Heavy Rain: ಮುಂದಿನ ಎರಡು ದಿನ ಗುಡುಗು ಸಹಿ ಭಾರೀ ಮಳೆ ಮುನ್ಸೂಚನೆ
Heavy Rain: ಈಗಾಗಲೇ ಭಾರೀ ಮಳೆಯಿಂದ ಬಹತೇಕ ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನೂ ಇದೀಗ ಮತ್ತೆ ಹಲವೆಡೆ ಮಳೆ ಚುರಕು ಪಡೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಹಲವು ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇಂದು (ಅಕ್ಟೋಬರ್ 31) ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮೇಘಾಲಯ, ಸಿಕ್ಕಿಂ, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ದಕ್ಷಿಣ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ನೀಡಿದೆ.

ಜಾರ್ಖಂಡ್, ಬಿಹಾರ, ಛತ್ತೀಸ್‌ಗಢ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾದಲ್ಲಿ ಸಾಧಾರಣ ಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಶುಕ್ರವಾರ (ನವೆಂಬರ್ 1) ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ತೆಲಂಗಾಣ, ದಕ್ಷಿಣ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡುಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಿದೆ. ಇನ್ನು ಮನ್ನಾರ್ ಕೊಲ್ಲಿಯಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಉತ್ತರ ಅಸ್ಸಾಂನಲ್ಲಿ ಗುರುವಾರ ಮತ್ತು ಶುಕ್ರವಾರದವರ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ತಾಪಮಾನವು ಸರಾಸರಿಗಿಂತ ಹೆಚ್ಚಾಗಿರುತ್ತದೆ ಅಂತಲೂ ಮುನ್ಸೂಚನೆ ನೀಡಿದೆ.
ರಾಜಸ್ಥಾನದ ಹವಾಮಾನ ವಿವರ: ಮುಂದಿನ ಕೆಲವು ದಿನಗಳವರೆಗೆ ರಾಜಸ್ಥಾನದಾದ್ಯಂತ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಇನ್ನು ಇಲ್ಲಿನ ಅನೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನದ ಪ್ರಮಾಣ 40 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಲಿದೆ ಎಂದು ತಿಳಿಸಿದೆ.
ಜೈಪುರದ ಹವಾಮಾನ ಕೇಂದ್ರದ ಪ್ರಕಾರ, ಬುಧವಾರ ಬೆಳಗ್ಗೆವರೆ 24 ಗಂಟೆಗಳಲ್ಲಿ ರಾಜ್ಯದಲ್ಲಿ ಎಲ್ಲಿಯೂ ಮಳೆಯಾದ ಬಗ್ಗೆ ವರದಿಯಾಗಿಲ್ಲ. ಗರಿಷ್ಠ ತಾಪಮಾನ 39.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ತಿಳಿದುಬಂದಿದೆ. ನಂತರ ಫತೇಪುರ್, ಬಾರ್ಮರ್ ಮತ್ತು ಜೈಸಲ್ಮೇರ್‌ಗಳಲ್ಲಿ ತಾಪಮಾನದ ಪ್ರಮಾಣ 39 ಡಿಗ್ರಿವರೆಗೂ ತಲುಪಿದೆ ಎಂದು ತಿಳಿದುಬಂದಿದೆ.
ಇನ್ನು ಅಕ್ಟೋಬರ್ ಮುಗಿದು ಮುಂದಿನ ದಿನಗಳಲ್ಲಿ ವಾತಾವರಣ ಹೇಗಿರುತ್ತದೆ ಎಂಬ ಕುತೂಹಲ ಹೆಚ್ಚುತ್ತಿದೆ. ಈ ತಿಂಗಳು ಮುಗಿಯುತ್ತುದ್ದಂತೆ ಚಳಿಗಾಲ ಆರಂಭವಾಗಲಿದೆ. ಆದರೆ, ಈ ವರ್ಷ ಸರಾಸರಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದ ಪ್ರಮಾಣವನ್ನು ನೋಡುವುದಾದರೆ, ಭಾರತೀಯ ಹವಾಮಾನ ಇಲಾಖೆ ದತ್ತಾಂಶದ ಪ್ರಕಾರ, ನವದೆಹಲಿಯಲ್ಲಿ ಅಕ್ಟೋನಬರ್ 2011ರಕ್ಕಿಂತಲೂ ಈ ಬಾರಿ ಹೆಚ್ಚು ಬೆಚ್ಚಗಿನ ವಾತಾರಣ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ.
ನವದೆಹಲಿಯಲ್ಲಿ ಬುಧವಾರದಂದು ದೀಪಾವಳಿಯ ಮುನ್ನಾದಿನದಂದು 36.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ತಿಂಗಳಲ್ಲಿ ದಾಖಲಾದ ಎರಡನೇ ಅತಿ ಹೆಚ್ಚು ತಾಪಮಾನ ಎಂದು ಗುರುತಿಸಲಾಗಿದೆ. ಇದು ಹವಾಮಾನ ಇಲಾಖೆ ಪ್ರಕಾರ ಸಾಮಾನ್ಯಕ್ಕಿಂತ 5.1 ಡಿಗ್ರಿ ಹೆಚ್ಚಾಗಿದೆ. ಅಕ್ಟೋಬರ್ 19ರಂದು ತಿಂಗಳ ಗರಿಷ್ಠ ತಾಪಮಾನ 36.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದಕ್ಕೆ ಹೋಲಿಕೆ ಮಾಡಿದರೆ, ಅಕ್ಟೋಬರ್ 2011ರ ಸರಾಸರಿ ಗರಿಷ್ಠ ತಾಪಮಾನ 33.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಆಗಿದೆ.
ಹವಾಮಾನ ಇಲಾಖೆ ಪ್ರಕಾರ, ಅಕ್ಟೋಬರ್ 2ರಂದು ಸಫ್ದರ್‌ಜಂಗ್ ವೀಕ್ಷಣಾಲಯವು 37.2 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದೆ. ಇದು ಕಳೆದ 10 ವರ್ಷಗಳಲ್ಲಿ ಅಕ್ಟೋಬರ್ ತಿಂಗಳಲ್ಲಿ ದಾಖಲಾದ ಗರಿಷ್ಠ ತಾಪಮಾನವಾಗಿದೆ. ನವೆಂಬರ್ 3ರಿಂದ ಮತ್ತೆ ತಾಪಮಾನದಲ್ಲಿ ಕುತಿತ ಕಾಣುತ್ತಾ ಬಂದಿದೆ.












Click it and Unblock the Notifications