Weather Forecast: ಈ ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆ ಮುನ್ಸೂಚನೆ

Weather Forecast: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇದೀಗ ಮತ್ತೆ ಕೆಲವು ಪ್ರದೇಶಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಕೆಲವು ದಿನಗಳ ಕಾಲ ದೇಶದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಉತ್ತರ ಪ್ರದೇಶದಲ್ಲಿ ಮೋಡ ಮುಸುಕಿದ ವಾತಾರಣ ಇರದಲಿದ್ದು, ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ರಾಷ್ಟ್ರದಾದ್ಯಂತ ಗಾಳಿಯ ಗುಣಮಟ್ಟ ತುಂಬಾ ಕಳಪೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Heavy rainfall forecast in these states for Next two days from November 4

ಮಂಗಳವಾರ (ನವೆಂಬರ್ 5) ಈಶಾನ್ಯ ಭಾರತದ ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ. ಈಗಾಗಲೇ ದಕ್ಷಿಣ ಕೇರಳದ ಕರಾವಳಿಯ ಸಮೀಪ ಆಗ್ನೇಯ ಅರಬ್ಬೀ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಯು ಕಡಿಮೆಯಾಗಿದೆ. ಬದಲಾಗಿ ತಾಪಮಾನ ಏರಿಕೆಯಾಗುತ್ತಲಿದೆ. ಇನ್ನು ಮುಂಬರುವ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ ಎರಡು ದಿನಗಳ ಕಾಲ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ, ಕರ್ನಾಟಕದ ದಕ್ಷಿಣ ಒಳನಾಡು, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾ, ಕೇರಳದಲ್ಲಿ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅದರಲ್ಲೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರದೇಶದ ಅಲ್ಲಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.

ಇನ್ನು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 9ರ ಬಳಿಕ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ತಿಳಿಸಿದೆ.

ಈಗಾಗಲೇ ಭಾರೀ ಮಳೆಯಿಂದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು, ಜಲಾಶಯಗಳು ಭರ್ತಿಯಾಗಿದ್ದು, ಇದರಿಂದ ಅನ್ನದಾತನ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

2023ರಲ್ಲಿ ಕೈಕೊಟ್ಟ ಕಾರಣ ಜಲಮೂಲಗಳೆಲ್ಲ ಬತ್ತಿಹೋಗುವ ಹಂತವನ್ನು ತಲುಪಿದ್ದವು. ಅಲ್ಲದೆ, ಬೆಳೆದ ಬೆಳೆಗಳೆಲ್ಲವು ಸೂರ್ಯನ ಶಾಖಕ್ಕೆ ಮುದುಡಿಹೋಗಿ ಅನ್ನದಾತನ ಕಂಗಾಲಾಗಿದ್ದ. ಆದರೆ 2024 ಜೂನ್‌ ಆರಂಭವಾಗುತ್ತಿದ್ದಂತೆ ಮುಂಗಾರು ಮಳೆ ಆರ್ಭಟಿಸಿದ್ದು, ಇದರಿಂದ ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+