ಮುಂದಿನ ಒಂದು ವಾರ ಮಳೆ ಮುನ್ಸೂಚನೆ-ಎಲ್ಲೆಲ್ಲಿ? ಇಲ್ಲಿದೆ ವಿವರ

ದೇಶದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಇನ್ನೂ ಕೆಲವೆಡೆ ಮಾತ್ರ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಕರ್ನಾಟಕ ಸೇರಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಸೆಪ್ಟೆಂಬರ್‌ 21ರಂದು ತಮಿಳುನಾಡು, ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಆಂಧ್ರಪ್ರದೇಶದದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಹಾಗಾದರೆ ಸೆಪ್ಟೆಂಬರ್‌ 27ರವರೆಗೆ ಎಲ್ಲೆಲ್ಲಿ ಯಾವ್ಯಾವಾಗ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

Heavy rainfall forecast in These states for next one week

ಭಾರತದ ಹವಾಮಾನ ಇಲಾಖೆಯು ದೇಶದ ಹಲವು ಭಾಗಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಒಡಿಶಾದಲ್ಲಿ ಸೆಪ್ಟೆಂಬರ್ 22ರಿಂದ 24 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಸೆಪ್ಟೆಂಬರ್ 22 ರಿಂದ 26ರ ವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಇಳಿಸಿದೆ.

ಸೆಪ್ಟೆಂಬರ್ 23 ಮತ್ತು 26 ರವರೆಗೂ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಸೆಪ್ಟೆಂಬರ್ 26 ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಸೆಪ್ಟೆಂಬರ್ 27ರಿಂದ ಅಕ್ಟೋಬರ್ 3ರವರೆಗೆ ರಾಜಸ್ಥಾನದ ಪೂರ್ವ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಶನಿವಾರ (ಸೆಪ್ಟೆಂಬರ್ 21) ಬಿಸಿಲಿನ ವಾರಾವರಣ ಇರಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇಂದು ಇದೇ ರೀತಿಯ ವಾತಾವರಣ ಇರುವ ಸಾಧ್ಯತೆಯಿದೆ. ಸೆಪ್ಟೆಂಬರ್ 22ರಿಂದ 23ರವರೆಗೆ ಈಶಾನ್ಯ ಭಾರತದಾದ್ಯಂತ ಹೆಚ್ಚು ತಾಪಮಾನ ಇರಲಿದೆ ಎಂದು ಎಚ್ಚರಿಕೆ ನೀಡಿದೆ.

ಎರಡು ವಾರ ಮಳೆಯಾಗುವ ಮುನ್ಸೂಚನೆ: ಮುಂದಿನ ಎರಡು ವಾರಗಳ ಕಾಲ ಪಶ್ಚಿಮ ಮತ್ತು ದಕ್ಷಿಣ ಭಾರತದ ಭಾಗದ ಅಲ್ಲಲ್ಲಿ ಚದುರಿದಂತೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ ಮತ್ತು ಗೋವಾ, ಮರಾಠವಾಡ, ರಾಯಲಸೀಮಾ, ಮತ್ತು ಕರಾವಳಿ ಮತ್ತು ಕರ್ನಾಟಕದ ಉತ್ತರ ಒಳನಾಡಿನ ಭಾಗದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ನವದೆಹಲಿ ಹವಾಮಾನದ ವಿವರ: ನಗರದಲ್ಲಿ ಶನಿವಾರ (ಸೆಪ್ಟೆಂಬರ್‌ 21) ಮೋಡ ಕವಿದ ವಾತಾವರಣ ಇದ್ದು, ಕನಿಷ್ಠ ತಾಪಮಾನ ಸುಮಾರು 24 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ರಾಜಸ್ಥಾನದಲ್ಲಿ ಭಾರೀ ಮಳೆ: ಚಂಡಮಾರುತದ ಪರಿಚಲನೆಯಿಂದಾಗಿ ಮುಂದಿನ ಎರಡು ವಾರಗಳ ಕಾಲ ರಾಜಸ್ಥಾನದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಮುಂದಿನ 24 ಗಂಟೆಗಳಲ್ಲಿ, ಭರತ್‌ಪುರ, ಜೈಪುರ, ಅಜ್ಮೀರ್, ಉದಯಪುರ, ಬಿಕಾನೇರ್ ಮತ್ತು ಕೋಟಾ ವಿಭಾಗದ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+