Weather Forecast: ಈ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ
Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಮುಂಗಾರು ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಲೇ ಸೃಷ್ಟಿಯಾಗಿವೆ. ಇನ್ನು ಇದೀಗ ಚಳಿಗಾಲ ಆರಂಭವಾಗಿದ್ದು, ಇದರ ನಡುವೆಯೇ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರಾಖಂಡ, ಹಿಮಾಚಲ ಪ್ರದೇಶ, ನವದೆಹಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ದಟ್ಟವಾದ ಮಂಜಿನ ಜೊತೆಗೆ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?: ನವೆಂಬರ್ 25ರಿಂದ 28ರ ವರೆಗೆ ತಮಿಳುನಾಡಿನ ಪುದುಚೇರಿ, ಕಾರೈಕಾಲ್‌ನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಇಂದು (ನವೆಂಬರ್ 24) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನವೆಂಬರ್ 26 ಮತ್ತು 27ರಂದು ಕೇರಳ, ಕರ್ನಾಟಕದ ಹಲವೆಡೆ, ಕರಾವಳಿ ಆಂಧ್ರ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂವನೆ ನೀಡಿದೆ.
ನವೆಂಬರ್ 25ರ ವೇಳೆಗೆ ಮಧ್ಯ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತರ ಅಲೆ ಮತ್ತೆ ತೀವ್ರತೆ ಪಡೆಯುವ ಸಾಧ್ಯತೆಯಿದ್ದು, ಇದು ತಮಿಳುನಾಡು, ಶ್ರೀಲಂಕಾ ಕಡೆಗೆ ಚಲಿಸಬಹುದು ಎಂದು ತಿಳಿಸಿದೆ. ಈ ಭಾಗಳಲ್ಲಿ ನವೆಂಬರ್ 25ರಿಂದ 27ರ ವರೆಗೆ ನಡುವೆ ಗಾಳಿಯ ವೇಗವು ಗಂಟೆಗೆ 55 ಕಿಲೋ ಮೀಟರ್ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಅಂಡಮಾನ್ ಸಮುದ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಹೋಗದಂತೆ ಸೂಚನೆ ನೀಡಲಾಗಿದೆ.
ನವದೆಹಲಿಯ ಹವಾಮಾನದ ವಿವರ: ದೆಹಲಿಯಲ್ಲಿ ಗಾಳಿಯ ಗುಣಮಟ್ಟವು ದಿನದಿಂದ ದಿನಕ್ಕೆ ಹದಗೆಡುತ್ತಲೇ ಇದೆ. ಮಂಜಿನ ಜೊತೆಗೆ ಹೊಗೆಯ ಪ್ರಮಾಣ ಹೆಚ್ಚಾಗಿರುವುದರಿಂದ ವಾಹನ ಸವಾರರು ರಸ್ತೆ ಕಾಣದಂತೆ ಪರದಾಡುವಂತಹ ಪರಿಸ್ಥಿನಿ ನಿರ್ಮಾಣವಾಗಿದೆ. ಶನಿವಾರ (ನವೆಂಬರ್ವ 23) ಗಾಳಿ ಗುಣಮಟ್ಟ ತೀವ್ರ ಕಳಪೆಯಾಗಿತ್ತು.
ಇನ್ನು ಭಾನುವಾರ (ನವೆಂಬರ್ 24) ಬೆಳಗ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ದೆಹಲಿಯಲ್ಲಿ AQI 422 ದಾಖಲಾಗಿದೆ ಎಂದು ತಿಳಿಸಿದೆ. ಆನಂದ್ ವಿಹಾರ್‌ನಂತಹ ಕೆಲವು ಹಾಟ್‌ಸ್ಪಾಟ್‌ಗಳು 450 ಅನ್ನು ಮೀರಿದೆ. ಒಂದು ವಾರದವರೆಗೆ, ರಾಜಧಾನಿಯ ಗಾಳಿಯ ಗುಣಮಟ್ಟವು 400ರ ಮಿತಿಯನ್ನು ಮೀರಿದೆ. ಇದು ಇಲ್ಲಿನ ನಿವಾಸಿಗಳ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದ ಎನ್ನುವ ಮಾಹಿತಿ ಲಭ್ಯವಾಗಿದೆ.











Click it and Unblock the Notifications