Weather Report: ಮುಂದಿನ ಎರಡು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
Weather Report: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇಂದು (ನವೆಂಬರ್ 13) ದೇಶದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಪುದುಚೇರಿ, ಕಾರೈಕಲ್, ಕೇರಳ, ಕರಾವಳಿ ಆಂಧ್ರಪ್ರದೇಶದ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಮಿಳುನಾಡಿನ ಪುದುಚೇರಿ, ಕಾರೈಕಲ್, ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಲಕ್ಷದ್ವೀಪ, ಅಂಡಮಾನ್, ನಿಕೋಬಾರ್ ದ್ವೀಪಗಳು, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪಶ್ಚಿಮ ಬಂಗಾಳ, ಸಿಕ್ಕಿಂ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಉತ್ತರ ಒಳನಾಡಿನ ಕರ್ನಾಟಕದಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಉತ್ತರ & ದಕ್ಷಿಣ ಭಾರತದ ಪ್ರತ್ಯೇಕ ಭಾಗಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ.
ಗುರುವಾರ (ನವೆಂಬರ್ 14) ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ದಕ್ಷಿಣ ಕರ್ನಾಟಕದಾದ್ಯಂತ ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ, ಗೋವಾ, ಮಹಾರಾಷ್ಟ್ರ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲೂ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಇನ್ನು
ಪಶ್ಚಿಮ ಲಡಾಖ್, ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮ ಕವಿದ ವಾತಾವರಣ ಇರಲಿದ್ದು, ಇದರ ನಡುವೆಯೇ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತವು ಈ ವಾರದ ಅಂತ್ಯದ ವೇಳೆಗೆ ಅರಬ್ಬಿ ಸಮುದ್ರವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ದಕ್ಷಿಣ ಭಾರತದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಉತ್ತರ ಭಾರತದಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications