆ ಮುಳುಗಿದ ಮಂಗಳೂರು

ಎಲ್‌ಪಿಎ ಶೇ.90-96ರವರೆಗಿನ ಮಳೆಯನ್ನು ಸಾಮಾನ್ಯಕ್ಕಿಂತ ಕಡಿಮೆ ಎಂದು ಪರಿಗಣಿಸಲಾಗುತ್ತದೆ. ಶೇ.96-104ರ ವರೆಗಿನ ಎಲ್‌ಪಿಎಯನ್ನು ಸಾಮಾನ್ಯ ಎಂದು ಪರಿಗಣಿಸಲಾಗುತ್ತದೆ.

English summary
Southwest Monsoon into some more parts of Chhattisgarh, Odisha, some parts of West Bengal Sikkim, remaining parts of northwest Bay of Bengal and Northeastern States during next 48 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X