Weather Forecast: ಮುಂದಿನ ಮೂರು ದಿನ ಗಡುಗು ಸಹಿತ ಭಾರೀ ಮಳೆ ಮುನ್ಸೂಚನೆ
Weather Forecast: ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಅಬ್ಬರದ ಮಳೆಯಾಗಿದೆ. ಇದೀಗ ಮತ್ತೆ ಹಲವು ಭಾಗಗಳಲ್ಲಿ ಮತ್ತೆ ಮಳೆರಾಯ ತನ್ನ ಆರ್ಭಟ ಶುರು ಮಾಡಿದ್ದಾನೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಇಂದು (ಅಕ್ಟೋಬರ್ 30) ತಮಿಳುನಾಡಿನ ರಾಜಧಾನಿ ಚೈನ್ನೈ, ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಇಲ್ಲಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ದೇಶದ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವೆಂಬರ್ 3ರ ವರೆಗೂ ಭಾರೀ ಮಳೆ: ಇಂದಿನಿಂದ ನವೆಂಬರ್ 3ರ ವರೆಗೂ ಕೇರಳ, ತಮಿಳುನಾಡಿನ ಪುದುಚೇರಿ, ಕಾರೈಕಲ್, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ರಾಜ್ಯದ ಅಲ್ಲಲ್ಲಿ ಪ್ರತ್ಯೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಅಕ್ಟೋಬರ್ 30, 31 ರಂದು ಕರಾವಳಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಎಲ್ಲೆಲ್ಲಿ ಮಳೆ.?: ಇಂದು (ಅಕ್ಟೋಬರ್ 30) ಸಂಜೆ ವೇಳೆಗೆ ಅರುಣಾಚಲ ಪ್ರದೇಶ, ಮಣಿಪುರ, ತ್ರಿಪುರಾ, ಮಿಜೋರಾಂ, ಅಸ್ಸಾಂ, ನಾಗಾಲ್ಯಾಂಡ್, ಮೇಘಾಲಯ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ, ಸಿಕ್ಕಿಂ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ಗೋವಾ, ತಮಿಳುನಾಡು, ಕರ್ನಾಟಕ, ಕೇರಳ, ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ, ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಅಕ್ಟೋಬರ್ 30 ಮತ್ತು 31ರಂದು ತಮಿಳುನಾಡಿನ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಳ್ಳೂರು, ಕಡಲೂರು, ಮೈಲಾಡುತುರೈ, ನಾಗಪಟ್ಟಣಂ, ಪುದುಕ್ಕೊಟ್ಟೈ, ತಂಜಾವೂರು, ತಿರುವರೂರ್, ಶಿವಗಂಗಾ ಮತ್ತು ರಾಮನಾಥಪುರಂ ಸೇರಿದಂತೆ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಗುರುವಾರ (ಅಕ್ಟೋಬರ್ 31) ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮೇಘಾಲಯ, ಸಿಕ್ಕಿಂ, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ದಕ್ಷಿಣ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications