India weather: ಕೇರಳ, ಪಶ್ಚಿಮ ಬಂಗಾಳ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ
ನವದೆಹಲಿ, ಮೇ. 28: ಚಂಡಮಾರುತ ರೆಮಾಲ್ ಕಾರಣದಿಂದಾಗಿ ಕೇರಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗಂಗಾನದಿ ಪಶ್ಚಿಮ ಬಂಗಾಳ ಮತ್ತು ಕರಾವಳಿ ಕರ್ನಾಟಕದ ಮೇಲೆ ಚದುರಿದ ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ.

ಕರ್ನಾಟಕದ ಒಳಭಾಗಗಳಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆ
ಒಡಿಶಾ, ಜಾರ್ಖಂಡ್, ಬಿಹಾರ, ಉತ್ತರಾಖಂಡ, ಕೊಂಕಣ ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ಒಳಭಾಗಗಳಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆ ಸುರಿಯಬಹುದು. ಚಂಡಮಾರುತ ರೆಮಾಲ್ ದುರ್ಬಲಗೊಳ್ಳುವುದರೊಂದಿಗೆ ಮಂಗಳವಾರ ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.
ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಮುಳುಗಲಿದೆ. ಸ್ಥಳೀಯ ಪ್ರವಾಹದಿಂದಾಗಿ ದುರ್ಬಲ ಕಟ್ಟಡಗಳು ಮತ್ತು ಗುಡಿಸಲು ಮತ್ತು ಚರಂಡಿ ಮತ್ತು ರಸ್ತೆ ಪಕ್ಕದ ಮನೆಗಳಿಗೆ ಹಾನಿಯನ್ನುಂಟುಮಾಡುತ್ತದೆ. ಎಲ್ಲಾ ಕಡೆಗೆ ಜಲಾವೃತದಿಂದ ಸಂಚಾರಕ್ಕೆ ಅಡ್ಡಿಯುಂಟುಮಾಡುತ್ತದೆ ಎಂದು ಐಎಂಡಿ ಎಚ್ಚರಿಸಿದೆ. ಈ ರಾಜ್ಯಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಮತ್ತು ಮಳೆ ಹಾನಿಯಿಂದ ತಪ್ಪಿಸುವಂತೆ ಹವಾಮಾನ ಸಂಸ್ಥೆ ಸಲಹೆ ನೀಡಿದೆ.
ಉತ್ತರ ಭಾರತದ ಕೆಲವೆಡೆ ತಾಪಮಾನ ಹೆಚ್ಚಳ
ಹರಿಯಾಣ, ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಒಡಿಶಾದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 45 ° C ಗಿಂತ ಹೆಚ್ಚಿರುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಪಶ್ಚಿಮ ಬಂಗಾಳ, ಗುಜರಾತ್, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನ ಕೆಲವು ಸ್ಥಳಗಳಲ್ಲಿ 40 ° C ಗಿಂತ ಹೆಚ್ಚು ಉಷ್ಣಾಂಶ ಇರಲಿದೆ ಎಂದಿದೆ.












Click it and Unblock the Notifications