India Weather: ಸೆಪ್ಟೆಂಬರ್ 27ರ ವರೆಗೆ ಮಳೆ ಮುನ್ಸೂಚನೆ-ಇಲ್ಲಿದೆ ಮಾಹಿತಿ
India Weather: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆ ತಗ್ಗಿದೆ. ಕೆಲವೆಡೆ ಮಾತ್ರ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಸೆಪ್ಟೆಂಬರ್ 27ರ ವರೆಗೆ ಈ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಆಂಧ್ರಪ್ರದೇಶ ಮತ್ತು ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ ಸೆಪ್ಟೆಂಬರ್ 22ರಂದು ಅಂದರೆ ಇಂದಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಸೆಪ್ಟೆಂಬರ್ 23ರಿಂದ 27ರ ವರೆಗೆ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಧ್ಯಪ್ರದೇಶದಲ್ಲಿ ಮುಂದಿನ ಮೂರು ದಿನಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ: ಮುಂದಿನ ಒಂದು ವಾರ ಒಡಿಶಾ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭಾಗದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಇದೇ ವೇಳೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ ಮೂರು ದಿನಗಳ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ ಎಂದು ತಿಳಿಸಿದೆ.
ವಾಯುವ್ಯ ಮತ್ತು ಪಶ್ಚಿಮ ಭಾರತದ ಹವಾಮಾನ: ವಾಯುವ್ಯ ಭಾರತದಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ 23 ಮತ್ತು 24ರಂದು ಮರಾಠವಾಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಧ್ಯ ಮಹಾರಾಷ್ಟ್ರ, ಕೊಂಕಣ, ಗೋವಾ ಮತ್ತು ಗುಜರಾತ್‌ನಲ್ಲಿ ಸೆಪ್ಟೆಂಬರ್ 25ರಿಂದ 27ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಭಾರತದ ಹವಾಮಾನ: ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು ಕರ್ನಾಟಕ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಮುಂದಿನ ಕೆಲವು ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕಾರೈಕಲ್, ತೆಲಂಗಾಣ ಮತ್ತು ರಾಯಲಸೀಮಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.
ಈಗಾಗಲೇ ಭಾರೀ ಮಳೆಯಿಂದ ದೇಶದ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಬಳಿಕ ದೇಶಾದ್ಯಂತ ಹಬ್ಬಿಬಿಟ್ಟಿತ್ತು. ಆಗಸ್ಟ್‌ವರೆಗೆ ಅಬ್ಬರಿಸಿ ಬೊಬ್ಬರೆದು ಸುಮ್ಮನಾಗಿದ್ದ ಮಳೆರಾಯ ಇದೀಗ ದೇಶದ ಹಲವೆಡೆ ಮತ್ತ ಆರ್ಭಟ ಶುರು ಮಾಡಿದ್ದಾನೆ. ಈಗಾಗಲೇ ಭಾರೀ ಮಳೆಯಿಂದ ಪ್ರಮುಖ ಜಲಾಶಯಗಳು ತುಂಬಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ಮತ್ತೊಂದೆಡೆ ನೋಡುವುದಾದರೆ, ಭಾರೀ ಮಳೆಯಿಂದಾಗಿ ಬ್ರಿಡ್ಜ್‌ಗಳು ಕುಸಿದು ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆಗಳು ನಡೆದಿದ್ದವು. ಇನ್ನೂ ಕೆಲವೆಡೆ ಗುಡ್ಡ ಕುಸಿತ ಸಂಭವಿಸಿ ಅಪಾರ ಪ್ರಮಾಣದಲ್ಲಿ ಪ್ರಾಣಹಾನಿಗಳು ಕೂಡ ಸಂಭವಿಸಿದರು. ಇದಕ್ಕೆ ಉದಾಹರಣೆ ಕೇರಳದಲ್ಲಿ ಸಂಭವಿದ ಗುಡ್ಡ ಕುಸಿತದಿಂದಾಗಿ ತುಂಬಾ ಜನ, ಜಾನುವಾರುಗಳು ಸಾವನ್ನಪ್ಪಿದ್ದವು. ಇಷ್ಟರ ಮಟ್ಟಿಗೆ ಮಳೆರಾಯ ಅವಾಂತರ ಸೃಷ್ಟಿಸಿದ್ದಾನೆ.












Click it and Unblock the Notifications