Heavy Rain: ನಾಳೆ ಈ ಭಾಗಗಳಲ್ಲಿ ಸುರಿಯಲಿದೆ ಬಿರುಗಾಳಿ ಮಳೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ
Heavy Rain: ಈಗಾಗಲೇ ಮುಂಗಾರು ಮಳೆಯಿಂದ ದೇಶದ ಹಲವು ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದೆ. ಇದೀಗ ಮತ್ತೆ ಮಳೆರಾಯ ಮತ್ತೆ ತನ್ನ ಆರ್ಭಟವನ್ನು ಮುಂದುವರೆದಿದ್ದಾನೆ. ಹಾಗೆಯೇ ಅಕ್ಟೋಬರ್ 22ರಂದು ಈ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ದೇಶದ ಹಲವೆಡೆ ಮತ್ತೆ ಮಳೆರಾಯ ಆರ್ಭಟ ಶುರು ಮಾಡಿದ್ದಾನೆ. ಇನ್ನು ಹವಾಮಾನ ಇಲಾಖೆಯ ಪ್ರಕಾರ, ಅಕ್ಟೋಬರ್ 22ರಂದು ಅಂದರೆ ಮಂಗಳವಾರ ಕೇರಳ, ತಮಿಳಿನಾಡು, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹಾಗೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
2023ರಲ್ಲಿ ಮುಂಗಾರು ಕೈಕೊಟ್ಟು ಮಳೆ ಇಲ್ಲದ ಹಿನ್ನೆಲೆ ಬಹುತೇಕ ರಾಜ್ಯಗಳಲ್ಲಿ ಬರ ಆವರಿಸಿದ್ದು, ಇದರಿಂದ ಜನರು, ಅನ್ನದಾತರು ಕಂಗಾಲಾಗಿದ್ದರು. ಇನ್ನೂ ಈ ಬಾರಿ ಅಂದರೆ 2024ರ ಜೂನ್‌ನಲ್ಲಿ ಮೊದಲು ಕೇರಳಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಳಿಕ ಕರ್ನಾಟಕಕ್ಕೆ ಆಗಮಿಸಿತ್ತು. ನಂತರ ದೇಶಾದ್ಯಂತ ಆವರಿಸಿಬಿಟ್ಟಿತ್ತು. ಈ ಹಿನ್ನೆಲೆ ನದಿ, ಹಳ್ಳ-ಕೊಳ್ಳಗಳು ಸೇರಿದಂತೆ ಪ್ರಮುಖ ಜಲಾಶಯಗಳು ತುಂಬಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.












Click it and Unblock the Notifications