ಮುಂದಿನ 7 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ ತಿಳಿಯಿರಿ

ದೇಶದ ಹಲವೆಡೆ ಮಳೆರಾಯನ ಮತ್ತೆ ತನ್ನ ಆರ್ಭಟವನ್ನು ಶುರು ಮಾಡಿದ್ದಾನೆ. ಹಾಗೆಯೇ ಮುಂದಿನ 7 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ದೇಶದ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಇಂದು (ಸೆಪ್ಟೆಂಬರ್‌ 25) ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕದ, ಕರ್ನಾಕದ ದಕ್ಷಿಣ ಒಳನಾಡಿನ ಜಿಲ್ಲೆಗಳು, ಗುಜರಾತ್, ಅಸ್ಸಾಂ, ಮೇಘಾಲಯ, ಮಧ್ಯಪ್ರದೇಶಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

Heavy rainfall forecast in These states next one week from September 25

ಮುಂದಿನ ಮೂರು ದಿನಗಳ ಕಾಲ ಕರಾವಳಿ ಕರ್ನಾಟಕದ ಅಲ್ಲಲ್ಲಿ, ದಕ್ಷಿಣ ಒಳನಾಡು, ಲಕ್ಷದ್ವೀಪ, ಕೇರಳ ಕರಾವಳಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ತಮಿಳುನಾಡಿನ ಪುದುಚೇರಿ, ಕಾರೈಕಲ್, ಆಂಧ್ರಪ್ರದೇಶದ ರಾಯಲಸೀಮಾದಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಸೆಪ್ಟೆಂಬರ್ 25ರಂದು ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 25, 29 ಮತ್ತು 30ರಂದು ಕೇರಳ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಪಶ್ಚಿಮ ಭಾರತದ ಹವಾಮಾನದ ವಿವರ: ಮುಂದಿನ ಮೂರು ದಿನಗಳಲ್ಲಿ ಕೊಂಕಣ, ಗೋವಾ, ಗುಜರಾತ್, ಮಧ್ಯ ಮಹಾರಾಷ್ಟ್ರದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 25ರಿಂದ 28ರವರೆಗೆ ಸೌರಾಷ್ಟ್ರ ಮತ್ತು ಕಚ್‌ನಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಇದೇ ವೇಳೆ ಗೋವಾ, ಮಧ್ಯ ಮಹಾರಾಷ್ಟ್ರ, ಸೆಪ್ಟೆಂಬರ್ 26ರಂದು ಗುಜರಾತ್‌ನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಮೂರಿಂದ ನಾಲ್ಕು ದಿನಗಳ ಕಾಲ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 25-27 ರವರೆಗೆ ಮಧ್ಯಪ್ರದೇಶದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ಏಳು ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್‌ನಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಮೂರು ದಿನಗಳಲ್ಲಿ ಒಡಿಶಾದಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭಾಗಗಳಲ್ಲಿ ಮುಂದಿನ ಒಂದು ವಾರ ಇದೇ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.

ಸೆಪ್ಟೆಂಬರ್ 25 ಮತ್ತು 26ರಂದು ಅಸ್ಸಾಂ ಮತ್ತು ಮೇಘಾಲಯ, ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 25ರಿಂದ 29ರ ವರೆಗೆ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಬಿಹಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ವಾಯುವ್ಯ ಭಾರತದ ಹವಾಮಾನ: ಸೆಪ್ಟೆಂಬರ್ 27ರಿಂದ 29ರವರೆಗೆ ಪೂರ್ವ ಉತ್ತರ ಪ್ರದೇಶದಲ್ಲಿ ಪ್ರತ್ಯೇಕವಾಗಿ ಅಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 26ರಂದು ಹಿಮಾಚಲ ಪ್ರದೇಶ, ಸೆಪ್ಟೆಂಬರ್ 26 ಮತ್ತು 27ರಂದು ಉತ್ತರಾಖಂಡ, ಸೆಪ್ಟೆಂಬರ್ 28ರಂದು ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+