Weather Forecast: ಒಂದು ವಾರ ಗುಡುಗು ಸಹಿತ ಮಳೆ ಮುನ್ಸೂಚನೆ-ಎಲ್ಲೆಲ್ಲಿ?

Weather Forecast: ಡಾನಾ ಚಂಡಮಾರುತದ ಪ್ರಭಾವ ಹಿನ್ನೆಲೆ ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.

ಈಗಾಗಲೇ ಚಂಡಮಾರುತದ ಪ್ರಭಾವ ಹಿನ್ನೆಲೆ ಕರಾವಳಿ ರಾಜ್ಯಗಳಾದ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಿದೆ. ಹಾಗೆಯೇ ಮುಂದಿನ ಒಂದು ವಾರ ದೇಶದ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy rainfall forecast for next one week in these states from october 28 IMD

ಇನ್ನು ಇಂದು (ಅಕ್ಟೋಬರ್ 28) ದೇಶ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮಧ್ಯ, ಪಶ್ಚಿಮ ಮತ್ತು ದಕ್ಷಿಣ ಭಾರತದ ರಾಜ್ಯಗಳನ್ನು ಒಳಗೊಂಡಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿರುವ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರದ ಮರಾಠವಾಡ, ಗೋವಾ, ಕೇರಳ, ತಮಿಳುನಾಡಿನಲ್ಲಿ ಅಬ್ಬರದ ಮಳೆ ಸುರಿಯಲಿದೆ ಎಂದು ತಿಳಿಸಿದೆ.

ಯಾವಾಗ ತಗ್ಗಲಿದೆ ಮಳೆ.?: ದೇಶದ ಹಲವೆಡೆ ಅಕ್ಟೋಬರ್ ಅಂತ್ಯದವರೆಗೂ ಮಳೆ ಮುಂದುವರೆಯಲಿದೆ. ಇನ್ನು ನವೆಂಬರ್ 1ರಿಂದ ದೇಶದಲ್ಲಿ ಮಳೆರಾಯನ ಆರ್ಭಟ ಬಹುತೇಕ ತಗ್ಗಲಿದೆ ಎಂದು ತಿಳಿಸಿದೆ. ಇನ್ನು ಇಂದು ನವದೆಹಲಿಯಲ್ಲಿ ಯಾವುದೇ ಮಳೆಯ ವಾತಾವರಣ ಇಲ್ಲ. ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಕೆ ತಿಳಿಸಿದೆ.

ಎಲ್ಲೆಲ್ಲಿ ಭಾರೀ ಮಳೆ: ಭಾನುವಾರ (ಅಕ್ಟೋಬರ್‌ 27) ರಾತ್ರಿ 8:30ರ ವರೆಗಿನ 24 ಗಂಟೆಗಳಲ್ಲಿ, ದೇಶದ ಅನೇಕ ಭಾಗಗಳಲ್ಲಿ ಸಾಧಾರಣ ಮಳೆ ದಾಖಲಾಗಿದೆ. ಇನ್ನು ಡಾನಾ ಚಂಡಮಾರುತ ಪ್ರಭಾವ ಹಿನ್ನೆಲೆ ಒಡಿಶಾದಲ್ಲಿ ಮಳೆ ಮುಂದುವರೆದಿದ್ದು, ಪಶ್ಚಿಮ ಬಂಗಾಳ, ಜಾರ್ಖಂಡ್, ಲಕ್ಷದ್ವೀಪ ಮತ್ತು ಅರುಣಾಚಲ ಪ್ರದೇಶದಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ ಎಂದು ತಿಳಿಸಿದೆ.

ಅಕ್ಟೋಬರ್‌ 30ರ ವರೆಗೂ ಮಳೆ: ಅಕ್ಟೋಬರ್ 28 ರಿಂದ ಅಕ್ಟೋಬರ್ 30ರ ವರೆಗೆ ಗೋವಾ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಮಧ್ಯ ಮಹಾರಾಷ್ಟ್ರ, ಕೊಂಕಣ, ತಮಿಳುನಾಡು, ಕಾರೈಕಲ್, ಮತ್ತು ಪುದುಚೇರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಪಶ್ಚಿಮ ಬಂಗಾಳ ಮತ್ತು ಲಕ್ಷದ್ವೀಪದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಒಂದು ವಾರ ಮಳೆ: ಇನ್ನು ಈ ವಾರ ಪೂರ್ತಿ ತಮಿಳುನಾಡು, ಕೇರಳ, ಮಾಹೆ, ಪುದುಚೇರಿ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು-ಕಾಶ್ಮೀರ, ಮುಜಾಫರ್‌ಬಾದ್, ಗಿಲ್ಗಿಟ್ ಮತ್ತು ಲಡಾಖ್‌ನಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+