Heavy Rain: ಅಕ್ಟೋಬರ್ 25ರ ವರೆಗೆ ಈ ಭಾಗಗಳಲ್ಲಿ ಬಿರುಗಾಳಿ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
Heavy Rain: ಈಗಾಗಲೇ ಮುಂಗಾರು ಮಳೆ ದೇಶದ ಹಲವೆಡೆ ಅಬ್ಬರಿಸಿ ಬೊಬ್ಬರೆದು ಅವಾಂತರಗಳನ್ನೇ ಸೃಷ್ಟಿಸಿದೆ. ಕೆಲವು ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಹಲವು ರಾಜ್ಯಗಳಲ್ಲಿ ತನ್ನ ಆರ್ಭಟವನ್ನು ಶುರು ಮಾಡಿದ್ದಾನೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾಗರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೀಹ ಉತ್ತರ ಭಾರತದಾದ್ಯಂತ ತಂಪಾದ ವಾತಾವರಣ ನಿರ್ಮಾಣವಾಗಲಿದ್ದು, ಬಿಸಿಲಿನ ಪ್ರಮಾಣ ಹೆಚ್ಚಾಗಲಿದೆ. ಆದರೆ, ದಕ್ಷಿಣ ಭಾಗದಲ್ಲಿ ಮಾತ್ರ ಇನ್ನೂ ಕೆಲವು ದಿನಗಳವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಗಂಟೆಗೆ 35-45 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಹಿನ್ನೆಲೆ ಮೀನುಗಾರರು ಅರಬ್ಬಿ ಸಮುದ್ರಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ.

ನವದೆಹಲಿಯಲ್ಲಿ ಅಕ್ಟೋಬರ್ ಆರಂಭದಲ್ಲಿ ತಾಪಮಾನ ಪ್ರಮಾಣದಲ್ಲಿ ಏರಿಕೆಯಾಗುತ್ತಾ ಬಂದಿದೆ. ಇನ್ನು ಅಕ್ಟೋಬರ್ 25ರ ವೇಳೆಗೆ ದೇಶದ ಕೆಲವು ಭಾಗಗಳಲ್ಲಿ ಶೀತದ ವಾತಾವರಣ ನಿರ್ಮಾಣ ಆಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ನವದೆಹಲಿಯಲ್ಲಿ ಇಂದಿನ ಗರಿಷ್ಠ ತಾಪಮಾನವು 34 °C ಮತ್ತು ಕನಿಷ್ಠ 19 °C ತಲುಪಿದೆ ಎಂದು ತಿಳಿಸಿದೆ.
ಯೆಲ್ಲೋ ಅಲರ್ಟ್ ಘೋಷಣೆ: ಇಂದು (ಅಕ್ಟೋಬರ್ 20) ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭಾಗದಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ, ಮತ್ತು ಕರ್ನಾಟಕದ ಕೆಲವು ಭಾಗಗಳು, ಗುಜರಾತ್, ಮಹಾರಾಷ್ಟ್ರ, ಗೋವಾ ಸೇರಿದಂತೆ ಇತರ ರಾಜ್ಯಗಳ ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ 5 ದಿನ ಭಾರೀ ಮಳೆ: ಅಕ್ಟೋಬರ್ 21ರಿಂದ 25ರ ವರೆಗೆ ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಭಾರೀ ಮಳೆ ಎಚ್ಚರಿಕೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.












Click it and Unblock the Notifications