Weather Forecast: ಈ ಭಾಗಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಮುನ್ಸೂಚನೆ

Weather Forecast: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟಿಸಿದೆ. ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿವರ ಇಲ್ಲಿದೆ ಗಮನಿಸಿ.

ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿವ ಸಾಧ್ಯತೆ ಹೆಚ್ಚಿದ್ದು, ಪರಿಣಾಮ ಇಂದು (ನವೆಂಬರ್ 25) ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸುರಿಯಿವ ಸಾಧ್ಯತೆಯಿದೆ. ಹಾಗೆಯೇ ಇನ್ನುಳಿದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy rainfall forecast in these states for Next one week from November 25

ಭಾರತ ಹವಾಮಾನ ಇಲಾಖೆ ಪ್ರಕಾರ, ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾದ ಹಲವು ರಾಜ್ಯಗಳಲ್ಲಿ ಮುಂದಿನ ಒಂದು ವಾರ ಮಂಜಿನ ಜೊತೆ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 25ರಿಂದ 28ರ ವರೆಗೆ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತದ ಪರಿಚಲನೆಯು ತಮಿಳುನಾಡು, ಶ್ರೀಲಂಕಾ ಕರಾವಳಿಯ ಸಮೀಪಕ್ಕೆ ತಲುಪಲಿದೆ. ಪರಿಣಾಮ ನವೆಂಬರ್ 27 ಮತ್ತು 28ರಂದು ಚೆನ್ನೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ನವೆಂಬರ್ 25ರಿಂದ 28ರ ವರೆಗೆ ಚೆನ್ನೈ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಯಾವೆಲ್ಲ ಭಾಗಗಳಿಗೆ ಆರೆಂಜ್‌ ಅಲರ್ಟ್‌?: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನವೆಂಬರ್ 25 ಮತ್ತು 26ರಂದು ತಂಜಾವೂರು, ತಿರುವರೂರ್, ನಾಗಪಟ್ಟಣಂ, ಮೈಲಾಡುತುರೈ, ಮತ್ತು ಕಾರೈಕಾಲ್‌ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನವೆಂಬರ್ 26ರಂದು ಕರಾವಳಿ ಆಂಧ್ರಪ್ರದೇಶದಲ್ಲಿಯೂ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿನ ಕೆಲವು ಭಾಗಗಳಲ್ಲಿ ನವೆಂಬರ್ 27 ಮತ್ತು 28ರಂದು ಸಾಧಾರಣ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ದಟ್ಟ ಮಂಜು ಇರಲಿದೆ?: ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಇದು ವಾಹನ ಸವಾರರಿಗೆ ತುಂಬಾ ಕಿರಿಕಿರಿ ಮಾಡುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಅದರಲ್ಲೂ ಮುಂಜಾನೆ ಸಮಯದಲ್ಲಿ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣ ಆಗಲಿದೆ ಎಂದು ತಿಳಿಸಿದೆ.

ನವೆಂಬರ್ 27-29ರ ವರೆಗೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಂಜು ಇರಲಿದೆ. ಇನ್ನು ನವೆಂಬರ್ 25ರಿಂದ 28ರ ವರೆಗೆ ಹಿಮಾಚಲ ಪ್ರದೇಶದಲ್ಲಿ, ನವೆಂಬರ್ 28ರಿಂದ 30ರ ವರೆಗೆ ಉತ್ತರ ಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+