Heavy Rain: ಮುಂದಿನ 6 ದಿನ ಭಾರಿ ಮಳೆ ಮುನ್ಸೂಚನೆ
Heavy Rain: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ತಗ್ಗಿದೆ. ಇನ್ನು ಕೆಲವು ಭಾಗಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಮುಂದಿನ 6 ದಿನಗಳ ಕಾಳ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಹಲವು ದಿನಗಳ ಭಾರೀ ಮಳೆ ಸುರಿಯಲಿದೆ. ಎಲ್ಲೆಲ್ಲಿ ಎಷ್ಟು ದಿನ ಮಳೆ ಸುರಿಯಲಿದೆ ಎಂದು ಇಲ್ಲಿ ನೀಡಲಾಗಿದೆ ಗಮನಿಸಿ.

ಮುಂದಿನ ಆರು ದಿನಗಳ ಕಾಲ ಪೂರ್ವ ಉತ್ತರ ಪ್ರದೇಶದಾದ್ಯಂತ ವ್ಯಾಪಕ ಮಳೆಯಾಗಲಿದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಮುಂದಿನ ಒಂದು ವಾರ ಉತ್ತರಾಖಂಡದಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮಧ್ಯ ಭಾರತದಲ್ಲಿ ಮುಂದಿನ ಒಂದು ವಾರ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಶಾನ್ಯ ಭಾರತದಲ್ಲಿ ಚದುರಿದಂತೆ ಮುಂದಿನ ಐದು ದಿನಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲೂ ಮುಂದಿನ ಎರಡು ದಿನಗಳ ಕಾಲ ಇದೇ ರೀತಿಯ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮುಂದಿನ ಎರಡು ದಿನಗಳ ಕಾಲ ತಮಿಳುನಾಡಿನ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಸೆಪ್ಟೆಂಬರ್ 29ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಸೆಪ್ಟೆಂಬರ್ 30ರಂದು ತಮಿಳುನಾಡಿನ ಪುದುಚೇರಿ, ಕೇರಳ, ಅರುಣಾಚಲ ಪ್ರದೇಶ, ಲಕ್ಷದ್ವೀಪ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಮಿಜೋರಾಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ರಾಜಸ್ಥಾನದಲ್ಲಿ ಇಂದು (ಸೆಪ್ಟೆಂಬರ್ 29) ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕೋಟಾ, ಉದಯಪುರ ಮತ್ತು ಭರತ್‌ಪುರ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಸೆಪ್ಟೆಂಬರ್ 30ರಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲೂಬಹುದು ಎಂದು ತಿಳಿಸಿದೆ.
ಕಳೆದ ಬಾರಿ ಅಂದರೆ 2023ರಲ್ಲಿ ಮಳೆಯಿಲ್ಲದೆ, ದೇಶದ ಬಹುತೇಕ ಭಾಗಗಳಲ್ಲಿ ಬರ ತಾಂಡವಾ ಆಡುತ್ತಿತ್ತು. ಇನ್ನು ಈ ಬಾರಿ 2024ರ ಜೂನ್ ಆರಂಭವಾಗುತ್ತಿದ್ದಂತೆ ಕೇರಳಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಳಿಕ ದೇಶದ ಎಲ್ಲಾ ಭಾಗಗಳಲ್ಲೂ ಆವರಿಸಿಬಿಟ್ಟಿತ್ತು.
ಅಲ್ಲದೆ, ಈ ಬಾರಿಯ ಮಳೆರಾಯ ಬಹುತೇಕ ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಅದರಲ್ಲೂ ಹರಿಯಾಣದಲ್ಲಿ ದೊಡ್ಡ ದೊಡ್ಡ ಸೇತುವೆಗಳು ಧರಶಾಯಿಯಾಗಿದ್ದವು. ಅದರಲ್ಲೂ ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತವಾಗಿ ತುಂಬಾ ಜನರ, ಜನವಾರುಗಳ ಪ್ರಾಣಹಾನಿ ಸಂಭವಿಸಿದ್ದವು.
ಇನ್ನು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಗುಡ್ಡ ಕುಸಿತದಂತಹ ದೊಡ್ಡ ಅನಾಹತಗಳು ಸಂಭವಿಸಿದ್ದವು. ಇನ್ನು ಗುಡ್ಡ ಕುಸಿತದಿಂದ ಹಲವೆಡೆ ರೈಲು ಸಂಚಾರ, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡ ಘಟನೆಗಳು ನಡೆದಿದ್ದವು. ಮತ್ತೊಂದೆಡೆ ನೋಡುವುದಾದರೆ, ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.












Click it and Unblock the Notifications