Weather Report: ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ?

Weather Forecast: ಈಗಾಗಲೇ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಮತ್ತೆ ಚಳಿಗಾಲದಲ್ಲೂ ಹಲವೆಡೆ ಮಳೆ ಮುಂದಜವರೆದಿದೆ. ಹಾಗೆಯೇ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನ ನೀಡಿದೆ.

ಎಲ್ಲೆಲ್ಲಿ ಭಾರೀ ಮಳೆ?: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 11 ರಿಂದ 15ರ ವರೆಗೆ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್ ಮತ್ತು ಕೇರಳದ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ನವೆಂಬರ್‌ 12ರಂದು ಕರಾವಳಿ ಆಂಧ್ರ ಪ್ರದೇಶ, ಯಾನಂ ಮತ್ತು ರಾಯಲಸೀಮಾದಲ್ಲಿ ನವೆಂಬರ್ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Heavy rainfall forecast in these states for Next 4-5 days from november 10 IMD

ಹಿಮಾಚಲ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ನವೆಂಬರ್ 10ರಿಂದ 12ರ ವರೆಗೆ ದಟ್ಟವಾದ ಮಂಜು ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದೆ. ಇನ್ನು ನವೆಂಬರ್ 10 ಮತ್ತು 11ರಂದು ವಾಯುವ್ಯ ಪಂಜಾಬ್‌ನ ಪ್ರತ್ಯೇಕ ಸ್ಥಳಗಳಲ್ಲಿ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 4-5 ದಿನಗಳಲ್ಲಿ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಕನಿಷ್ಠ ತಾಪಮಾನ 2-3 ಡಿಗ್ರಿಗಳಷ್ಟು ಕಡಿಮೆಯಾಗುವ ಸಾಧ್ಯತೆಯಿದೆ. ಇನ್ನು ಮತ್ತೊಂದೆಡೆ ಮುಂದಿನ ವಾರ ದೇಶದ ಉಳಿದ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದೆ.

ನವದೆಹಲಿಯ ಹವಾಮಾನದ ವಿವರ: ಕಳೆದ 24 ಗಂಟೆಗಳಲ್ಲಿ ನವದೆಹಲಿಯಲ್ಲಿ ಗರಿಷ್ಠ/ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನವದೆಹಲಿಯಲ್ಲಿ ಗರಿಷ್ಠ 30-32 °C ಮತ್ತು ಕನಿಷ್ಠ ತಾಪಮಾನ 15 -20 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ನವೆಂಬರ್ 12ರವರೆಗೆ ವಾಯುಮಾಲಿನ್ಯ ಕಡಿಮೆಯಾಗುವ ಸಾಧ್ಯತೆಯಿದೆ. ಆದರೂ ಇಂದು (ನವೆಂಬರ್ 10) ಗಾಳಿಯ ಗುಣಮಟ್ಟ ಕಳಪೆಯಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+