Heavy Rain: ಮುಂದಿನ 4 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
Heavy Rain: ಈಗಾಗಲೇ ದೇಶಾದ್ಯಂತ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಕೆಲವು ದಿನಗಳ ಬಳಿಕ ಮತ್ತೆ ಮಳೆ ಚುರುಕು ಪಡೆದು, ಮತ್ತೆ ಇದೀಗ ತಗ್ಗಿದೆ. ಇನ್ನು ಮುಂದಿನ 4 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ (ನವೆಂಬರ್ 6) ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಸುರಿಯಲಿದೆ. ಮತ್ತೊಂದೆಡೆ ಪೂರ್ವ ಉತ್ತರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಅಲ್ಲದೆ, ರಾಷ್ಟ್ರದಾದ್ಯಂತ ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ತಲುಪುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

ನವೆಂಬರ್ 7ರಂದು ಈಶಾನ್ಯ ಭಾರತದ ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಉತ್ತರ ಪ್ರದೇಶದಲ್ಲಿ ಬೆಳಗಿನ ಸಮಯದಲ್ಲಿ ಮಂಜು ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನಗನು ಚಂಡಮಾರುತದ ಪರಿಚಲನೆಯು ಪ್ರಸ್ತುತ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ನೆಲೆಗೊಂಡಿದೆ. ಈ ಹಿನ್ನೆಲೆ ದಕ್ಷಿಣ ತಮಿಳುನಾಡಿಗೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ನವೆಂಬರ್ 5ರಿಂದ 6ರ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪ್ರತ್ಯೇಕವಾದ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 8 ಮತ್ತು 10ರ ವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಭಾರೀ ಮಳೆ ಮುನ್ಸೂಚನೆ: ನವೆಂಬರ್ 9ರ ಬಳಿಕ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ತಿಳಿಸಿದೆ.
ಇನ್ನು ಕಾರ್ಕಳ, ಶಿರಾಲಿ, ಧರ್ಮಸ್ಥಳ, ಕೊಟ್ಟಿಗೆಹಾರ, ಭಾಗಮಂಡಲ, ಉಪ್ಪಿನಂಗಡಿ, ಪುತ್ತೂರು, ಉಡುಪಿ, ಮಾಣಿ, ಸೋಮವಾರಪೇಟೆ, ಪೊನ್ನಂಪೇಟೆ, ಶೃಂಗೇರಿಯಲ್ಲಿ ನಿನ್ನೆ ಮಳೆಯಾಗಿದೆ. ಕಾರವಾರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಎಚ್ಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications