Heavy Rain: ಎರಡು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

Heavy Rain: ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆರಾಯ ಆರ್ಭಟ ಶುರು ಮಾಡಿದ್ದಾನೆ. ಈಗಾಗಲೇ ಭಾರೀ ಮಳೆಯಿಂದ ಕೆಲವೆಡೆ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನವದೆಹಲಿಯಲ್ಲಿನ ಗಾಳಿಯ ಗುಣಮಟ್ಟವು ಶುಕ್ರವಾರ ಅಲ್ಪ ಸುಧಾರಣೆ ಕಂಡಿದೆ. ಇನ್ನು ಅಕ್ಟೋಬರ್‌ ಅಂತ್ಯದಲ್ಲಿ ತಾಪಾಮನ ಪ್ರಮಾಣ ಸುಮಾರು 34 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

Heavy rainfall forecast in these states till october 27 IMD Prediction

ಶನಿವಾರ (ಅಕ್ಟೋಬರ್ 26) ಲಡಾಖ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡು, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಭಾನುವಾರ (ಅಕ್ಟೋಬರ್ 27) ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಹಾಗೆಯೇ ಅದೇ ದಿನ ಅಂದರೆ ನಾಳೆ ಕೇರಳ ಕರಾವಳಿ, ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, ಲಕ್ಷದ್ವೀಪ, ಅಸ್ಸಾಂ, ಮೇಘಾಲಯ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಅರುಣಾಚಲ ಪ್ರದೇಶದಲ್ಲಿಯೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ

ಎಲ್ಲೆಲ್ಲಿ ಭಾರಿ ಮಳೆ?: ಈಗಾಗಲೇ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ಡಾನಾ ಚಂಡಮಾರುತದ ಪ್ರಭಾವವು ದೇಶದ ಹಲವು ರಾಜ್ಯಗಳ ಮೇಲೆ ಪ್ರಭಾವ ಬೀರಿದ್ದು, ಇದರಿಂದ ಭಾರೀ ಮಳೆಯಾಗುತ್ತಿದೆ. ಗುರುವಾರ ಕೋಲ್ಕತ್ತಾ ಸೇರಿದಂತೆ ಇತರ ರಾಜ್ಯದಗಳಲ್ಲಿ ನಿರಂತರ ಮಳೆಯಾಗಿದೆ.

ಹಾಗೆಯೇ ಜಾರ್ಖಂಡ್‌ನ ಕೊಲ್ಹಾನ್‌ನ ಪಶ್ಚಿಮ ಸಿಂಗ್‌ಭೂಮ್, ಸೆರೈಕೆಲಾ-ಖಾರ್ಸಾವಾನ್ ಮತ್ತು ಪೂರ್ವ ಸಿಂಗ್‌ಭೂಮ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಈ ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿತ್ತು. ಅಲ್ಲದೆ, ಮಕ್ಕಳ ಹಿತದೃಷ್ಟಿಯಿಂದ ಅಕ್ಟೋಬರ್ 25ರಂದು ಈ ಜಿಲ್ಲೆಗಳಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗಿದ್ದು, ಭೂಕುಸಿತದಂತಹ ಘಟನೆಗಳು ಕೂಡ ಸಂಭವಿಸಿದವು. ಆದರೆ, ಯಾವುದೇ ಮೂಲಸೌಕರ್ಯ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಈ ಭಾಗಗಳಲ್ಲಿ ರೈಲು ಹಾಗೂ ವಿಮಾನಗಳ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಬಳಿಕ ಹಾವಾಮಾನ ನೋಡಿಕೊಂಡು ವಿಮಾನ ಮತ್ತು ರೈಲು ಕಾರ್ಯಾಚರಣೆಗಳನ್ನು ಪುನರಾರಂಭಿಸಲಾಗಿದೆ.

ಕೇರಳದಲ್ಲಿ ಭಾರೀ ಮಳೆ: ಇನ್ನು ಮುಂದಿನ ಎರಡು ದಿನ ದಕ್ಷಿಣ ಕರಾವಳಿಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತ ತೀವ್ರತೆ ಪಡೆದುಕೊಳ್ಳುವ ಮುನ್ಸೂಚನೆ ಹಿನ್ನೆಲೆ ಕೇರಳದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಅಕ್ಟೋಬರ್ 27ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಇನ್ನು ರಾಜ್ಯದ ಇತರ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಬೇರೆ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+