Weather Forecast: ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ
Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲ ಆರಂಭವಾಗಿದ್ದರೂ ಕೂಡ ಹಲವೆಡೆ ಮಳೆರಾಯನ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಳ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತದ ಹವಾಮಾನ ಇಲಾಖೆಯ ಪ್ರಕಾರ, ವಾಯುವ್ಯ ಭಾರತದಲ್ಲಿ ಮುಂಜಾನೆ ಮತ್ತು ರಾತ್ರಿ ಸಮಯದಲ್ಲಿ ದಟ್ಟವಾದ ಮಂಜಿನ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಮತ್ತು ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ನವೆಂಬರ್ 15ರ ವರೆಗೆ ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದಂತಹ ಪ್ರದೇಶಗಳಲ್ಲಿ ಬೆಳಗ್ಗೆ & ರಾತ್ರಿ ಸಮಯದಲ್ಲಿ ದಟ್ಟವಾದ ಮಂಜಿನ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ನವೆಂಬರ್ 16ರ ವರೆಗೆ ಹಿಮಾಚಲ ಪ್ರದೇಶ, ಹರಿಯಾಣ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಬಿಹಾರ ಮತ್ತು ಜಾರ್ಖಂಡ್‌ನ ಪ್ರತ್ಯೇಕ ಭಾಗಗಳಲ್ಲಿ ಇದೇ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ದಕ್ಷಿಣ ಮತ್ತು ಕರಾವಳಿ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆಯಾಲಿದೆ ಎಂದು ಮುನ್ಸೂಚನೆ ನೀಡಿದೆ . ನವೆಂಬರ್ 16ರ ವರೆಗೆ ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ನವೆಂಬರ್ 17ರ ವರೆಗೆ ಕೇರಳ & ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ನವೆಂಬರ್ 16ರ ವರೆಗೆ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್, ಕರಾವಳಿ ಆಂಧ್ರಪ್ರದೇಶದ ಹಲವೆಡೆ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ, ಪೂರ್ವ ಭಾರತದಲ್ಲಿ ತಾಪಮಾನ ಕುಸಿತವಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು
ಮುಂದಿನ 5 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-3°C ರಷ್ಟು ಇಳಿಕೆಯಾಗುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಮಧ್ಯ ಭಾರತದಲ್ಲಿ ತಾಪಮಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ತಿಳಿಸಿದೆ.
ಮತ್ತೊಂದೆಡೆ, ಮುಂದಿನ 5 ದಿನಗಳಲ್ಲಿ ಪೂರ್ವ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 3-4°Cರಷ್ಟು ಕುಸಿತ ಆಗುವ ಸಾಧ್ಯತೆಯಿದೆ. ಪಶ್ಚಿಮ ಭಾರತದಲ್ಲಿ, ಮುಂದಿನ ಮೂರು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ನಂತರ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಇಳಿಕೆಯಾಗಲಿದೆ ಎಂದು ತಿಳಿಸಿದೆ.
ನವದೆಹಲಿ ಹವಾಮಾನದ ವಿವರ: ನವದೆಹಲಿಯಲ್ಲಿ ನಿನ್ನೆ (ನವೆಂಬರ್ 13) ದೇಶದಲ್ಲೇ ಅತ್ಯಂತ ಕಳಪೆ ಮಟ್ಟದ ಗಾಳಿ ದಾಖಲಾಗಿದೆ.












Click it and Unblock the Notifications