Weather Forecast: ನವೆಂಬರ್ 25ರ ವರೆಗೂ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದೆ. ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5 ದಿನಗಳಲ್ಲಿ ರಾತ್ರಿ ಮತ್ತು ಮುಂಜಾನೆ ಸಮಯದಲ್ಲಿ ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಂತಹ ರಾಜ್ಯಗಳಲ್ಲಿ ಇದೇ ವಾತಾವರಣ ಮುಂದುವರೆಯಲಿದ್ದು, ವಾಹನ ಸವಾರರ ಮೇಲೆ ಹೆಚ್ಚಾಗಿ ಪರಿಣಾಮ ಬೀರಲಿದ ಎಂದು ತಿಳಿಸಿದೆ.

Heavy rainfall forecast in these states till November 25

ನವೆಂಬರ್ 19ರ ರಾತ್ರಿಯಿಂದ 20ರ ಮುಂಜಾನೆರೆಗೂ ಉತ್ತರ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆ ಹೆಚ್ಚಿದೆ. ನವೆಂಬರ್ 21ರಿಂದ 24ರ ವರೆಗೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ರಾತ್ರಿ ಮತ್ತು ಬೆಳಗ್ಗೆ ಸಮಯದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನವೆಂಬರ್ 22ರ ವರೆಗೆ ಹಿಮಾಚಲ ಪ್ರದೇಶದಲ್ಲಿ ರಣಭೀಕರ ಚಳಿ ನಡುವೆ ದಟ್ಟವಾದ ಮಂಜಿನ ವಾತಾವರಣ ಇರಲಿದೆ. ಇನ್ನು ಈ ಸಮಯದಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?: ಇಂದು (ನವೆಂಬರ್ 20) ಈಶಾನ್ಯ ಮತ್ತು ದಕ್ಷಿಣ ಭಾರತದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ತಮಿಳುನಾಡಿನ ಪುದುಚೇರಿ, ಕಾರೈಕಲ್, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ನವೆಂಬರ್ 25ರ ವರೆಗೂ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನವೆಂಬರ್ 23ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಲಿದ್ದು, ಇದರ ಪರಿಣಾಮ ಈ ವೇಳೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರದೇಶಗಳಲ್ಲಿ ವಾರವಿಡೀ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು (ನವೆಂಬರ್ 20) ಅಸ್ಸಾಂ ಮತ್ತು ಮೇಘಾಲಯದಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ನವೆಂಬರ್ 20ರಿಂದ 22ರವರೆಗೆ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ನವದೆಹಲಿಯ ಹವಾಮಾನದ ವಿವರ: ಇಂದು (ನವೆಂಬರ್ 20) ನವದೆಹಲಿಯಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ಜೊತೆಗೆ ಗಾಳಿಯ ಗುಣಮಟ್ಟ ಕಳಪೆಯಾಗಿರಲಿದ್ದು, ಇದು ವಾಹನ ಸವಾರರ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಅಂತಲೂ ತಿಳಿಸಿದೆ. ಇನ್ನು ಕನಿಷ್ಠ ತಾಪಮಾನ 12, ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಈಗಾಗಲೇ ನಿನ್ನೆ (ನವೆಂಬರ್ 19 ಮಂಗಳವಾರ) ದೆಹಲಿಯಲ್ಲಿ ಹಗಲಿನ ವೇಳೆ 25.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಸಾಮಾನ್ಯ ದಿನಗಳಿಗಿಂತ ಕಡಿಮೆಯಾಗಿದೆ. ಮತ್ತೊಂದೆಡೆ ಗಾಳಿಯ ಗುಣಮಟ್ಟ ಕೂಡ ತೀವ್ರ ಹದಗೆಟ್ಟಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಶ್ಚಿಮ ಬಂಗಾಳದ ಹವಾಮಾನದ ವಿವರ: ಹವಾಮಾನ ಇಲಾಖೆ ಪ್ರಕಾರ, ಮಂಗಳವಾರ ಪಶ್ಚಿಮ ಬಂಗಾಳದ ಹಲವಾರು ಭಾಗಗಳಲ್ಲಿ ತಾಪಮಾನ ಪ್ರಮಾಣದಲ್ಲಿ ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾಗಿದೆ. ಮುಂಬರುವ ದಿನಗಳಲ್ಲಿ ಗಂಗಾನದಿಯ ಬಯಲು ಪ್ರದೇಶಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.

ಕೋಲ್ಕತ್ತಾದಲ್ಲಿ ಮಂಗಳವಾರ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ. ಸಾಮಾನ್ಯಕ್ಕಿಂತ ಸುಮಾರು ಎರಡು ಡಿಗ್ರಿ ಕಡಿಮೆಯಾಗಿದೆ. ಸೋಮವಾರ ಗರಿಷ್ಠ ತಾಪಮಾನ 27.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸರಾಸರಿಗಿಂತ 2.7 ಡಿಗ್ರಿ ಸೆಲ್ಸಯಸ್‌ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+