Weather Forecast: ಈ ಭಾಗಗಳಲ್ಲಿ ಮುಂದಿನ 6 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
Weather Forecast: ಈಗಾಗಗಲೇ ಮುಂಗಾರು ಮಳೆ ಆರ್ಭಟದಿಂದ ದೇಶದ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇದೀಗ ಚಳಿಗಾಲದಲ್ಲೂ ಹಲವೆಡೆ ಮಳೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 6 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 7ರಿಂದ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಡಿಸೆಂಬರ್ 8ರಿಂದ ವಾಯುವ್ಯ ಭಾರತದ ಹಲವೆಡೆ ಭೀಕರ ಚಳಿಯ ನಡುವೆಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಡಿಸೆಂಬರ್ 7ರಿಂದ ಡಿಸೆಂಬರ್ 9ರ ವರೆಗೆ ವಾಯುವ್ಯ ಭಾರತದ ಹಲವೆಡೆ, ಡಿಸೆಂಬರ್ 8ರಂದು ಉತ್ತರ ಭಾರತದ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇದೇ ವೇಳೆ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಬೀದರ್, ಯಾದಗಿರಿ, ಶಿವಮೊಗ್ಗ, ಕೊಡಗು, ಕೋಲಾರ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ ಎಂದು ತಿಳಿಸಿದೆ.
ಮುಂದಿನ ಒಂದೆರಡು ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ತಾಪಮಾನ ಪ್ರಮಾಣ 2-4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಯಿದೆ. ಗುಜರಾತ್‌ನಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ, ಮುಂದಿನ 4-5 ದಿನಗಳವರೆಗೆ ತಾಪಮಾನದಲ್ಲಿ ಸ್ವಲ್ಪ ವ್ಯತ್ಯಾಸಗಳಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ಹವಾಮಾನದ ವಿವರ: ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ಮತ್ತು ನಗರದ ಸುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇದರ ನಡುವೆಯೂ ಗರಿಷ್ಠ ತಾಪಮಾನವು 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಕಾಶ್ಮೀರದ ಹವಾಮಾನದ ವಿವರ: ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಡಿಸೆಂಬರ್ 4ರಿಂದ 7ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 8ರಿಂದ 9ರ ವರೆಗೆ ಈ ಪ್ರದೇಶದಲ್ಲಿ ಹಿಮ ಹೆಚ್ಚಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 10ರಿಂದ 14ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವದೆಹಲಿಯ ಹವಾಮಾನದ ವಿವರ: ನವದೆಹಲಿಯ ಬಹುತೇಕ ಭಾಗಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ. ಸಂಜೆ ಮತ್ತು ರಾತ್ರಿ ವೇಳೆ ಹೊಗೆಯ ಜೊತೆ ಮಂಜಿನ ವಾತಾವರಣ ನಿರ್ಮಾಣವಾಗಲಿದೆ. ಈಗಾಗಲೇ ಕಳೆದ ಮೂರು ದಿನಗಳಿಂದ ದೆಹಲಿಯ ನಿವಾಸಿಗಳು ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟ ಹಿನ್ನೆಲೆ ವಾಹನ ಸವಾರರು ಹಾಗೂ ಇಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಹಾಗೆಯೇ ಇಂದು (ಡಿಸೆಂಬರ್ 4) ಗಾಳಿಯ ಗುಣಮಟ್ಟ ತೀವ್ರ ಕಳಪೆಯಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.












Click it and Unblock the Notifications