ಭಾರತದ ಈ ರಾಜ್ಯಗಳಲ್ಲಿ ಮುಂದಿನ ಎರಡು ದಿನ ಮಳೆಯೋ ಮಳೆ
ನವದೆಹಲಿ, ಮೇ 03: ಭಾರತದ ಈಶಾನ್ಯ ರಾಜ್ಯಗಳು ಹಾಗೂ ಕೇರಳದ ದಕ್ಷಿಣ ಭಾಗ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ ಎರಡ್ಮೂರು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 3 ಮತ್ತು 4ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಕೇರಳದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅಲ್ಲದೇ ಮೇ 5ರಂದು ತಮಿಳುನಾಡು ಮತ್ತು ಪುದುಚೇರಿಯ ವಿವಿಧ ಪ್ರದೇಶಗಳಲ್ಲಿ ಮತ್ತು ಮೇ 4 ಮತ್ತು 7ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

'ಮೇ 03 ಮತ್ತು 04ರಂದು ಅಸ್ಸಾಂ-ಮೇಘಾಲಯ ಮತ್ತು ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೇ 3ರಂದು ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ' ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.
ಚಂಡಮಾರುತದ ಪ್ರಭಾವದ ಹಿನ್ನೆಲೆ ಮುಂದಿನ ಮೇ 4 ಮತ್ತು 5ರಂದು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ತದನಂತರದ ಮೇ 06 ಮತ್ತು 07 ರಂದು ಅಂಡಮಾನ್ ದ್ವೀಪಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

ಉತ್ತರ ಪ್ರದೇಶದಲ್ಲಿ ಬಿರುಗಾಳಿ, ಮಳೆ; ಉತ್ತರ ಪ್ರದೇಶದ ವಿವಿಧ ಸ್ಥಳಗಳಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗಿದೆ. ಮೇ 4ರಂದು ರಾಜ್ಯದ ಪ್ರದೇಶದಲ್ಲಿ ಸುಮಾರು 30-40 ಕಿ. ಮೀ. ವೇಗದ ಗಾಳಿಯೊಂದಿಗೆ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ.
ಪೂರ್ವ ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ ಮೇ 5 ಮತ್ತು ಮೇ 6ರಂದು ರಾಜ್ಯದ ಪಶ್ಚಿಮ ಭಾಗದಲ್ಲಿ ಒಣ ಹವಾಮಾನವಿರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.











Click it and Unblock the Notifications